ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಮನವಿ
Team Udayavani, Jun 21, 2019, 5:10 AM IST
ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾವೇರಿ ಕೊಳ್ಳದ ನೀರಿನ ಸಮಸ್ಯೆ ಬಗ್ಗೆ ಮನವಿ ಸಲ್ಲಿಸಿದರು.
ಮಂಡ್ಯ: ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಸಂಸದೆ ಸುಮಲತಾ, ಕಾವೇರಿ ಕೊಳ್ಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವುದನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಕಾವೇರಿ ಕೊಳ್ಳದ ರೈತರು ಬೆಳೆಗಳಿಗೆ ನೀರಿಲ್ಲದೆ ಪರಿತಪಿಸುತ್ತಿದ್ದು, ನಷ್ಟದ ಆತಂಕ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಮಂಡಳಿ ಅಧ್ಯಕ್ಷರಿಗೆ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ತಕ್ಷಣವೇ ಕೃಷ್ಣರಾಜಸಾಗರ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆಂದು ಹೇಳಲಾಗಿದೆ. ಇದೇ ವೇಳೆ ಕೇಂದ್ರ ಸಚಿವ ಸದಾನಂದಗೌಡರನ್ನೂ ಭೇಟಿಯಾಗಿ ಕಾವೇರಿ ಕೊಳ್ಳದ ನೀರಿನ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.
ಅಶ್ಲೀಲ ಪದಗಳಿಂದ ನಿಂದನೆ: ದೂರು
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಸುಮಲತಾ ಬೆಂಬಲಿಗರು ಎಸ್‌ಪಿಗೆ ದೂರು ಸಲ್ಲಿಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿಯ ಮಾಯಿಗೌಡ ಅಲಿಯಾಸ್ ಗೋವಿಂದ ವಿರುದ್ಧ ದೂರು ನೀಡಲಾಗಿದೆ. ಕೆ.ಸಿ.ಶ್ರೀಕಾಂತ್ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಮಾಯಿಗೌಡ, ಸಂಸದೆ ಸುಮಲತಾ, ನಟರಾದ ದರ್ಶನ್, ಯಶ್ ಹಾಗೂ ಸುಮಲತಾ ಪರ ಮತ ಚಲಾಯಿಸಿದ ಒಕ್ಕಲಿಗ ಸಮುದಾಯದವರ ವಿರುದ್ಧ ಅಶ್ಲೀಲ, ಅವಾಚ್ಯ, ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.