ರೈತರ ಸಮಸ್ಯೆಗೆ ಸ್ಪಂದಿಸುವೆ: ನಿಖಿಲ್
Team Udayavani, Apr 2, 2019, 5:00 AM IST
ಕೆ.ಆರ್.ಪೇಟೆ: ನಮ್ಮ ತಾತ ದೇಶದ ಪ್ರಧಾನಮಂತ್ರಿಗಳಾಗಿ ವಿಶ್ವ ಮೆಚ್ಚುವ ಆಡಳಿತ ನೀಡಿದ್ದಾರೆ. ತಂದೆ 9 ತಿಂಗಳಲ್ಲಿಯೇ ಜನ ಮೆಚ್ಚುವ ಕಾರ್ಯಗಳನ್ನು ಮಾಡಿದ್ದು ನಾನೂ ಸಹ ಅವರಂತೆಯೇ ಜನಸೇವೆ ಮಾಡಲು ತಾವು ನನಗೆ ಅವಕಾಶ ಮಾಡಿಕೊಡಬೇಕು ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಮನವಿ ಮಾಡಿದರು.
ತಾಲೂಕಿನ ಸಾರಂಗಿ ಗ್ರಾಮದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡಿದ್ದಾರೆ. ರೈತರ ಕುಟುಂಬದಲ್ಲಿ ಹುಟ್ಟಿರುವ ನಾವು ರೈತರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಆಶೀರ್ವಾದ ಮಾಡಿದರೆ ನಾನು ತಮ್ಮ ಸೇವೆ ಮಾಡುತ್ತೇನೆಂದರು.
ಅದ್ದೂರಿ ಸ್ವಾಗತ: ಮಂಡ್ಯ ಲೋಕಸಭಾ ಅಭ್ಯರ್ಥಿ ಹಾಗೂ ಸಿಎಂ ಸುಪುತ್ರ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಸಾರಂಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಅಭಿಮಾನಿಗಳು ಜೆಸಿಬಿ ಯಂತ್ರಗಳ ಮೇಲಿಂದ ಹೂಮಳೆ ಸುರಿಸಿದರು. ಜೊತೆಗೆ ಮಂಗಳ ವಾದ್ಯ, ಮುತೈದೆಯರಿಂದ ಆರತಿ ಬೆಳಗಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಬೈಕ್ ಜಾಥಾನಡೆಸಿದರು.
ಆರು ತಿಂಗಳಲ್ಲಿ ಗ್ರಾಮ ಅಭಿವೃದ್ಧಿ: ಸಾರಂಗಿ ಗ್ರಾಮವನ್ನು ಅಭಿವೃದ್ಧಿ ಮಾಡಿಲ್ಲ ಎಂದು ಗ್ರಾಮಸ್ಥರು ನಿಖಿಲ್‌ರವನ್ನು ಪ್ರಶ್ನಿಸಿರುವ ಬಗ್ಗೆ ಮಾತನಾಡಿದ ಅವರು ನಿಮ್ಮ ಗ್ರಾಮವನ್ನು ಅಭಿವೃದ್ಧಿ ಪಡಿಸುವುದು ನನ್ನ ಹಾಗೂ ಶಾಸಕ ನಾರಾಯಣಗೌಡರ ಜವಾಬ್ದಾರಿಯಾಗಿದ್ದು ಮುಂದಿನ ಆರು ತಿಂಗಳಲ್ಲಿ ಸಾರಂಗಿ ಗ್ರಾಮ ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.
ಚುನಾವಣಾ ಪ್ರಚಾರದಲ್ಲಿ ಶಾಸಕ ನಾರಾಯಣಗೌಡ, ಜಿಪಂ ಸದಸ್ಯ ಬಿ.ಎಲ್.ದೇವರಾಜ್, ತಾಪಂ ಸದಸ್ಯರಾದ ಜಾನಕಿರಾಮ್, ಮೋಹನ್ ಇತರರಿದ್ದರು.
ತರಾಟೆಗೆ ತೆಗೆದುಕೊಂಡ ಮಹಿಳೆ: ನಮ್ಮ ಗ್ರಾಮದಲ್ಲಿ ಜೆಡಿಎಸ್ ಮುಖಂಡರ ಜೊತೆಯಲ್ಲಿ ಖುದ್ದು ಪ್ರಚಾರಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸುತ್ತಿದ್ದೇನೆ. ಪಂಚಾಯಿತಿಗಳು ಸೇರಿದಂತೆ ಶಾಸಕರು ಮತ್ತು ಸಂದರಿಗೆ ಹೆಚ್ಚಿನ ಮತಗಳನ್ನು ನೀಡಿದ್ದೇವೆ. ಆದರೆ ನಮ್ಮ ಗ್ರಾಮದ ಮುಖ್ಯ ರಸ್ತೆಗಳು ಇಂದಿಗೂ ಅಭಿವೃದ್ಧಿ ಕಂಡಿಲ್ಲ. ತಾವು ಚುನಾವಣೆಯ ಸಮಯದಲ್ಲಿ ಬಂದು ಪ್ರಚಾರಮಾಡಿ ಮನೆ ಸೇರಿಕೊಳ್ಳುತ್ತೀರಿ.
ಗ್ರಾಮ ಅಭಿವೃದ್ಧಿಯಾಗದಿರುವುದಕ್ಕೆ ನಾವೇನು ಉತ್ತರ ನೀಡಬೇಕು ಎಂದು ನಿಖಿಲ್ ಕುಮಾರಸ್ವಾಮಿಯನ್ನು ಗುಂಡಿ ಬಿದ್ದಿರುವ ರಸ್ತೆ ಮತ್ತು ಕೊಳಕು ಚರಂಡಿಸ್ಥಳದಲ್ಲಿಯೆ ಮಹಿಳೆ ತರಾಟೆಗೆ ತೆಗೆದುಕೊಂಡರು. ಆ ಕ್ಷಣದಲ್ಲಿ ಉತ್ತರಿಸಲಾಗದೆ ಅಲ್ಲಿಂದ ಜಾಗ ಖಾಲಿ ಮಾಡಿದ ನಿಖಿಲ್, ನಂತರ ಸಭೆಯಲ್ಲಿ ನಾನು ಗ್ರಾಮವನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.
ಪ್ರಶ್ನೆ ಮಾಡದಂತೆ ಮಹಿಳೆಗೆ ಬೆದರಿಕೆ: ಗ್ರಾಮದ ಸಮಸ್ಯೆ ಬಗೆಹರಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ತಡೆದು ನಿಲ್ಲಿಸಿದ್ದ ಮಹಿಳೆಯನ್ನು ನೀನು ಮದುವೆಯಾಗಿರುವುದರಿಂದ ನೀವು ಈ ಗ್ರಾಮದ ಮಗಳಲ್ಲ ಬೇರೆ ಗ್ರಾಮದ ಸೊಸೆ ಇಲ್ಲಿ ಪ್ರಶ್ನೆ ಮಾಡಬಾರದು ಎಂದು ಜೆಡಿಎಸ್ ಮುಖಂಡ ದಮ್ಕಿ ಹಾಕಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಎಲ್ಲರನ್ನೂ ಸಮಾಧಾನಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.