77.35 ಎಕರೆ ಜಮೀನಲ್ಲಿ ನಿವೇಶನ ಮಂಜೂರು
Team Udayavani, Dec 29, 2019, 4:14 PM IST
ಪಾಂಡವಪುರ: ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ಗಾಯತ್ರಿ ಅಧ್ಯಕ್ಷತೆಯಲ್ಲಿ ತಾಲೂಕಿನ ವಿವಿಧ ಇಲಾಖೆ ಪ್ರಗತಿ ಪರಿಶೀಲನೆ ಸಾಮಾನ್ಯ ಸಭೆ ನಡೆಯಿತು.
ಸಭೆ ಪ್ರಾಂಭವಾಗುತ್ತಿದಂತೆಯೇ ತಾಪಂ ಇಒ ಮಾತನಾಡಿ, ತಾಲೂಕಿನಲ್ಲಿ ಸುಮಾರು 77.35ಎಕರೆ ಸರ್ಕಾರಿ ಜಮೀನನ್ನು ಗುರುತಿಸಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶೀಘ್ರವಾಗಿ ನಿವೇಶನ ಇಲ್ಲದವರಿಗೆ ನಿವೇಶನ ನೀಡಲು ಕ್ರಮವಹಿಸಿಲಾಗಿದೆ. 2011ರ ಜನಗಣತಿಯ ಪ್ರಕಾರ ನಿವೇಶ ಹಂಚಲು ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಈಗಾಗಲೇ ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ನಡೆಸಿ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಜತೆಗೆ ಈಗ ಹೊಸದಾಗಿ ಯಾವುದೇ ನಿವೇಶನ ವಿತರಣೆ ಮಾಡಲು ಅವಕಾಶವಿಲ್ಲ ಎಂದರು.
ತಕ್ಷಣ ಎದ್ದು ನಿಂತ ಸದಸ್ಯ ಅಲ್ಪಹಳ್ಳಿ ಗೋವಿಂದಯ್ಯ, ತಾಲೂಕಿನ ರಾಗಿಮುದ್ದನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲವೆಂಬ ಆರೋಪ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಆರ್‌ಪಿಯವರು ಪ್ರಶ್ನಿಸಿದಕ್ಕೆ ಬಾಯಿಗೆ ಬಂದಂತೆ ನಿಂದಿಸಿ ಮರಕ್ಕೆ ಕಟ್ಟಿ ಹೊಡೆಯುವಂತೆ ಎಚ್ಚರಿಸಿದ್ದಾನೆ ಎಂದು ವಿಡಿಯೋ ಪ್ರದರ್ಶಿಸಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ತೆಂಗಿನ ಮರಕ್ಕೆ ಬಿಳಿ ಉಣ್ಣೆ ಬಾಧೆ: ತಾಲೂಕಿನ ವಿವಿಧೆಡೆ ತಂಗಿನ ಮರಗಳಿಗೆ ಬಿಳಿ ಉಣ್ಣೆ ಬಾಧೆ ಕಾಣಿಸಿಕೊಂಡಿದ್ದು, ರೈತರು ಈ ಬಗ್ಗೆ ಸಾಕಷ್ಟು ಆತಂಕದಲ್ಲಿದ್ದಾರೆ. ಹಾಗಾಗಿ ಅಧಿ ಕಾರಿಗಳು ಗಮನಹರಿಸಿ ಈ ರೋಗವನ್ನು ಹತೋಟಿಗೆ ತರಬೇಕೆಂದು ಸದಸ್ಯ ಸಿ.ಎಸ್.ಗೋಪಾಲೇಗೌಡ ಒತ್ತಾಯಿಸಿದರು.
ಪ್ರತಿಕ್ರಿಯಿಸಿದ ಹಿರಿಯ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಪಿ.ಸೌಮ್ಯ, ರೈತರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಈಗಾಗಲೇ ನಮ್ಮ ಇಲಾಖೆಯ ಅಧಿಕಾರಿಗಳು ಸರ್ವೆಕಾರ್ಯ ನಡೆಸಿದ್ದು, ಔಷಧಗಳು ಲಭ್ಯವಿದೆ. ಉಚಿತವಾಗಿ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದರು.
ಭವನಗಳ ನಿರ್ಮಾಣ: ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಡಾ.ಅಂಬೇಡ್ಕರ್ ಭವನಗಳನ್ನು ನಿರ್ಮಾಣ ಮಾಡಲು ಕೆಆರ್‌ಐಡಿಎಲ್ ಅವರಿಗೆ ನೀಡಲಾಗಿತ್ತು. ಆದರೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲವು ಭವನಗಳು ಅರ್ದಕ್ಕೆ ನಿಂತುಹೋಗಿವೆ ಎಂದು ಸದಸ್ಯ ಅಲ್ಪಹಳ್ಳಿ ಗೋವಿಂದಯ್ಯ ಇಒ ಅವರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಇಒ ಆರ್. ಪಿ.ಮಹೇಶ್ ಅವರು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆಯಲಾಗುವುದು ಎಂದರು.
ಭತ್ತ ಖರೀದಿ ಕೇಂದ್ರ ಸ್ಥಾಪನೆ: ಭತ್ತ ಹಾಗೂ ರಾಗಿ ಖರೀದಿ ಕೇಂದ್ರಗಳನ್ನು ಪಟ್ಟದ ಎಪೆಂಸಿ ಆವರಣ ಹಾಗೂ ಕ್ಯಾತನಹಳ್ಳಿ ಗ್ರಾಪಂ, ರೈತ ಸಂಪರ್ಕ ಕೇಂದ್ರಗಳಾದ ಚಿನಕುರಳಿ, ಜಕ್ಕನಹಳ್ಳಿಯಲ್ಲಿ ತೆರೆಯಲಾಗಿದೆ. ಪ್ರತಿ ಕ್ವಿಂಟಕ್ ಭತ್ತಕ್ಕೆ 1,815 ರೂ. ಹಾಗೂ ರಾಗಿ ಕ್ವಿಂಟಲ್‌ಗೆ 3150 ರೂ. ನಿಗದಿ ಪಡಿಸಲಾಗಿದೆ. ಹಾಗಾಗಿ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ಇಲಾಖೆ ಶಿರಸ್ತೇದಾರ್ ನಟರಾಜು ಸಭೆಗೆ ತಿಳಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಮಾತನಾಡಿ, ತಾಲೂಕಿನಲ್ಲಿ ಕೆಲವೊಂದು ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪ್ರತಿ ಖಾಸಗಿ ಸಗಟು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಅಂತಹ ಯಾವುದೇ ವಿಚಾರ ಕಂಡುಬಂದಿಲ್ಲ ಎಂದರು.
ಉಪಾಧ್ಯಕ್ಷೆ ಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಪುಟ್ಟೇಗೌಡ ಸೇರಿದಂತೆ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.