ಶಂಭುಲಿಂಗೇಶ್ವರ ದೇಗುಲ ಪ್ರವೇಶಕ್ಕೆ ಮುಕ್ತ ಅವಕಾಶ
Team Udayavani, Jun 7, 2023, 3:48 PM IST
ಭಾರತೀನಗರ: ಸಮೀಪದ ಅರೆಚಾಕನಹಳ್ಳಿ ಗ್ರಾಮದಲ್ಲಿ ಸೋಮವಾರ ಶ್ರೀ ಶಂಭುಲಿಂಗೇಶ್ವರ ದೇಗುಲದಲ್ಲಿ ಪರಿಶಿಷ್ಟರಿಗೆ ಪೂಜೆ ಮಾಡಲು ಹಾಗೂ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮದಲ್ಲಿ ಶಾಂತಿಸಭೆ ನಡೆಸಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗಲಕ್ಷ್ಮೀ, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಸಿಪಿಐ ಆನಂದ್, ಕಂದಾಯ ನಿರೀಕ್ಷಕ ಮಹೇಶ್ ನೇತೃತ್ವದಲ್ಲಿ ದಲಿತ ಹಾಗೂ ಸವರ್ಣೀಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಪರಿಶಿಷ್ಟರನ್ನು ದೇವಸ್ಥಾನಕ್ಕೆ ಪ್ರವೇಶ ಮಾಡಿ, ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಒಗ್ಗಟ್ಟಿನಿಂದ ಹಬ್ಬ ಆಚರಿಸಿ: ಕೆ. ಎಂ.ದೊಡ್ಡಿ ಠಾಣೆ ಸಿಪಿಐ ಆನಂದ್ ಮಾತನಾಡಿ, ಗ್ರಾಮದಲ್ಲಿ ಶ್ರೀಶಂಭುಲಿಂಗೇಶ್ವರ, ಭೈರವೇಶ್ವರ ಕೊಂಡೋತ್ಸವದಲ್ಲಿ ಪರಿಶಿಷ್ಟರಿಗೆ ದೇಗುಲ ಪ್ರವೇಶ ಹಾಗೂ ಪೂಜೆಗೆ ನಿರಾಕರಿಸಿದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸಂವಿಧಾನದ ಆಶಯದಂತೆ ದಲಿತರು ಮುಕ್ತವಾಗಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿದ್ದರೂ, ಗ್ರಾಮದಲ್ಲಿ ಕೆಲ ಕಟ್ಟುಪಾಡುಗಳಿಗೆ ಒಳಗಾಗಿ, ಅವಕಾಶ ನೀಡದಿರುವುದು ಕಾನೂನು ಬಾಹಿರವಾಗಿದೆ. ಗ್ರಾಮದಲ್ಲಿ ಸರ್ವ ಸಮುದಾಯಗಳು ಒಗ್ಗಟ್ಟು, ಭಿನ್ನಾಭಿಪ್ರಾಯಗಳಿಲ್ಲದೆ ಹಬ್ಬ ಆಚರಣೆ ಮಾಡಬೇಕು. ಕಾನೂನಿಗೆ ಗೌರವ ಸಲ್ಲಿಸಬೇಕು. ಅಲ್ಲದೆ, ಗ್ರಾಮದಲ್ಲಿ ಈ ರೀತಿ ಘಟನೆ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಶ್ರೀನಿವಾಸ, ಮುಖಂಡರಾದ ಶಿವಲಿಂಗಯ್ಯ, ಚಿಕ್ಕಸ್ವಾಮಿ, ಜಾನಪದ ಕಲಾವಿದ ಸುಂದ್ರೇಶ, ಗ್ರಾಪಂ ಸದಸ್ಯ ಸತೀಶ್, ಜವರಾಯಿ, ಗುಜ್ಜೆàಗೌಡ, ಚಿದಂಬರ ಮೂರ್ತಿ, ನಾಡಗೌಡರಾದ ಕುಳ್ಳೆಗೌಡ, ಶಿವಲಿಂಗೇಗೌಡ, ಗೂಳಿಗೌಡ, ಗ್ರಾಮ ಲೆಕ್ಕಿಗ ಅಕ್ಷಯ್ ಕೀರ್ತಿ, ಪೊಲೀಸ್ ಶ್ರೀಧರ್ ರಾವ್ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.