ವಿಹೆಚ್‌ಪಿ ಹಾಗೂ ಭಜರಂಗದಳ ಮಂದಿರ ಚಲೋ ಕರೆ: ಶ್ರೀರಂಗಪಟ್ಟಣ ಮಸೀದಿ ಸುತ್ತ ನಿಷೇಧಾಜ್ಞೆ
ಇಂದು ಸಂಜೆ 6ರಿಂದ ಜೂ.5ರ ಬೆಳಗ್ಗೆ 6 ಗಂಟೆವರೆಗೆ 144 ಸೆಕ್ಷನ್ ಜಾರಿ
Team Udayavani, Jun 3, 2022, 11:00 AM IST
ಶ್ರೀರಂಗಪಟ್ಟಣ: ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಜೂ.4ರಂದು ಮಂದಿರ ಚಲೋ ಕರೆ ಹಿನ್ನೆಲೆ, ಮುಂಜಾಗ್ರತೆಯಾಗಿ ಪಟ್ಟಣದ ಜಾಮೀಯಾ ಮಸೀದಿ ಸೇರಿ ದಂತೆ ಪಟ್ಟಣದಲ್ಲಿ 144ಸೆಕ್ಷನ್ ಜಾರಿ ಮಾಡಿ ತಹಶೀಲ್ದಾರ್ ಶ್ವೇತಾ ಎನ್.ರವಿಂದ್ರ ಆದೇಶ ಹೊರಡಿಸಿದ್ದಾರೆ.
ಜೂ.3ರ ಸಂಜೆ 6ಗಂಟೆಯಿಂದ ಜೂ.5ರ ಬೆಳಗ್ಗೆ 6 ಗಂಟೆವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಮೆರವಣಿಗೆ ಜಾಥಾ, ರಥಯಾತ್ರೆ, ಪ್ರತಿಭಟನೆಗೆ ನಿರ್ಬಂಧ ಹೇರಲಾಗಿದೆ.
ವಿಶ್ವಹಿಂದೂ ಪರಿಷತ್ ಕರೆ
ವಿಶ್ವ ಹಿಂದೂ ಪರಿಷತ್ ವತಿಯಿಂದ ಮೂಡಲ ಬಾಗಿಲು ಆಂಜನೇಯಸ್ವಾಮಿ ಮೂಲ ಸ್ಥಾನದಲ್ಲಿ ಮದರಸ ಮಾಡಿ ವಾಸಸ್ಥಾನ ಮಾಡಿಕೊಂಡಿದ್ದು, ಅಲ್ಲಿ ಅಡುಗೆ ಮಾಡುವುದು ಮತ್ತು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಬರುವಂತೆ ಕಟ್ಟಡದಲ್ಲಿನ ಉಬ್ಬು ಚಿತ್ರಗಳನ್ನು ಹಾಗೂ ಇತರೆ ಕಲಾಕೃತಿ ನಾಶಮಾಡುತ್ತಿರುವುದು, ಪತ್ರ ಕಲಾಕೃತಿ ಅಪವಿತ್ರ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮಸೀದಿ ತೆರವಿಗೆ ಮನವಿ ಸಲ್ಲಿಸಿ ದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಜೂ.4ರಂದು ಮೂಲ ಮೂಡಲ ಆಂಜನೇಯ ಮಂದಿರ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತರು ಮೇ 24ರಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದರು.
ಜನ ಸೇರದಂತೆ ತಿಳಿಸಿದ್ದರು
ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಭಾರತೀಯ ಪ್ರಾಚ್ಯವಸ್ತು ಸರ್ವೇ ಕ್ಷಣ ಇಲಾಖೆ ಅಧಿಕಾರಿಗಳಿಗೆ ಮೂಲ ಮೂಡಲ ಆಂಜನೇಯ ದೇಗುಲವನ್ನು ಮಸೀದಿ ಮಾಡಿಕೊಂಡಿರುವುದನ್ನು ತೆರವು ಮಾಡಬೇಕು ಎಂದು ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈ ಗೊಂಡಿಲ್ಲ. ಹೀಗಾಗಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಬೆಳಗೊಳ ಸುನೀಲ್ ನೇತೃತ್ವದಲ್ಲಿ ಪಟ್ಟಣ ಠಾಣೆ ಪೊಲೀಸ್ ನಿರೀಕ್ಷಕ ಪುನೀತ್ ಅವರಿಗೆ ಮನವಿ ಸಲ್ಲಿಸಿದ್ದರು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಯಾಗಿ ಸಮಜಾಯಿಷಿ ನೀಡಿ ಪ್ರತಿಭಟನೆ ಹಾಗೂ ಹೆಚ್ಚು ಜನ ಸೇರದಂತೆ ತಿಳಿಸಿದ್ದರು.
ಪ್ರತಿಭಟನೆ ನಮ್ಮ ಹಕ್ಕು
ಜೂ.4ರ ಬೆಳಗ್ಗೆ 11ಗಂಟೆಗೆ ಶ್ರೀರಂಗಪಟ್ಟಣ ಚಲೋ ನಡೆಯಲಿದೆ. ನಮ್ಮನ್ನು ಹತ್ತಿಕ್ಕಲು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಆದರೂ ನಾವು ಬಿಡುವುದಿಲ್ಲ ಜಿಲ್ಲೆಯ ಹಲವಾರು ಸಂಘಟಕರು ಆಗಮಿಸಲಿದ್ದಾರೆ. ಅವರಜತೆಗೂಡಿ ಶ್ರೀರಂಗಪಟ್ಟಣ ಚಲೋ ಮುಂದುವರಿಸುತ್ತೇವೆ ಎಂದು ಭಜರಂಗದಳದ ಜಿಲ್ಲಾ ಸಂಚಾಲಕರಾದ ಬಸವರಾಜು ಹೊಸ ಆನಂದೂರು ತಿಳಿಸಿದರು.
ಮದ್ಯ ಮಾರಾಟ ನಿಷೇಧ
ಶ್ರೀರಂಗಪಟ್ಟಣದಲ್ಲಿ ಜೂ.4ರಂದು ಹಿಂದೂಪರ ಸಂಘಟನೆಗಳಿಂದ ನಡೆಯಲಿರುವ ಶ್ರೀರಂಗಪಟ್ಟಣ ಜಾಮೀಯ ಮಸೀದಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಮದ್ಯ ಮಾರಾಟ ಮಾಡದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ. ಅಂದು ನಡೆಯುವ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಭಾಗವಹಿಸ ಲಿದ್ದು ಅತಿ ಸೂಕ್ಷ್ಮ ಪ್ರದೇಶವಾಗಿರುವ ಶ್ರೀರಂಗಪಟ್ಟಣದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಜೂ.4ರ ಬೆಳಗ್ಗೆ 6 ಗಂಟೆಯಿಂದ 5ರ ಬೆಳಗ್ಗೆ 6ರವರೆಗೆ ಶ್ರೀರಂಗಪಟ್ಟಣ ಸೇರಿ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಂಗ್ರಹಣೆ, ಸಾಗಾಟ ನಿಷೇ ಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ದೊಡ್ಡ ಗೌಡರ ರಾಜಕೀಯ: ಖರ್ಗೆ ಎಂಟ್ರಿಯಿಂದ ಶುರುವಾಯ್ತೆ ಡಿಕೆ, ಸಿದ್ದು ಬಣಕ್ಕೆ ಭೀತಿ?
ಕಾನೂನಿನ ಚೌಕಟ್ಟಿನಲ್ಲಿ ಮದರಸದಲ್ಲಿರುವ ಜನರನ್ನು ಹೊರ ಹಾಕಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂಬ ಉದ್ದೇಶ ನಮ್ಮದಾಗಿದೆ. ಕಾರ್ಯಕರ್ತರು ಸ್ಥಳ ನಿಗದಿ ಮಾಡಿದರೆ ಆ ಸ್ಥಳದಲ್ಲಿ ಹನುಮಚಾಲೀಸ್ ಭಜನೆ ಮಾಡಿ ಪ್ರತಿಭಟಿಸಲಾಗುತ್ತದೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿ ವರ್ಗದವರು ಆಗಮಿಸಿ ನಮ್ಮ ಮನವಿ ವಿವಿರ ಪಡೆದು ಸ್ವೀಕರಿಸಲು ತಿಳಿಸಲಾಗುತ್ತದೆ. – ಸುನಿಲ್, ಬೆಳಗೊಳ ವಿಶ್ವಹಿಂದೂ ಪರಿಷತ್ತಿನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್. ಅಶೋಕ್
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.