ಸಕಾಲದಲ್ಲಿ ಸಾಲ ಮರುಪಾವತಿಸಲು ಮನವಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹಕಾರ ಸಂಘದ ಸರ್ವ ಸದಸ್ಯರ ಸಭೆ
Team Udayavani, Jun 29, 2019, 4:03 PM IST
ಕೆ.ಆರ್.ಪೇಟೆ: ಸದಸ್ಯರು ಸಂಘದ ಸಾಲ ವನ್ನು ಸದ್ಭಳಕೆ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಿದರೆ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್ ಮನವಿ ಮಾಡಿದರು.
ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ತಿನ ಸಹಕಾರ ಸಂಘದ ಪ್ರಥಮ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದಲ್ಲಿ ಉಳಿದು ಹೆಮ್ಮರವಾಗಿ ಬೆಳೆದರೆ ಮಾತ್ರ ರೈತರು ಹಾಗೂ ಜನಸಾಮಾನ್ಯರ ರಕ್ತವನ್ನು ಹೀರುತ್ತಿರುವ ಖಾಸಗಿ ಲೇವಾದೇವಿದಾರರು ಹಾಗೂ ಚಕ್ರಬಡ್ಡಿ, ಮೀಟರ್ ಬಡ್ಡಿಯ ದಂಧೆ ತಡೆದು ಬಡಜನರು ನೆಮ್ಮದಿಯ ಜೀವನವನ್ನು ನಡೆಸಲು ಸಹಾಯ ಮಾಡಬಹುದಾಗಿದೆ ಎಂದು ಹೇಳಿದರು.
ಸಹಕಾರ ಸಂಘಗಳು ವರದಾನ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಜನರು ತಮಗೆ ವರವಾಗಿ ಸಿಕ್ಕಿರುವ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಷೇರುದಾರರಾಗುವ ಮೂಲಕ ಸರ್ಕಾರವು ಬಡವರಿಗಾಗಿಯೇ ನೀಡುತ್ತಿರುವ ಬಡ್ಡಿರಹಿತ ಸಾಲಗಳು ಹಾಗೂ ಸಬ್ಸಿಡಿ ಸಾಲ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಿ ಪ್ರಗತಿಯ ಧಿಕ್ಕಿನತ್ತ ಸಾಗಬೇಕು ಎಂದು ಕಿವಿಮಾತು ಹೇಳಿದರು.
ಸಭೆಯಲ್ಲಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕರಾದ ಕಮಲಾಕ್ಷಿ, ರಮೇಶ್, ಜ್ಯೋತಿಲಕ್ಷ್ಮೀ, ಚೆಲುವರಾಜು, ಶಿವಪ್ರಕಾಶ್, ವೆಂಕಟೇಶ್, ಮೋಹನ, ಶೋಭಾ, ಕವಿತಾ, ರೇಣುಕಮ್ಮ, ಮಲ್ಲೇಶ್, ಜಕ್ಕನಹಳ್ಳಿ ರಾಜೇಶ್, ಮೂರ್ತಿ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.