ಶ್ರೀರಂಗಪಟ್ಟಣ: ಬೃಹತ್ ಆರೋಗ್ಯ ಮೇಳ, ಬೈಕ್ ರ್‍ಯಾಲಿ
Team Udayavani, Apr 22, 2022, 8:10 PM IST
ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ಏಪ್ರಿಲ್ 25 ರ ಸೋಮವಾರ ಗಂಜಾಂ ರಸ್ತೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯುವ ತಾಲ್ಲೂಕು ಮಟ್ಟದ ಆರೋಗ್ಯ ಮೇಳದ ಜಾಗೃತಿಗಾಗಿ ಬೈಕ್ ರ್‍ಯಾಲಿ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎನ್. ಕೆ. ವೆಂಕಟೇಶ್ ರವರು ಬೈಕ್‌ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಆರೋಗ್ಯ ಮೇಳದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿವಿಧ ತಜ್ಞ ವೈದ್ಯರು ಉಚಿತ ತಪಾಸಣೆ ಉಚಿತ ಚಿಕಿತ್ಸೆ ನೀಡುವರು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಮೇಲ್ಮಟ್ಟದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು. ರಾಷ್ಟೀಯ ಆರೋಗ್ಯ ಕಾರ್ಯಕ್ರಮಗಳ ವಸ್ತು ಪ್ರದರ್ಶನ ಹಾಗೂ ಜಾಗೃತಿ ಕೂಡ ನಡೆಯಲಿದೆ ಎಂದು ಅವರು ತಿಳಿಸಿದರು.
ಬೈಕ್ ರ್‍ಯಾಲಿಯು ವಿವಿ‘ ಜಾಗೃತಿ ಸಂದೇಶಗಳ ಫಲಕ ಪ್ರದರ್ಶನ ಮತ್ತು ಮೈಕಿಂಗ್ ಮೂಲಕ ಸಾರ್ವಜನಿಕ ಆಸ್ಪತ್ರೆ ಮುಖ್ಯ ರಸ್ತೆ ಪುರಸಭೆ ವೃತ್ತ ಮಿನಿವಿಧಾನಸೌಧ ವೃತ್ತ ಹಾಗೂ ಶ್ರೀ ರಂಗನಾಥಸ್ವಾಮಿ ದೇವಸ್ಥಾನವರೆಗೆ ರ್‍ಯಾಲಿ ನಡೆಯಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ .ಡಿ ಬೆನ್ನೂರ ,ತಾಲ್ಲೂಕು ಮೇಲ್ವಿಚಾರಕ ರಾದ ಜಿ. ಮೋಹನ್ ,ಮಂಗಳ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೆಂಪೇಗೌಡ, ಸಲೀಂ ಪಾಷಾ ,ರಾಜು ,ಜಿ.ಬಿ.ಹೇಮಣ್ಣ, ಕೃಷ್ಣೇಗೌಡ, ಚಂದನ್,ಆರೋಗ್ಯ ಇಲಾಖೆ ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.