![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 27, 2020, 9:08 AM IST
ಮದ್ದೂರು: ಮುಂಬೈನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ರಾಜಗೃಹದ ಮೇಲೆ ದಾಳಿ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ತಾಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ದಲಿತ ಸಂಘಟನೆ, ರೈತ ಸಂಘ, ಜಯಕರ್ನಾಟಕ ಹಾಗೂ ಪ್ರಗತಿಪರ ಸಂಘಟನೆಗಳು ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮದ್ದೂರು-ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿದರು. ದಲಿತರ ಮೇಲೆ ನಿತ್ಯ ದೌರ್ಜನ್ಯ, ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಅಪಮಾನ ಮಾಡಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು, ಇಂತಹ ಮಹಾನ್ ವ್ಯಕ್ತಿಗೆ ಅಪಮಾನವೆಸಗಿರುವ ಕಿಡಿಗೇಡಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಇಂತಹ ಘಟನೆಗಳು ದೇಶದಲ್ಲಿ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾಲ್ಲಿ ದಲಿತ ಸಂಘಟನೆಗಳು ಪ್ರಗತಿಪರ ಸಂಘಟನೆಗಳ ಜತೆಗೂಡಿ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮನ್‌ಮುಲ್ ಮಾಜಿ ನಿರ್ದೇಶಕ ಕುಮಾರಕೊಪ್ಪ, ಕೀಳಘಟ್ಟ ನಂಜುಂಡಯ್ಯ, ಹುರುಗಲವಾಡಿ ರಾಮಯ್ಯ, ದಿವಾಕರ್, ರಮಾನಂದ, ಸುಶೀಲ್‌ಕುಮಾರ್, ಕೃಷ್ಣೇಗೌಡ, ಎಚ್. ಸ್ವಾಮಿ ಹಾಜರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.