ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ
Team Udayavani, Dec 13, 2019, 2:38 PM IST
ಮಳವಳ್ಳಿ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಿತು.
ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್‌ರಾಜ್ ಮಾತನಾಡಿ, ಮಳವಳ್ಳಿ ತಾಲೂಕು ತನ್ನದೇ ಆದ ಇತಿಹಾಸ ಹೊಂದಿದೆ. ಶ್ರೀ ಮಹದೇಶ್ವರ, ಶ್ರೀ ಮಂಟೇಸ್ವಾಮಿ ಶ್ರೀಸಿದ್ದಪ್ಪಾಜಿಯವರು ನಡೆದಾಡಿರುವ ಸ್ಥಳವಾಗಿದೆ. ಹಲವಾರು ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ತಾಲೂಕಿನಲ್ಲಿ ಸುಸಜ್ಜಿತ ಗ್ರಂಥಾಲಯ ಇಲ್ಲದಿರುವುದು ವಿಷಾದನೀಯ ಎಂದು ಹೇಳಿದರು.
ಈಗಾಗಲೇ ಇರುವ ಗ್ರಂಥಾಲಯದಲ್ಲಿ ವಿದ್ಯುತ್ ಸೇರಿದಂತೆ ಯಾವುದೇ ಮೂಲ ಸೌಲಭ್ಯಗಳಿಲ್ಲ.ಯಾವುದೇ ಇತಿಹಾಸಕ್ಕೆ ಸಂಬಂಧಿಸಿದ ಪುಸ್ತಕಗಳಿಲ್ಲ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ಕೂಡಲೇ ಸುಸಜ್ಜಿತ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಕೆಂಪಯ್ಯ, ಬಸಪ್ಪ ನೆಲಮಾಕನಹಳ್ಳಿ, ಮ.ಸಿ. ನಾರಾಯಣ್, ಮೆಹಭೂಬ್ ಪಾಷಾ, ಜಯರಾಜು ಮೊದಲಾದವರು ಸಹಿ ಹಾಕಿ ಸಹಿ ಸಂಗ್ರಹ ಚಳವಳಿಗೆ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.