ಗುರುವಿಗಿಟ್ಟ ಬಾಣದ ಗುರಿ ಶಿಷ್ಯನಿಗೆ ನಾಟಿತೇ?


Team Udayavani, Aug 5, 2017, 6:20 AM IST

DK-SM.jpg

ಮಂಡ್ಯ: ಕರ್ನಾಟಕದಲ್ಲಿ ಕಾಂಗ್ರೆಸ್‌ನ್ನು ಅಸ್ಥಿರಗೊಳಿಸುವ ಕಾರ್ಯಕ್ಕೆ ಮುಂದಾಗಿರುವ ಬಿಜೆಪಿ ಬಿಟ್ಟ ಐಟಿ ದಾಳಿಯ ಬಾಣದ ಗುರಿ “ಗುರುವಿನ ಬದಲು ಶಿಷ್ಯನಿಗೆ ನಾಟಿದೆ’ ಎಂಬ ಮಾತುಗಳು ಕೇಳಿಬರುತ್ತಿವೆ.

ಐದು ದಶಕಗಳ ಕಾಲ ಕಾಂಗ್ರೆಸ್‌ನಲ್ಲಿ ಅಧಿಕಾರವುಂಡ ಹಿರಿಯ ಮುತ್ಸದ್ಧಿ ಎಸ್‌. ಎಂ.ಕೃಷ್ಣ ಕಮಲ ಪಾಳಯ ಸೇರಿದಾಗ
ಆದಾಯ ತೆರಿಗೆ ಅಧಿಕಾರಿಗಳ ದಾಳಿ ಭಯದಿಂದಲೇ ಪಕ್ಷಾಂತರ ಮಾಡಿದ್ದಾರೆಂಬ ಮಾತುಗಳು ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಯ ಮುನ್ನಲೆಗೆ ಬಂದಿದ್ದವು.

ಎಸ್‌.ಎಂ.ಕೃಷ್ಣ ಹಾಗೂ ಅಳಿಯ ಸಿದ್ಧಾರ್ಥ ಅವರ ಆಸ್ತಿ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಬಹುದೆಂಬ ಶಂಕೆ ಬಲವಾಗಿ ಮೂಡಿದ್ದವು. ಇದನ್ನು ಸೂಕ್ಷ್ಮವಾಗಿ ಗ್ರಹಿಸಿದ ಎಸ್‌.ಎಂ.ಕೃಷ್ಣ ಅವರು ಕುಟುಂಬಸ್ಥರ ಒತ್ತಡಕ್ಕೆ ಮಣಿದು ಬಿಜೆಪಿಗೆ ಒಲ್ಲದ ಮನಸ್ಸಿನಿಂದಲೇ ಸೇರ್ಪಡೆಗೊಂಡಿದ್ದರು ಎನ್ನಲಾಗಿದೆ.

ಎಸ್‌.ಎಂ.ಕೃಷ್ಣ ಕಮಲ ಪಾಳಯ ಸೇರಿದ ಮೇಲೆ ಅದಕ್ಕೊಂದು ತಾರ್ಕಿಕ ಅಂತ್ಯ ದೊರಕಿದಂತಾಗಿತ್ತು ಎಂಬ ಮಾತುಗಳು
ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಸಾರಥಿಯಂತಿದ್ದ ಡಿಕೆಶಿ: ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ಷರಶಃ ಅವರಿಗೆ ಸಾರಥಿಯಂತಿದ್ದವರು ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌. 

ಪಕ್ಷ ಬಿಡುವವರೆಗೂ ಕೃಷ್ಣ ಅವರ ಶಿಷ್ಯರಾಗೇ ಗುರುತಿಸಿಕೊಂಡಿದ್ದರು. ಪಕ್ಷ ತೊರೆಯುವ ಸಮಯದಲ್ಲೂ ಕಾಂಗ್ರೆಸ್‌ ಬಿಡದಂತೆ ಡಿ.ಕೆ. ಶಿವಕುಮಾರ್‌ ಅವರು ಎಸ್‌.ಎಂ.ಕೃಷ್ಣರ ಮನವೊಲಿಸಲು ಮುಂದಾಗಿದ್ದರು. ಆದರೆ, ಎಸ್‌.ಎಂ.ಕೃಷ್ಣ ಐಟಿ ದಾಳಿ ನಡೆಸಬಹುದೆಂಬ ದೂರದೃಷ್ಟಿಯಿಂದ ಕಾಂಗ್ರೆಸ್‌ನಿಂದ ಕಾಲೆ¤ಗೆದು ಬಿಜೆಪಿ ಗುರಿಯಿಂದ ತಪ್ಪಿಸಿಕೊಂಡಿದ್ದರು.

ಗುರುವನ್ನು ಅನುಸರಿಸಲಿಲ್ಲ: ಎಸ್‌. ಎಂ.ಕೃಷ್ಣ ಕಾಂಗ್ರೆಸ್‌ ಬಿಟ್ಟ ನಂತರ ಅವರ ಗುರುವಿನ ಹಾದಿಯನ್ನು ಡಿ.ಕೆ.ಶಿವಕುಮಾರ್‌ ಅನುಸರಿಸಲಿಲ್ಲ. ಕಾಂಗ್ರೆಸ್‌ನಲ್ಲೇ ಉಳಿದುಕೊಂಡು ಮೈಸೂರು ಪ್ರಾಂತ್ಯದಲ್ಲಿ ಪ್ರಬಲ ಒಕ್ಕಲಿಗ ನಾಯಕನಾಗುವ ಕನಸು ಕಂಡಿದ್ದರು. ಇಂಧನ ಖಾತೆ ವಹಿಸಿಕೊಂಡು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದ ನಂತರ ಜೆಡಿಎಸ್‌ ಭಿನ್ನಮತೀಯ ಶಾಸಕರಿಗೆ ಬೆಂಬಲವಾಗಿ ನಿಂತರು. ಅವರ ವಿಶ್ವಾಸ ಗಳಿಸಿಕೊಂಡು ಒಕ್ಕಲಿಗ ನಾಯಕರಾಗಿ ಪ್ರವರ್ಧಮಾನಕ್ಕೆ ಬರಲು ಪ್ರಯತ್ನಿಸಿದ್ದರು.

ಮುಂದಿನ ಕೆಪಿಸಿಸಿ ಅಧ್ಯಕ್ಷರಾಗುವ ಕನಸು ಕಾಣುತ್ತಿದ್ದ ಶಿವಕುಮಾರ್‌ಗೆ ಆದಾಯ ತೆರಿಗೆ ಅಧಿಕಾರಿಗಳು ದೊಡ್ಡ ಶಾಕ್‌ ನೀಡಿದ್ದಾರೆ. ಎಸ್‌.ಎಂ.ಕೃಷ್ಣರಿಗೆ ಇಟ್ಟ ಐಟಿ ಬಾಣದ ಗುರಿ ಇದೀಗ ಅವರ ಶಿಷ್ಯ ಶಿವಕುಮಾರ್‌ಗೆ ಬಡಿದಿದೆ. 

ಸಂಚಲನ ಮೂಡಿಸಲಿಲ್ಲ: ಎಸ್‌.ಎಂ.ಕೃಷ್ಣ ಅವರು ಕಮಲ ಪಾಳಯ ಸೇರಿದ ನಂತರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳೂ ನಡೆಯಲಿಲ್ಲ, ಬಿಜೆಪಿ ಪಕ್ಷದೊಳಗೆ ಕೃಷ್ಣ ಸಂಚಲನವನ್ನೂ ಉಂಟುಮಾಡಲಿಲ್ಲ.

ಪಕ್ಷ ಸಂಘಟನೆಗೆ ಒಲವನ್ನೂ ತೋರದೆ ಪಕ್ಷದ ಎಲ್ಲಾ ಕಾರ್ಯಚಟುವಟಿಕೆಗಳಿಂದ ದೂರವೇ ಉಳಿದರು. ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಗಳಲ್ಲೂ ಒಂದು ದಿನದ ಪ್ರಚಾರ ನಡೆಸಿ ತಮ್ಮ ಕರ್ತವ್ಯ ಮುಗಿಸಿದರು.

ಈಗಲೂ ಬಿಜೆಪಿಯ ಸಭೆ-ಸಮಾರಂಭಗಳಲ್ಲಿ ಬಿಜೆಪಿ ನಾಯಕರೊಂದಿಗೆ ವೇದಿಕೆ ಹಂಚಿಕೊಳ್ಳುವುದಕ್ಕೆ ಎಸ್‌.ಎಂ.ಕೃಷ್ಣ
ಬಯಸುತ್ತಿಲ್ಲ. ಬಿಜೆಪಿ ಪಕ್ಷದೊಳಗೆ ಕ್ರಿಯಾಶೀಲವಾಗಿರದೆ ಬಹುದೂರವೇ ಉಳಿದಂತೆ ಕಂಡುಬರುತ್ತಿದ್ದಾರೆ.

ಐಟಿ ದಾಳಿ ಭಯ ಕಾಡಿದ್ದು ನಿಜವೇ?: ಬಿಜೆಪಿ ಸೇರಿದ ಬಳಿಕ ಎಸ್‌.ಎಂ.ಕೃಷ್ಣ ಅವರ ರಾಜಕೀಯ ನಡೆಯನ್ನು ಗಮನಿಸಿದಾಗ ತಮ್ಮ ಹಾಗೂ ಅಳಿಯನ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಬಹುದೆಂಬ ಭಯ ಅವರನ್ನು ಕಾಡಿದ್ದು ಸತ್ಯ ಎಂಬಂತೆ ತೋರುತ್ತದೆ. ಐಟಿ ದಾಳಿಯಿಂದ ಉಂಟಾಗಬಹುದಾದ ಮುಜುಗರದಿಂದ ತಪ್ಪಿಸಿಕೊಳ್ಳಲು, ಆನಂತರದ ಬೆಳವಣಿಗೆಗಳಿಂದ ರಾಜಕೀಯ ವರ್ಚಸ್ಸಿಗೆ ಆಗಬಹುದಾಗಿದ್ದ ಧಕ್ಕೆಯಿಂದ ಪಾರಾಗಲು ಅವರು ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರಬಹುದು. ಅವರ ನಿರ್ಧಾರದಿಂದ ಆದಾಯ ತೆರಿಗೆ ದಾಳಿಯಿಂದ ಪಾರಾಗಲು ಸಾಧ್ಯವಾಯಿತು ಎನ್ನುವ ಮಾತುಗಳು ಇದೀಗ ಜನಮಾನಸದೊಳಗೆ ಕೇಳಿಬರುತ್ತಿವೆ. ಭವಿಷ್ಯದಲ್ಲಿ ನನ್ನ ಹಾಗೂ ಕುಟುಂಬದವರ ಮೇಲೆ ನಡೆಯಬಹುದಿದ್ದ ಐಟಿ ದಾಳಿಯನ್ನು ಗ್ರಹಿಸಿದ್ದ ಎಸ್‌.ಎಂ.ಕೃಷ್ಣ ಅವರು ಪಕ್ಷ ಬಿಡುವ ಸಮಯದಲ್ಲಿ ಅವರ ವಿರುದಟಛಿ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಅವುಗಳಿಗೆ ಉತ್ತರಿಸುವ ಗೋಜಿಗೆ ಹೋಗಲಿಲ್ಲ.

ದೇಶವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕತ್ವದ ಗುಣ ಮೋದಿ ಅವರಲ್ಲಿದೆ ಎಂದು ಹೊಗಳುತ್ತಲೇ ಕೇಸರಿ ವಸ್ತ್ರವನ್ನು ಹೆಗಲಿಗೇರಿಸಿಕೊಂಡು ಕಮಲ ಪಾಳಯವನ್ನು ಸೇರಿಕೊಂಡರು.

– ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.