ಅಕ್ರಮ ಗಣಿಗಾರಿಕೆ ತಡೆಗೆ ಒತ್ತಾಯ
Team Udayavani, Nov 22, 2019, 3:56 PM IST
ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಯನ್ನು ತಡೆಯಬೇಕು ಎಂದು ರೈತ ಸಂಘ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ರೂಪಾ ಅವರನ್ನು ಭೇಟಿ ಮಾಡಿದ ರೈತಸಂಘ (ಮೂಲ ಸಂಘಟನೆ), ದಲಿತ ಸಂಘರ್ಷ ಸಮಿತಿಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸರ್ಕಾರಿ ಗೋಮಾಳ, ಅರಣ್ಯ ಭೂಮಿ ಮತ್ತು ಹುಲ್ಲು ಬನಿಗೆ ಮೀಸಲಾದ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಪರಿಸರ ಹಾಳಾಗುತ್ತಿದೆ. ಸರ್ಕಾರದ ಸಂಪತ್ತು ಲೂಟಿಯಾಗುತ್ತಿದೆ. ಅನಧಿಕೃತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಆಗ್ರಹಿಸಿದರು.
ಆಧಾರ್ ತಿದ್ದುಪಡಿಗೆ ಸಮಸ್ಯೆ: ಆಧಾರ್ ಕಾರ್ಡ್ ಮಾಡುವ ಕೇಂದ್ರ ಸ್ಥಗಿತಗೊಂಡಿದ್ದು, ಮತ್ತೆ ತೆರೆಯಬೇಕು. ಪಹಣಿ ತಿದ್ದುಪಡಿ ಹಾಗೂ ಪೌತಿ ಖಾತೆ ಕೆಲಸಗಳು ಶೀಘ್ರ ಆಗಬೇಕು. ಭತ್ತ ಖರೀದಿ ಕೇಂದ್ರ ತೆರೆಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಹ ಶೀಲ್ದಾರ್ ರೂಪಾ ಅವರಿಗೆ ಮನವಿ ಸಲ್ಲಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಗಂಜಾಂ ರವಿಚಂದ್ರ, ಕುಬೇರಪ್ಪ, ರೈತ ಸಂಘ ತಾಲೂಕು ಘಟಕದ ಅಧ್ಯಕ್ಷ ಶ್ರೀಕಂಠಯ್ಯ, ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಮೋಹನ್, ಶ್ರೀಕಂಠು, ಚಂದ್ರಶೇಖರ್, ಸಿದ್ದೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.