ಎಪಿಎಂಸಿ ಮಸೂದೆಯಿಂದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿ
Team Udayavani, Sep 23, 2020, 3:56 PM IST
ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಸೂದೆಗಳು ದೇಶದ ಕೃಷಿ ವಲಯದಲ್ಲಿ ಕ್ರಾಂತಿ ತರಲಿವೆ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯಲಿದೆ. ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಹಾಗೂ ಅಗತ್ಯತೆ ಎರಡನ್ನೂಹೊಸ ಮಸೂದೆಗಳು ಪೂರೈಸಲಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ತಿಳಿಸಿದರು.
ದೇಶದ ಅನ್ನದಾತ ತಾನು ಬೆಳೆದ ಉತ್ಪನ್ನಗಳನ್ನು ತಾನೇ ಮಾರಾಟ ಮಾಡಲು ಅನುಕೂಲಕರ ವಾತಾವರಣ ಸೃಷ್ಟಿಸಲು ಕೇಂದ್ರ ಜಾರಿಗೊಳಿಸಿದ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗಳ (ಎಪಿಎಂಸಿ ಕಾಯ್ದೆ) ಎರಡೂ ಸದನದಲ್ಲಿ ಮಂಡನೆಯಾಗಿ ಕಾಯ್ದೆಯಾಗಿ ರೂಪುಗೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಾರಾಟಕ್ಕೆ ಸೌಲಭ್ಯ: ಮಸೂದೆಯಿಂದ ಉತ್ತಮ ಬೆಳೆ ಬೆಳೆಯುವತ್ತ ರೈತ ಪ್ರೇರಿತನಾಗುತ್ತಾನೆ. ಒಮ್ಮೆ ಹೆಚ್ಚುವರಿ ಇಳುವರಿ ಪಡೆದರೆ, ರೈತನ ಆದಾಯವೂ ಸಹಜವಾಗಿ ಹೆಚ್ಚುತ್ತದೆ. ವಿವಿಧ ರಾಜ್ಯಗಳ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗಳ ಅನ್ವಯ ನೋಂದಣಿ ಮಾಡಿಕೊಂಡಿರುವಮಾರುಕಟ್ಟೆಗಳಿಗೆ ಹೊರತಾಗಿಯೂ ರೈತರು ಉತ್ಪನ್ನಗಳನ್ನು ಮಾರಾಟ ಮಾಡುವ ಸೌಲಭ್ಯ ನೀಡಲಾಗಿದೆ ಎಂದರು.
ಕಾನೂನಾತ್ಮಕ ಚೌಕಟ್ಟು: ಮಸೂದೆಯಿಂದ ರೈತರು ಹಾಗೂ ವ್ಯಾಪಾರಿಗಳಿಗೆ ತಮಗಿಷ r ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರ್ಯವನ್ನು ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗದಿಪಡಿಸಲು ನೆರವು ನೀಡಲಾಗಿದೆ. ಕೃಷಿ ಉತ್ಪನ್ನಗಳ ಪಾರದರ್ಶಕ, ತಡೆರಹಿತ ಅಂತರರಾಜ್ಯ ಹಾಗೂ ರಾಜ್ಯದೊಳಗಿನ ವ್ಯಾಪಾರಕ್ಕೆ ಉತ್ತೇಜನ ನೀಡಲಾಗಿದೆ. ಉತ್ಪನ್ನದ ಆನ್‌ಲೈನ್ ವ್ಯಾಪಾರಕ್ಕೆ(ಇ-ಟ್ರೇಡಿಂಗ್) ಒತ್ತು ನೀಡಲು ಕಾನೂನಾತ್ಮಕ ಚೌಕಟ್ಟನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ರೈತರಿಗೆ ಭದ್ರತೆ: ಮಸೂದೆ ಮೂಲಕ ಕೃಷಿ ಉದ್ಯಮ ಸಂಸ್ಥೆಗಳು, ಸಗಟು ವ್ಯಾಪಾರಿಗಳು, ರಫ್ತುದಾರರು, ಚಿಲ್ಲರೆ ವ್ಯಾಪಾರಿಗಳೊಂದಿಗೆ ವಹಿವಾಟು ನಡೆಸಲು ರೈತರಿಗೆ ಭದ್ರತೆ ಹಾಗೂ ಪ್ರೋತ್ಸಾಹ ನೀಡುವ ಕೃಷಿ ಒಪ್ಪಂದಗಳ ಕುರಿತು ರಾಷ್ಟ್ರೀಯ ಚೌಕಟ್ಟು ನಿರ್ಮಿಸುವ ಧ್ಯೇಯವನ್ನು ಹೊಂದಿದೆ. ನ್ಯಾಯಯುತ ದರ ಚೌಕಟ್ಟಿನೊಳಗೆ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸೇವೆ ಗಳನ್ನು ಒದಗಿಸುವ ಗುರಿ ಹೊಂದಿದೆ ಎಂದರು.
ರಫ್ತಿಗೂ ಒತ್ತು: ಕೃಷಿ ರಫ್ತಿಗೂ ಮಸೂದೆ ಒತ್ತು ನೀಡಲಿದೆ. ಶೇ.86ರಷ್ಟು ಸಣ್ಣ ವರ್ಗದ ರೈತರಿದ್ದಾರೆ. ಒಮ್ಮೆ ಇವರಿಗೆ ಯಾವುದೇ ಕಾಯ್ದೆ ಮೂಲಕ ತಾವು ಬೆಳೆದ ಬೆಳೆಯ ನ್ಯಾಯಯುತ ಬೆಲೆ ಬಗ್ಗೆ ಮುಂಚಿತವಾಗಿ ಮಾಹಿತಿ ದೊರೆತರೆ ಲಾಭದ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಿದೆ ಎಂದು ತಿಳಿಸಿದರು.
ಆಧುನಿಕ ಕೃಷಿಗೆ ಸಹಕಾರಿ: ಆಧುನಿಕ ತಂತ್ರಜ್ಞಾನ ಬಳಸಿ, ಬೆಳೆ ಬೆಳೆಯಲು ಮಸೂದೆ ಸಹಕಾರಿ ಅಲ್ಲದೆ, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ದೊಡ್ಡ ವ್ಯಾಪಾರಿಗಳು ಹಾಗೂ ರಫ್ತುದಾರರನ್ನು ತಲುಪಲು ಮಸೂದೆ ನೆರವಾಗಲಿದೆ. ಕೃಷಿ ವಲಯದಲ್ಲಿ ಸ್ವಾತಂತ್ರ್ಯ ತರುವಲ್ಲಿ ಕೃಷಿ ವಲಯದ ಮೂಲ ಸೌಕರ್ಯ ಅಭಿವೃದ್ಧಿ, ಹೂಡಿಕೆ, ಸೆಳೆಯುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.
ನಷ್ಟ ಭರಿಸುವ ಜವಾಬ್ದಾರಿ: ಬೆಳೆ ಖರೀದಿಸುವ ಬಂಡವಾಳಶಾಹಿಗಳು ಅಗತ್ಯವಿರುವ ಯಂತ್ರೋಪಕರಣಗಳನ್ನು ರೈತರಿಗೆ ಒದಗಿಸಬೇಕು. ರೈತರಿಗೆ ಸೂಕ್ತ ತಾಂತ್ರಿಕ ಸಲಹೆ,ಬೆಳೆ ನಾಶವಾದಲ್ಲಿ ಪೂರ್ಣ, ನಷ್ಟ ಭರಿಸುವ ಜವಾಬ್ದಾರಿ ಬಂಡವಾಳಶಾಹಿಗಳ ಮೇಲೆ ಇರುತ್ತದೆ. ಎಪಿಎಂಸಿಯಲ್ಲದೆ, ಬೇರೆ ಕಡೆ ರೈತರ ವ್ಯಾಪಾರಕ್ಕೂಈಕಾಯ್ದೆಯಿಂದ ರಕ್ಷಣೆ ಸಿಗುವುದಲ್ಲದೆ, ರೈತರ ಉತ್ಪನ್ನಗಳಿಗೆ ನಿಶ್ಚಿತ ಲಾಭ ಸಿಗಲು ಕೇಂದ್ರ ಸರ್ಕಾರ ರೈತಪರ ಕಾಯ್ದೆ ಜಾರಿಗೊಳಿಸಿರುವುದು ರೈತರಿಗೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.
ಬಂಡವಾಳಶಾಯಿ, ದಲ್ಲಾಳಿಗಳಿಂದ ಗೊಂದಲ: ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಕೆ.ಎಸ್ .ನಂಜುಂಡೇಗೌಡ ಮಾತನಾಡಿ, ಎಪಿಎಂಸಿ ಕಾಯ್ದೆ ಜಾರಿಗೊಳಿಸದಂತೆ ಬಂಡವಾಳಶಾಯಿಗಳು ಹಾಗೂ ದಲ್ಲಾಳಿಗಳು ರೈತರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಕಾಯ್ದೆಯಲ್ಲಿ ಏನೆಲ್ಲಾ ಇದೆ ಎಂಬ ಬಗ್ಗೆ ರೈತರಿಗೆ ಅರಿವು ಇಲ್ಲವಾಗಿದೆ. ನೂತನ ಎಪಿಎಂಸಿ ಕಾಯ್ದೆಯಿಂದಾಗಿ ರೈತರು ಬಹಳಷ್ಟು ಅನುಕೂಲ ಪಡೆಯಬಹುದಾಗಿದೆ. ಆನ್‌ಲೈನ್ ನಲ್ಲಿ ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶ ಇದೆ ಎಂದರು.
ಆಲೆಮನೆಗಳನ್ನು ಸದೃಢತೆ ಅಗತ್ಯ: ಗುಡಿ ಕೈಗಾರಿಕೆಗೆ ಆದ್ಯತೆ ನೀಡುವ ಸಲುವಾಗಿ ಆತ್ಮನಿರ್ಭರ ಯೋಜನೆಯಲ್ಲಿ ಇತ್ತೀಚೆಗೆ ಸಹಕಾರ ಸಚಿವರು ಜಿಲ್ಲೆಯ ಆಲೆಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೆಮನೆಗಳಿಗೆ ಆದ್ಯತೆ ನೀಡುವ ಅಗತ್ಯವಿದೆ. 4ರಿಂದ 5 ಲಕ್ಷ ರೂ. ಸಾಲ ಸೌಲಭ್ಯ ನೀಡಿ ಆಲೆ ಮನೆಗಳನ್ನು ಪುನಶ್ಚೇತನ ಗೊಳಿಸಿ, ರೈತರ ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸಬೇಕಾಗಿದೆ. ಈ ಬಗ್ಗೆ ಸಂಬಂಸಿದ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು. ಮುಖಂಡ ಜೋಗಿಗೌಡ, ಮಾಧ್ಯಮ ಪ್ರಮುಖ್ ನಾಗಾನಂದ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.