ಒಂದು ಜಿಪಂ, 18 ತಾಪಂ ಕ್ಷೇತ್ರ ಕಡಿತ
Team Udayavani, Jan 8, 2023, 4:36 PM IST
ಮಂಡ್ಯ: ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿರುವ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಸದಸ್ಯರ ಸಂಖ್ಯೆ ಇಳಿಸಿ ಸೀಮಾ, ಗಡಿ ನಿರ್ಣಯ ಮಾಡಿದೆ.
ಜಿಲ್ಲೆಯ ಜಿಪಂ ಹಾಗೂ ತಾಪಂ ಕ್ಷೇತ್ರಗಳ ವ್ಯಾಪ್ತಿ ಯೊಳಗಿರುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನಾಗಿ ವಿಂಗಡಿಸಿ ಅವುಗಳ ಸೀಮಾ/ಗಡಿಯನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರದ ಸಂಖ್ಯೆ ಹಾಗೂ ಗ್ರಾಮಗಳನ್ನೊಳಗೊಂಡ ಪ್ರದೇಶವನ್ನು ಚುನಾವಣಾ ಕ್ಷೇತ್ರದ ವ್ಯಾಪ್ತಿ ಎಂದು ನಿಗದಿಪಡಿಸಿದೆ.
ಆಕ್ಷೇಪಣೆಗೆ 15 ದಿನಗಳ ಅವಕಾಶ: ಜಿಪಂ ಹಾಗೂ ತಾಪಂ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಜ.16ರ ಸಂಜೆ 5ರೊಳಗೆ ಸಲ್ಲಿಸಲು ತಿಳಿಸಲಾಗಿದೆ. ಆನ್‌ಲೈನ್, ಖುದ್ದಾಗಿ ಹಾಗೂ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಜಿಪಂ ಒಂದು ಕ್ಷೇತ್ರ ಇಳಿಕೆ: ಮಂಡ್ಯ ಜಿಲ್ಲೆಯ ಜಿಪಂಗೆ ಕಳೆದ ಬಾರಿ 41 ಕ್ಷೇತ್ರಗಳಿದ್ದವು. ಪುನರ್‌ವಿಂಗಡಣೆ ನಂತರ ಒಂದು ಕ್ಷೇತ್ರ ಇಳಿಕೆ ಮಾಡಿ, ಒಟ್ಟು 40 ಕ್ಷೇತ್ರ ನಿಗದಿಪಡಿಸಿದೆ. ಮಂಡ್ಯ, ಮದ್ದೂರು, ಮಳವಳ್ಳಿ ತಲಾ 7, ಪಾಂಡವಪುರ 5, ಶ್ರೀರಂಗಪಟ್ಟಣ 4, ಕೆ.ಆರ್.ಪೇಟೆ 6 ಹಾಗೂ ನಾಗಮಂಗಲ 4 ಕ್ಷೇತ್ರಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ನಾಗಮಂಗಲದಲ್ಲಿ ಮೊದಲು 5 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಕಡಿತಗೊಳಿಸಲಾಗಿದೆ. ತಾಪಂ 18 ಕ್ಷೇತ್ರ ಕಡಿತ: ಕಳೆದ ಬಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಇದ್ದ ತಾಪಂ ಕ್ಷೇತ್ರಗಳನ್ನು 155 ರಿಂದ 137ಕ್ಕೆ ಇಳಿಸಲಾಗಿದೆ. ಇದರಿಂದ ಒಟ್ಟು 18 ಕ್ಷೇತ್ರ ಕಡಿತಗೊಳಿಸಲಾಗಿದೆ. ಮಂಡ್ಯ 28ರಿಂದ 24ಕ್ಕೆ ಇಳಿಸಲಾಗಿದೆ. ಅದರಂತೆ ಮದ್ದೂರು 27ರಿಂದ 23ಕ್ಕೆ, ಮಳವಳ್ಳಿ 25ರಿಂದ 21ಕ್ಕೆ, ಪಾಂಡವಪುರ 17, ಶ್ರೀರಂಗ ಪಟ್ಟಣ 16 ಕ್ಷೇತ್ರಗಳೇ ಯಥಾವತ್ತಾಗಿ ಮುದುವರಿಸಲಾಗಿದೆ. ಕೆ.ಆರ್.ಪೇಟೆ 24ರಿಂದ 20ಕ್ಕೆ ಹಾಗೂ ನಾಗಮಂಗಲ ತಾಲೂಕಿನಲ್ಲಿ 18ರಿಂದ 16ಕ್ಕೆ ಇಳಿಸಲಾಗಿದೆ.
ಎರಡನೇ ಬಾರಿ ವಿಂಗಡಣೆ: ಕಳೆದ ಬಾರಿ 2021ರಲ್ಲಿ ಪುನರ್ ವಿಂಗಡಣೆ ಮಾಡಿದ್ದ ಸಂದರ್ಭದಲ್ಲಿ ಜಿಪಂ ಕ್ಷೇತ್ರಗಳನ್ನು 5 ಕ್ಷೇತ್ರಗಳ ಏರಿಕೆ ಮಾಡಲಾಗಿತ್ತು. ಅದರಂತೆ ತಾಪಂ ಕ್ಷೇತ್ರಗಳನ್ನು 29ಕ್ಕೆ ಇಳಿಕೆ ಮಾಡಿ ನಿಗದಿಪಡಿಸಲಾಗಿತ್ತು. ಆದರೆ, ಈ ಬಾರಿ ಜಿಪಂ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರ, ತಾಪಂ 18 ಕ್ಷೇತ್ರಗಳ ಕಡಿತ ಮಾಡಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆ: 2021ರಲ್ಲಿಯೇ ಕ್ಷೇತ್ರಗಳ ಮರು ವಿಂಗಡಣೆ ಕಾರ್ಯ ನಡೆದಿತ್ತು. ಅದರಂತೆ ಜನಸಂಖ್ಯಾ ಆಧಾರದ ಮೇಲೆ ಜಿಪಂ, ತಾಪಂ ಕ್ಷೇತ್ರಗಳ ವಿಂಗಡಣೆ ಮಾಡಲಾಗಿತ್ತು. ತಾಲೂಕಿನ ಜಿಪಂ, ತಾಪಂ ಕ್ಷೇತ್ರಗಳ ಗಡಿ ಗುರುತಿಸಿ, ನಿಗದಿಪಡಿಸಿದ ಗಡಿ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಕಡಿಮೆಯಾದಲ್ಲಿ ಪಕ್ಕದ ಗ್ರಾಮಗಳನ್ನು ವಿಭಜಿಸದೇ ಸಂಪೂರ್ಣ ಸೇರಿಸಿಕೊಂಡು ಕ್ಷೇತ್ರ ನಿಗದಿಪಡಿಸಲಾಗಿತ್ತು. ಅಲ್ಲದೆ, ಭೌಗೋಳಿಕವಾಗಿ ಗ್ರಾಪಂಗಳನ್ನು ಸೇರಿಸಿಕೊಂಡು ಮತದಾರರ ಸಂಖ್ಯೆ ಹಾಗೂ ಗ್ರಾಮ ದೊಡ್ಡದಾಗಿದ್ದರೆ ಆ ಗ್ರಾಮವನ್ನೇ ಕ್ಷೇತ್ರವನ್ನಾಗಿ ಹೆಸರಿಡಬಹುದು. ತಾಲೂಕುಗಳಲ್ಲಿ ಕ್ಷೇತ್ರಗಳ ಬದಲಾವಣೆ ಇಲ್ಲದಿದ್ದರೆ ಆ ತಾಲೂಕಿನಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ ಎಂದು ಸೂಚಿಸಿತ್ತು. ಅದರಂತೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿ ವರದಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.