ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Nov 17, 2019, 3:00 PM IST
ಮದ್ದೂರು: ಕುಡಿವ ನೀರು, ಶೌಚಾಲಯ, ಆಸನದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ತಾಲೂಕು ಕಚೇರಿಗೆ ಅಗತ್ಯ ಕ್ರಮವಹಿಸುವಂತೆ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹನುಮೇಶ್ ತಹಶೀಲ್ದಾರ್ ನಾಗೇಶ್ ಒತ್ತಾಯಿಸಿದರು.
ಪಟ್ಟಣದ ತಾಲೂಕು ಕಚೇರಿ ಒಳಾಂಗಣದಲ್ಲಿ ಅಶುಚಿತ್ವ ತಾಂಡವವಾಡುವ ಜತೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಕಚೇರಿಗೆ ಆಗಮಿಸುವಸಾರ್ವಜನಿಕರು, ಮಹಿಳೆಯರು ಹಾಗೂ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತೊಂದರೆ ಉಂಟಾಗಿದೆ ಎಂದು ದೂರಿದರು.
ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಸದಾ ಜನ ಸಂದಣಿಯಿಂದ ಕೂಡಿದ್ದು ಸಮರ್ಪಕವಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿಕಲಚೇತನರ ವ್ಹೀಲ್‌ಚೇರ್ ಇಲ್ಲದೆ ಪರದಾಡುವಂತಾಗಿದೆ. ತಹಶೀಲ್ದಾರ್ ಅವರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕೊಠಡಿಗಳಲ್ಲಿ ಅಶುಚಿತ್ವದ ಜತೆಗೆ ಕೆಲ ಕೊಠಡಿಗಳು ಶಿಥಿಲಗೊಂಡಿದ್ದು ತಾಲೂಕು ಕಚೇರಿಗೆ ಸುಣ್ಣ, ಬಣ್ಣ ಬಳಿದು ಹಲವು ವರ್ಷಗಳೇ ಕಳೆದಿದ್ದರೂ ದುರಸ್ತಿಗೊಳಿಸುವ ಕೆಲಸಕ್ಕೆ ಸ್ಥಳೀಯ ಶಾಸಕರು ಮುಂದಾಗದಿರುವುದು ವಿಪರ್ಯಾಸ ಎಂದು ದೂರಿದರು.
ವೃದ್ಧಾಪ್ಯ, ವಿಕಲಚೇತನ ವೇತನ, ವಿಧವಾ ವೇತನಸೇರಿದಂತೆ ಇನ್ನಿತರೆ ಸರ್ಕಾರಿ ಯೋಜನೆಗಳನ್ನು ಪಡೆಯಲು ಫಲಾನುಭವಿಗಳು ಪ್ರತಿನಿತ್ಯ ಪರದಾಡುತ್ತಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಎಲ್ಲೆಡೆ ಭ್ರಷ್ಟಾಚಾರ,ಲಂಚಗುಳಿತನ ಮಿತಿ ಮೀರಿದ್ದು ಸರ್ಕಾರ ಕೂಡಲೇ ಕಾಯಂ ತಹಶೀಲ್ದಾರ್ ಅವರನ್ನು ನೇಮಕ ಮಾಡುವಮೂಲಕ ಅರ್ಜಿಗಳನ್ನು ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದರು.
ಬಳಿಕ ಮಾತನಾಡಿದ ಪ್ರಭಾರ ತಹಶೀಲ್ದಾರ್ ನಾಗೇಶ್ ತಾಲೂಕು ಕಚೇರಿ ಶುಚಿತ್ವಕ್ಕೆ ಈಗಾಗಲೇ ಸಿಬ್ಬಂದಿಗಳಿಗೆ ಸೂಚಿಸಿದ್ದು ಕುಡಿಯುವ ನೀರು, ಶೌಚಾಲಯ ನಿರ್ವಹಣೆಗೆ ಅಗತ್ಯ ಕ್ರಮವಹಿಸುವಜತೆಗೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮಾರೋಪಾದಿಯಲ್ಲಿ ಕ್ರಮಕೈಗೊಳ್ಳಲು ಸರ್ಕಾರ ಕಾಯಂ ತಹಶೀಲ್ದಾರ್ ಅವರನ್ನು ನಿಯೋಜನೆ ಮಾಡಿದ್ದಲ್ಲಿ ಹಲವಾರು ಸಮಸ್ಯೆಗಳು ಪರಿಹಾರ ಕಾಣಲಿರುವುದಾಗಿ ತಿಳಿಸಿದರು. ಶಿರಸ್ತೇದಾರ್ ರೂಪ, ನವೀನ್, ಮುಖಂಡರಾದ ಸ್ವಾಮಿ, ಕೃಷ್ಣಪ್ಪ, ಶಿವಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.