ಪಿಎಸ್‌ಎಸ್‌ಕೆ ಗುತ್ತಿಗೆ ರದ್ದತಿಗೆ ಆಗ್ರಹ
Team Udayavani, Jun 9, 2020, 5:39 AM IST
ಮಂಡ್ಯ: ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಷುಗರ್ ನವರಿಗೆ 40 ವರ್ಷ ಗುತ್ತಿಗೆ ನೀಡಿರುವು ದನ್ನು ಸರ್ಕಾರ ರದ್ದುಪಡಿಸಿ, ಸರ್ಕಾರವೇ ಕಾರ್ಖಾನೆಯನ್ನು ಸುಸ್ಥಿರಗೊಳಿ ಸಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪರವಾಗಿ ಸುನಂದಾ ಜಯರಾಂ ಆಗ್ರಹಿಸಿದರು.
ಪಿಎಸ್‌ಎಸ್‌ಕೆ 11,900 ರೈತರ 805.85 ಲಕ್ಷ ರೂ. ಷೇರು ಬಂಡವಾಳ ಹೊಂದಿದೆ. ಸರ್ಕಾರ ಸಕ್ಕರೆ ಲಾಬಿಗೆ ಮಣಿದು ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಮಾಲೀಕತ್ವದ ಕಂಪನಿಗೆ 40 ವರ್ಷ ಗುತ್ತಿಗೆ ನೀಡಿರುವುದು ಜಿಲ್ಲೆಯ ರೈತರಿಗೆ ಮಾಡಿದ ದ್ರೋಹ ಎಂದು ಸುದ್ದಿ ಗೋಷ್ಠಿಯಲ್ಲಿ ಟೀಕಿಸಿದರು. ಸಿಎಂ ಜಿಲ್ಲೆಯ ಬಗ್ಗೆ ಭಾವನಾತ್ಮಕವಾಗಿ ಚಿಂತಿ ಸಿದ್ದರೆ ಗುತ್ತಿಗೆ ಕೊಡುವ ಕೆಲಸಕ್ಕೆ ಮುಂದಾಗುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ.
ಟೆಂಡರ್ ರದ್ದುಪಡಿಸ ಬೇಕು. ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿ ಅಭಿವೃದಿಪಡಿಸಬೇಕು. ಕಬ್ಬು ಅರೆಯುವ ಸಾಮರ್ಥ್ಯ ಹೆಚ್ಚಿಸಿ ಹಳೇ ಮೈಸೂರು ಭಾಗದ ಕಬ್ಬು ಬೆಳೆ ಗಾರರು ಮತ್ತು ನೌಕರರನ್ನು ಸಂರಕ್ಷಿಸ ಬೇಕು ಎಂದು ಆಗ್ರಹಿಸಿದರು. ರೈತರು ಬೆಳೆದಿರುವ ಕಬ್ಬನ್ನು ಜುಲೈನಲ್ಲಿಯೇ ನುರಿಸಬೇಕು. ರೈತರಿಗೆ ತೊಂದರೆ ಆಗಬಾರದು ಎಂದು ಈಗಾಗಲೇ ಎಲ್ಲ ಜನಪರ ಸಂಘಟನೆ ಗಳು ಪ್ರತಿಭಟನೆ ಮಾಡಿ, ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಒತ್ತಾಯಿಸಲಾಗಿದೆ.
ಆದ ಕಾರಣ ಕಬ್ಬು ಬೆಳೆಗಾರರು ಆತಂಕಕ್ಕೆ ಒಳಗಾಗಬೇಕಿಲ್ಲ. ಮೈಷು ಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಯಬೇಕು ಎನ್ನುವುದು ಎಲ್ಲರ ಪ್ರಯತ್ನವಾಗಬೇಕು ಎಂದರು. ಕೆ.ಬೋರಯ್ಯ, ಮುದ್ದೇಗೌಡ, ಇಂಡುವಾಳು ಚಂದ್ರಶೇಖರ್, ಎಂ.ಬಿ.ಶ್ರೀನಿ ವಾಸ್, ಸಿ.ಕುಮಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.