ಜಿಲ್ಲೆಯಲ್ಲಿ ಡಿ.23ಕ್ಕೆ ರಾಜ್ಯ ಮಟ್ಟದ ರೈತ ಸಮಾವೇಶ

Team Udayavani, Nov 24, 2019, 5:15 PM IST

mandya-tdy-2

ಭಾರತೀನಗರ: ಕರ್ನಾಟಕ ರಾಜ್ಯ ರೈತ ಸಂಘದಿಂದ ಮುಂದಿನ ತಿಂಗಳು ಡಿ.23ರಂದು ನಡೆಯುವ ವಿಶ್ವ ರೈತ ದಿನಾಚರಣೆ ರಾಜ್ಯಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಇಲ್ಲಿನ ಅಂಬೇಡ್ಕರ್‌ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಡಿ.21ರಂದು ಎಂ.ಡಿ.ಸುಂದರೇಶ್‌ ಅವರ ಸ್ಮರಣೆ ಕಾರ್ಯವಿದ್ದು, 23ರಂದು ರೈತ ದಿನಾಚರಣೆಯನ್ನು ಆಯೋಜಿಸಲಾಗುತ್ತಿದೆ.

ಈ ಸಮಾವೇಶದಲ್ಲಿ ನೂರು ಮಂದಿ ರೈತ ಮಹಿಳೆಯರಿಗೆ ಸನ್ಮಾನ ಮಾಡಲು ನಿಶ್ಚಯಿಸಲಾಗಿದೆ. ಅದರಲ್ಲಿ ಈ ಭಾಗದ 60 ಮಹಿಳೆಯರು, ಜಿಲ್ಲೆಯಿಂದ 30 ಸೇರಿ 90 ಮಂದಿಯಾಗುತ್ತಾರೆ. ಇನ್ನು ಉಳಿದ ಹತ್ತು ಮಂದಿ ಮಹಿಳಾ ಸಾಧಕರನ್ನು ರಾಜ್ಯಮಟ್ಟದಲ್ಲಿ ಗುರುತಿಸಿ, ಒಟ್ಟು 101 ಮಹಿಳಾ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸುವುದು ಸೂಕ್ತ ಎಂದು ಸಲಹೆ ನೀಡಿದರು. ಇದಕ್ಕೆ ಸಭೆಯು ಸಹಮತ ವ್ಯಕ್ತಪಡಿಸಿತು.

ರೈತ ನಾಯಕ ದಿ. ಕೆ.ಎಸ್‌ ಪುಟ್ಟಣ್ಣಯ್ಯ, ಎಂ.ಡಿ. ಸುಂದರೇಶ್‌, ಕೋಣಸಾಲೆ ನರಸರಾಜು, ವಳಗೆರೆಹಳ್ಳಿ ಅಶೋಕ್‌ ಸೇರಿದಂತೆ ಹಲವು ದಿವಂಗತ ರೈತ ನಾಯಕರ ಸ್ಮರಣೆ ಕೂಡ ನಡೆಯಲಿದೆ.  ಬಳಿಕ ಮಾತನಾಡಿದ ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ, ರೈತ ಸಂಘದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ಆದ್ದರಿಂದ ಸಮಾವೇಶದಲ್ಲೂ ಹಾರ ತುರಾಯಿಗಳಂತಹ ಹೆಚ್ಚು ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದು ಸೂಕ್ತ. ಜತೆಗೆ ಡಿ.14, 15ರಂದು ಎರಡು ದಿನಗಳ ಕಾಲ ಮೇಲುಕೋಟೆ ವಿಭಾಗದ ರೈತರಿಗೆ ತರಬೇತಿ ಶಿಬಿರ ನಡೆಸಿದ ಬಳಿಕ ಈ ಸಮಾವೇಶಕ್ಕೆ ಕರೆತರುವುದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ರೈತ ಮುಖಂಡ ಮಾದರಹಳ್ಳಿ ದೇಶೀಗೌಡ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರರವರಿಗೆ ಅಣ್ಣೇಗಿಡ ನೀಡುವ ಮೂಲಕ ಚಾಲನೆ ನೀಡಲಾಯಿತು. ಈ ವೇಳೆಯಲ್ಲಿ ನೆರೆದಿದ್ದ ನೂರಾರು ರೈತ ಮುಖಂಡರು ಸಮಾವೇಶಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪೂರ್ವಭಾವಿ ಸಭೆಯಲ್ಲಿ ಜಿ.ಪಂ ಮಾಜಿ ಸದಸ್ಯರಾದ ಕೆ.ಟಿ.ಗೋವಿಂದೇಗೌಡ, ಕೆಂಪೂಗೌಡ, ಪಾಂಡವಪುರ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷ ನಾಗರಾಜು, ರೈತ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಶಂಭೂನಹಳ್ಳಿ ಸುರೇಶ, ಉಪಾಧ್ಯಕ್ಷ ಅಣ್ಣೂರು ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ, ಸಾದೊಳಲು ಪುಟ್ಟಸ್ವಾಮಣ್ಣ, ರವಿಕುಮಾರ್‌, ಬನ್ನಹಳ್ಳಿ ರಮೇಶ್‌, ಪದಾಧಿಕಾರಿಗಳಾದ ಗೋವಿಂದೇಗೌಡ, ಕೆನ್ನಾಳು ನಾಗರಾಜು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.