ಕಾಳಸಂತೆಯಲ್ಲಿ ಅಕ್ಕಿ ಮಾರಾಟ
Team Udayavani, Apr 10, 2020, 4:56 PM IST
ಶ್ರೀರಂಗಪಟ್ಟಣ: ಪಟ್ಟಣದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಅಕ್ರಮವಾಗಿ ಅಕ್ಕಿ ಮಾರಾಟವಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್ ರೂಪಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಸರ್ಕಾರ ಬಡವರಿಗೆ ಹಂಚುವ ಅಕ್ಕಿಯನ್ನು ವ್ಯಕ್ತಿಯೊಬ್ಬರು ಕಡಿಮೆ ಬೆಲೆಯಲ್ಲಿ ಖರೀದಿಸುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗೋದಾಮಿಗೆ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ್ದೇನೆ ಎಂದರು. ಟಿಎಪಿಸಿಎಂಎಸ್ನ ಸಿಬ್ಬಂದಿಯಿಂದ ಮಾಹಿತಿ ಪಡೆದು ಆಹಾರ ನಿರೀಕ್ಷಕರಿಗೆ ಕರೆ ಮಾಡಿ ಸರ್ಕಾರದಿಂದ ಟಿಎಂಪಿಸಿಎಂಎಸ್ಗೆ ಹಾಗೂ ಇಲ್ಲಿಂದ ಪಡಿತರ ಅಂಗಡಿಗಳಿಗೆ ಸರಬರಾಜು ಆಗಿರುವ ಅಕ್ಕಿ ವಿವಿರ ನೀಡುವಂತೆ ತಾಕೀತು ಮಾಡಿದರು.
ಸರ್ಕಾರ ಈ ಬಾರಿ ಎರಡು ತಿಂಗಳ ಪಡಿತರಒಟ್ಟಿಗೆ ನೀಡುತ್ತಿದೆ. ಹಾಗಾಗಿ ಟಿಎಪಿಸಿಎಂಎಸ್ ನಿಂದ ಸಂಬಂಧ ಪಟ್ಟ ಪಡಿತರ ಅಂಗಡಿಗಳಿಗೆ 2-3 ಲಾರಿಗಳ ಮೂಲಕ ಅಕ್ಕಿ ಸರಬರಾಜು ಮಾಡಲಾಗುತ್ತಿದೆ. ಸರ್ಕಾರ ಟಿಎಪಿಸಿಎಂಎಸ್ಗೆ ಕಳುಹಿಸಿರುವ ಅಕ್ಕಿ ಹಾಗೂ ಪಡಿತರ ಅಂಗಡಿಗಳಿಗೆ ತರಿಸಿರುವ ಅಕ್ಕಿ ಎರಡು ತಾಳೆಯಾಗುತ್ತಿದೆ. ಆದರೆ, ಟಿಎಪಿಸಿಎಂಸ್ನಲ್ಲಿ ಅಕ್ಕಿ ಮಾರಾಟವಾಗಿಲ್ಲ ಎಂದು ಆಹಾರ ನಿರೀಕ್ಷಕಿ ಪೂರ್ಣಿಮಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.