ಪ್ರವಾದಿ ನಿಂದನೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
Team Udayavani, Jun 11, 2022, 2:54 PM IST
ಮಂಡ್ಯ: ಪ್ರವಾದಿ ಮಹಮದ್ ಅವರನ್ನು ನಿಂದನೆ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ, ಬಿಜೆಪಿ ಮಾಧ್ಯಮ ಉಸ್ತುವಾರಿ ನವೀನ್ ಜಿಂದಾಲ್ ಅವರನ್ನು ಬಂ ಧಿಸುವ ಮೂಲಕ ಬಿಜೆಪಿ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ಸರ್‌ಎಂವಿ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇವರ ನಿಂದನೆಯಿಂದ ರಾಷ್ಟ್ರಮಟ್ಟದಲ್ಲಿಯೇ ಭಾರತ ದೇಶದ ಘನತೆ ಹಾಳಾಗಿದೆ. ಆದ್ದರಿಂದ ಇಡೀ ಬಿಜೆಪಿ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದೇಶದಲ್ಲಿ ಅಲ್ಪಸಂಖ್ಯಾತರು, ದಲಿತ, ಹಿಂದುಳಿದವರ ವಿರೋಧಿ ಅಲೆ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ಮುಸ್ಲಿಂ ವಿರೋಧಿ ಚಟುವಟಿಕೆಗಳಿಗೆ ಬಿಜೆಪಿ ಸರ್ಕಾರ ಮೌನ ಸಮ್ಮತಿ ನೀಡುತ್ತಿದ್ದು, ಆಡಳಿತಾತ್ಮಕ ಸಹಕಾರ ನೀಡುತ್ತಿದೆ ಎಂದು ಕಿಡಿಕಾರಿದರು.
ಹಿಜಾಬ್, ಹಲಾಲ್, ವ್ಯಾಪಾರ ನಿಷೇಧ, ಆಜಾನ್, ಮಸೀದಿ, ಈದ್ಗಾಗಳ ವಿವಾದ ಸೃಷ್ಟಿ ಸೇರಿ ನಿರಂತರವಾಗಿ ಮುಸ್ಲಿಂ ಧಾರ್ಮಿಕ ವಿಚಾರಗಳಲ್ಲಿ ಸಂಘರ್ಷ ನಡೆಸುತ್ತಿದ್ದು, ಎಲ್ಲ ಸಂದರ್ಭದಲ್ಲೂ ಕಾನೂನಾತ್ಮಕ ಕ್ರಮ ಕೈಗೊಳ್ಳದೆ, ಖಂಡಿಸುವ ಮಾತುಗಳನ್ನಾದರೂ ಆಡದ ಬಿಜೆಪಿ ಸರ್ಕಾರ, ಪ್ರವಾದಿ ನಿಂದನೆಯ ಪ್ರಕರಣದಲ್ಲೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದು ಕೇವಲ ವಜಾ ಮಾಡುವ ಕಣ್ಣೊರೆಸುವ ತಂತ್ರ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾದಿ ಮಹಮ್ಮದ್ ನಿಂದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿ ಸಬೇಕು. ಇಡೀ ರಾಷ್ಟ್ರಮಟ್ಟದಲ್ಲಿ ದೇಶದ ಘನತೆಗೆ ಧಕ್ಕೆ ಉಂಟು ಮಾಡಿರುವ ಬಿಜೆಪಿ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಅಧ್ಯಕ್ಷ ಸಾದತ್ ಪಾಷ, ಉಪಾಧ್ಯಕ್ಷ ಆರ್.ಕೆ.ರಹೀಂ, ಮೊಕ್ತಾರ್ ಅಹಮದ್, ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.