ಯುವಶಕ್ತಿಯಿಂದ ಭಾರತ ವಿಶ್ವ ಗುರುವಾಗಲು ಸಾಧ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Team Udayavani, Jan 4, 2022, 6:34 PM IST

ಯುವಶಕ್ತಿಯಿಂದ ಭಾರತ ವಿಶ್ವ ಗುರುವಾಗಲು ಸಾಧ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಮಂಡ್ಯ: ಭಾರತ ವಿಶ್ವ ಗುರುವಾಗಲು ಯುವಶಕ್ತಿಯಿಂದ ಸಾಧ್ಯವಿದೆ. ಈಗಾಗಲೇ ಭಾರತ ವಿಶ್ವಗುರುವಾಗಿ ಗುರುತಿಸಿಕೊಂಡಿದೆ. ಮುಂದೆಯೂ ವಿಶ್ವಗುರುವಾಗಲು ಯುವಕರು ಮಹತ್ವದ ಪಾತ್ರ ವಹಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವ ಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾರ್ಷಲ್ ಆರ್ಟ್ಸ್, ಯುವಕರ ಕಲಾ ಪ್ರದರ್ಶನದ ಕಾರ್ಯಾಗಾರಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯುವಕ-ಯುವತಿಯರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಎಂದರು.

ವಿವೇಕಾನಂದರ ನಂತರ ಯುವ ಸಬಲೀಕರಣವನ್ನು ರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗುತ್ತಿರುವುದು ತುಂಬಾ ಹೆಮ್ಮೆಯ ವಿಚಾರವಾಗಿದೆ. ವಿವೇಕಾನಂದರು ಚಿಕಾಗೋದಲ್ಲಿ ಭಾಷಣ ಮಾಡುವಾಗ ಸಹೋದರರೆ, ಸಹೋದರಿಯರೇ ಎಂದು ಗಮನ ಸೆಳೆದಿದ್ದರು. ವಿವೇಕಾನಂದರವರು ತಮ್ಮ ಭಾಷಣದಲ್ಲಿ ರಾಷ್ಟ್ರವನ್ನು ಉನ್ನತೀಕರಣಕ್ಕೆ ಕರೆದೊಯ್ಯಲು ಯುವಕರ ಅವಶ್ಯಕತೆ ಇದೆ ಎಂದಿದ್ದರು. ಭಾರತ ದೇಶ ಯುವಶಕ್ತಿಯ ದೇಶವಾಗಿದೆ. ಯುವಶಕ್ತಿಯನ್ನು ಸದ್ಬಳಕೆ ಮಾಡಿದರೆ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

ವಿವೇಕಾನಂದರು ಪರಿವರ್ತನೆಗೆ ಯುವಕರ ಪಾತ್ರ ದೊಡ್ಡದು ಎಂದು ಹೇಳುವ ಮೂಲಕ ಸ್ಫೂರ್ತಿಯಾಗಿದ್ದಾರೆ. ಅದರಂತೆ ಭಾರತದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ಯುವಶಕ್ತಿ ಅಭಿವೃದ್ಧಿಯಲ್ಲಿ ಮೊದಲ ಸ್ಥಾನದಲ್ಲಿದೆ. ಯುವಕರು ಸದೃಢ ದೇಶ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ರಾಷ್ಟ್ರದಲ್ಲಿ ಪರಿವರ್ತನೆ, ಬಲವರ್ಧನೆ ಹಾಗೂ ವಿಶ್ವ ಮಟ್ಟದಲ್ಲಿ ಭಾರತವನ್ನು ಗುರುತಿಸಲು ಯುವಜನರ ಅವಶ್ಯಕತೆ ಇದೆ. ದೇಶದಲ್ಲಿ ಕೈಗೊಂಡಿರುವ ಆತ್ಮನಿರ್ಭರ್ ಯೋಜನೆಯಲ್ಲಿ ಯುವಕರಿಗೆ ಅನುಕೂಲವಾಗುವ ಕಾರ್ಯಕ್ರಮಗಳಿವೆ. ರಾಜ್ಯ ಸರ್ಕಾರ ಯುವಜನರ ಪ್ರೋತ್ಸಾಹಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡಿದೆ ಎಂದರು.

ಈ ರೀತಿಯ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವುದರಿಂದ ಯುವಕರಿಗೆ ಮಾರ್ಗದರ್ಶನ, ಪ್ರೋತ್ಸಾಹ, ಪ್ರತಿಭೆ ಗುರುತಿಸುವ ಮೂಲಕ ಮತ್ತಷ್ಟು ಸದೃಢಗೊಳಿಸಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ದೇಶ ಸದೃಢವಾಗಿ ಬೆಳೆಯಲಿದೆ. ಯುವ ಜನರು ಮಾನಸಿಕವಾಗಿ ಮತ್ತು ದೈಹಿಕವಾಗಿ ಬೆಳೆಯಲಿದ್ದಾರೆ. ಭಾರತ ಯುವ ಜನರ ದೇಶ. ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. ಈ ರಾಷ್ಟçವನ್ನು ಮುನ್ನೆಡೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು.

ಐಐಟಿ, ಐಎಎಂ ದೇಶದ ಅತಿ ದೊಡ್ಡ ಶಿಕ್ಷಣ ಸಂಸ್ಥೆಗಳು. ಇವುಗಳ ಮೂಲಕ ಯುವ ಜನರನ್ನು ತಯಾರು ಮಾಡುವ ಅವಶ್ಯಕತೆ ಇದೆ. ತರಬೇತಿ ನೀಡಿದರೆ ಪ್ರಪಂಚ ಭಾರತದ ಯುವಕರನ್ನು ನೋಡಿ ಆಶ್ಚರ್ಯಪಡಲಿದೆ. ಆದಿಚುಂಚನಗಿರಿ ಮಠವು ಹಲವಾರು ದಶಕಗಳಿಂದ ಸಾವಿರಾರು ಯುವಕರನ್ನು ಸಮಾಜಕ್ಕೆ ಕೊಡುಗೆ ನೀಡಿದೆ. ಶಿಕ್ಷಣ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಪ್ರಶಂಶನೀಯ ಎಂದರು.

ಆದಿಚುAಚನಗಿರಿ ಮಠವು ಸಮಾಜದಲ್ಲಿ ವ್ಯಕ್ತಿ ವಿಕಾಸ ಹಾಗೂ ಮೌಲ್ಯಯುತ ಯುವಜನರನ್ನು ಹೊರ ತರುವಲ್ಲಿ ಪರಿಣಾಮಕಾರಿಯಾದ ಕಾರ್ಯವನ್ನು ಮಾಡುತ್ತಿದೆ. ಇಂತಹ ಕಾರ್ಯವು ಯುವ ಜನರನ್ನು ಸದೃಢಗೊಳಿಸುವಲ್ಲಿ ಸಹಕಾರಿಯಾಗಲದೆ. ಮುಂದೆ ಈ ಸದೃಢ ಯುವ ಸಮುದಾಯ ಭಾರತ ನಿರ್ಮಾಣದಲ್ಲಿ ತೊಡಗಲಿದೆ ಎಂದು ತಿಳಿಸಿದರು.

ಸಚಿವರಾದ ಕೆ.ಸಿ.ನಾರಾಯಣಗೌಡ, ಸುನಿಲ್ ಕುಮಾರ್, ಶಾಸಕರಾದ ಕೆ.ಸುರೇಶ್‌ಗೌಡ, ಎಂ.ಶ್ರೀನಿವಾಸ್, ಯುವಜನ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಯುವ ನೀತಿಯ ಅಧ್ಯಕ್ಷ ಡಾ.ಆರ್.ಬಾಲಸುಬ್ರಮಣ್ಯಂ, ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎಸ್.ಅಶ್ವಥಿ, ಜಿಪಂ ಸಿಇಒ ದಿವ್ಯಪ್ರಭು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.