ಮೈಷುಗರ್ ಉಳಿವಿಗೆ ಸೆ.13ರಿಂದ ಧರಣಿ ಸತ್ಯಾಗ್ರಹ
Team Udayavani, Sep 3, 2021, 4:47 PM IST
ಮಂಡ್ಯ: ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಸೆ.13ರಿಂದ ಧರಣಿ ಸತ್ಯಾಗ್ರಹ ನಡೆಸಲು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.
ನಗರದ ಕರ್ನಾಟಕ ಸಂಘದ ಆವರಣದಲ್ಲಿಯೇ ಸಭೆ ನಡೆಸಿದ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ಸೆ.13ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ಆದ್ದರಿಂದ ಅಂದಿನಿಂದಲೇ ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರಕ್ಕೆ ಮೈಷುಗರ್ ಕಾರ್ಖಾನೆಯನ್ನು ಆರಂಭಿಸುವಂತೆ ಒತ್ತಾಯಿಸಲು ಒಕ್ಕೊರಲ ತೀರ್ಮಾನಕೈಗೊಳ್ಳಲಾಗಿದೆ.
ಬೃಹತ್ ಧರಣಿ ಸತ್ಯಾಗ್ರಹ: ಸೆ.13ರಂದು ಬೆಳಗ್ಗೆ ನಗರದ ಸರ್‌ಎಂವಿ ಪ್ರತಿಮೆ ಮುಂಭಾಗ ರೈತರು,ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿ,ಕಾರ್ಯಕರ್ತರು,ದಸಂಸ,ಕಾರ್ಮಿಕ,ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದೆ.
ಅಂದು ಉದ್ಘಾಟನೆಯಲ್ಲಿ ಎಲ್ಲ ಹಾಲಿ-ಮಾಜಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ತಿಳಿಸಿದರು.
ಸದನದ ನಿರ್ಧಾರದಂತೆ ಮುಂದಿನ ಹೋರಾಟ: ಜಿಲ್ಲೆಯ ಶಾಸಕರು ಸದನದಲ್ಲಿ ಚರ್ಚೆ ನಡೆಸಿದ ನಂತರ ಅಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ತಿಳಿದುಕೊಂಡು ಧರಣಿ ಸತ್ಯಾಗ್ರಹದ ಎರಡು-ಮೂರು ದಿನಗಳ ನಂತರ ಹೋರಾಟದ ರೂಪುರೇಷೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಶಾಂತಿಯುತವಾಗಿ ನಡೆಯುತ್ತಿರುವ ಉಪ ಚುನಾವಣೆ ಮತದಾನ
ಸದನದಲ್ಲಿ ಚರ್ಚೆ: ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಎಂ.ಶ್ರೀನಿವಾಸ್ ಸೇರಿದಂತೆ ಹಾಗೂ ವಿಧಾನ ಪರಿಷತ್‌ನ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಸರ್ಕಾರ ಕೂಡಲೇ ಮೈಷುಗರ್ ಕಾರ್ಖಾನೆ ಆರಂಭಿಸುವಂತೆ ವಿಧಾನಸಭೆ ಹಾಗೂ ಮೇಲ್ಮನೆಯಲ್ಲಿ ಧ್ವನಿ ಎತ್ತಲಾಗುವುದು.
ಈಗಾಗಲೇ ಹಿಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಕೊಟ್ಟ ಮಾತಿನಂತೆ ಪ್ರಸ್ತುತ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಅದರಂತೆ ಸದನದಲ್ಲಿ ಚರ್ಚೆ ನಡೆಸಿ ಒಂದು ನಿರ್ಧಾರ ಕೈಗೊಳ್ಳುವಂತೆ ಒತ್ತಡ
ಹಾಕಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ರೈತ ಮುಖಂಡರಾದ ಕೆ.ಬೋರಯ್ಯ, ಬೋರಾಪುರ ಶಂಕರೇಗೌಡ, ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಕೃಷಿ ಪ್ರಾಂತ ರೈತಸಂಘದ ಟಿ.ಎಲ್.ಕೃಷ್ಣೇಗೌಡ,ಟಿ.ಯಶವಂತ,ಎಂ.ಪುಟ್ಟಮಾಧು ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.