ಶ್ರೀರಂಗಪಟ್ಟಣ ದಸರಾ ಸಿದ್ಧತೆಗಳ ಪರಿಶೀಲನೆ
Team Udayavani, Sep 27, 2019, 4:52 PM IST
ಶ್ರೀರಂಗಪಟ್ಟಣ : ಪ್ರಸಕ್ತ ವರ್ಷದ ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಮಹೋತ್ಸವದಲ್ಲಿ ಮನರಂಜನಾ ಕಾರ್ಯಕ್ರಮಕ್ಕೆ ಖ್ಯಾತ ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಗೂ ವಿಜಯಪ್ರಕಾಶ್ ಅವರನ್ನು ಆಹ್ವಾನಿಸ ಲಾಗಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಕಿರಂಗೂರು ವೃತ್ತದಲ್ಲಿರುವ ದಸರಾ ಬನ್ನಿಮಂಟಪದ ಬಳಿ ದಸರಾ ಸಿದ್ದತೆ ವೀಕ್ಷಿಸಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ವೈಭವದಿಂದ ನೆರವೇರಿಸಲು ಎಲ್ಲಾ ಸಿದ್ಧತೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಮಹೋತ್ಸವದ ಪ್ರಮುಖ ಸ್ಥಾನ ಬನ್ನಿಮಂಟಪ ಅಭಿವೃದ್ಧಿಗೆ ಕಳೆದ ವರ್ಷವೇ 50 ಲಕ್ಷ ರೂ. ಮಂಜೂರು ಮಾಡಲಾಗಿದೆ. ತಾಂತ್ರಿಕ ಅಡೆ-ತಡೆಗಳಿಂದ ತಡವಾಗಿದೆ. ಜಂಬೂ ಸವಾರಿಗಾಗಿ ವಿಶೇಷ ಕಾಮಗಾರಿ ನಡೆಸಲಾಗುವುದು ಎಂದರು.
ಸಿಎಂಗೆ ವಿಶೇಷ ಆಹ್ವಾನ: ನಾಲ್ಕು ದಿನ ಪಾರಂಪರಿಕ ದಸರಾ ಕಾರ್ಯಕ್ರಮ ಆಯೋಜಿಸಿದ್ದು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ಜತೆಗೆ ಜಿಲ್ಲಾಉಸ್ತುವಾರಿ ಸಚಿವವರು ಸೇರಿದಂತೆ ಜಿಲ್ಲೆಯ ಶಾಸಕರನ್ನೂ ಆಹ್ವಾನಿಸಲಾಗಿದೆ ಎಂದರು.
ಕಲಾವಿದರಿಗೆ ಆದ್ಯತೆ: ಚಾಮುಂಡೇಶ್ವರಿ ಮೆರವಣಿಗೆಯ ಜಂಬೂಸವಾರಿ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ಮತ್ತು ಜನಪದ ಕಲಾವಿದರಿಗೆ ಹೆಚ್ಚು ಅವಕಾಶ ಕಲ್ಪಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಗಾಯಕಿ ಎಂ.ಡಿ.ಪಲ್ಲವಿ ದಂಪತಿಯ ಜುಗಲ್‌ಬಂಧಿ ಕಾರ್ಯಕ್ರಮ, ಸಿನಿಮಾ ನಟರ ಕಾಮಿಡಿ ಷೋ ಹಾಗೂ ಮೈಸೂರಿನ ದಸರಾ ಮಾದರಿಯಲ್ಲಿ ಶ್ರೀರಂಗಪಟ್ಟಣದಲ್ಲೂ ಆಹಾರ ಮೇಳ ಹಾಗೂ ಹಳ್ಳಿ ದಸರಾ, ಯುವ ದಸರಾ ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಹೇಳಿದರು.
ಈ ವೇಳೆ ಉಪ ವಿಭಾಗಾಧಿಕಾರಿ ಶೈಲಜಾ, ಡಿವೈಎಸ್ಪಿ ಯೋಗೇಂದ್ರನಾಥ್, ತಹಶೀಲ್ದಾರ್ ನಾಗೇಶ್, ಸಿಪಿಐ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಹಾಗೂ ಪುರಸಭೆ ಸದಸ್ಯರು, ತಾಪಂ, ಗ್ರಾಪಂ ಜನಪ್ರತಿನಿಧಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.