ಹಕ್ಕೊತ್ತಾಯಗಳ ಜಾರಿಗಾಗಿ ಆಗ್ರಹ
Team Udayavani, Jun 2, 2020, 5:47 AM IST
ಮಂಡ್ಯ: ಉದ್ಯೋಗ, ಆಹಾರ ಮತ್ತು ಹಿಂಸೆ ತಡೆಗೆ ಒತ್ತಾಯಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರ ವಿರೋಧಿ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗಿದರು. ಮಹಿಳೆಯರ ಘನತೆಯ ಬದುಕಿಗಾಗಿ ಮಂಡಿಸಿರುವ ಹಕ್ಕೊತ್ತಾಯಗಳನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿದರು.
ಆದಾಯ ತೆರಿಗೆಯಿಂದ ಹೊರಗಿರುವ ಎಲ್ಲ ಕುಟುಂಬಗಳ ಖಾತೆಗೆ 7500 ರೂ. ಜಮೆ ಮಾಡುವು ದು. ಪ್ರತಿಯೊಬ್ಬರಿಗೂ ತಲಾ 10 ಕೆಜಿಯಂತೆ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ಉಚಿತವಾಗಿ ನೀಡಬೇಕು. ಆಹಾರ ಧಾನ್ಯಗಳ ಜೊತೆಗೆ ಇತರೆ ಜೀವ ನಾವಶ್ಯಕ ವಸ್ತುಗಳು, ಮಹಿಳೆಯರಿಗೆ ಸ್ಯಾನಿಟರಿ, ನ್ಯಾಪ್‌ಕಿನ್‌ಗಳನ್ನು ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ವಿತರಿಸುವಂತೆ ಒತ್ತಾಯಿಸಿದರು.
ಉದ್ಯೋಗಖಾತರಿ ಯೋಜನೆಯನ್ನು ನಗರ ಪಂಚಾಯ್ತಿಗಳಿಗೂ ವಿಸ್ತರಿಸುವುದು, ಕ್ವಾರಂಟೈನ್‌ಗೆ ಒಳಗಾದವರಿಗೆ ಮೂಲ ಸೌಲಭ್ಯ, ತುರ್ತು ಟೆಸ್ಟ್ ಮಾಡಿ ಅವಧಿ ಮುಗಿದವರನ್ನು ಗೌರವಯುತವಾಗಿ ಬಿಡುಗಡೆ ಮಾಡಬೇಕು. ಗರ್ಭನಿರೋಧಕ ಸಾಧನಗಳ ಉಚಿತ ವಿತರಣೆ, ಕೆಲಸ ಬಯಸುವ ಎಲ್ಲ ವಯಸ್ಕರರಿಗೆ ನರೇಗಾ ಅಡಿಯಲ್ಲಿ ಕನಿಷ್ಠ 200 ದಿನಗಳ ಮೇಲ್ಪಟ್ಟು ಕೆಲಸ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ, ಜಿಲ್ಲಾ ಕಾರ್ಯದರ್ಶಿ ಸುಶೀಲಾ, ಮಂಜುಳಾ, ಸುನೀತಾ, ಲತಾ, ಕೆ.ಎಸ್.ಸುನೀತಾ, ಚಂದ್ರಮ್ಮ, ರಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.