ಸಿಎಂ ಉದ್ಘಾಟಿಸಿದ್ದ ಕಲ್ಲು ಗಣಿಗಾರಿಕೆ: ಲೋಕಾ ತನಿಖೆಗೆ
Team Udayavani, Feb 14, 2018, 8:31 AM IST
ಮಂಡ್ಯ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣವೊಂದನ್ನು ಸರ್ಕಾರವೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಸೂರು ಮಹಾರಾಜರಿಗೆ ಸೇರಿದ ಖಾಸಗಿ ಆಸ್ತಿ ಯನ್ನು ಕಬಳಿಸಲು ಹಾಗೂ ಕಳ್ಳತನದಿಂದ ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ನೆರವಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ
ಕೆ.ಆರ್.ರವೀಂದ್ರ ರಾಜ್ಯಪಾಲರಿಗೆ 2017ರ ಸೆ.18ರಂದು ದೂರು ನೀಡಿದ್ದರು. ರಾಜ್ಯಪಾಲರ ನಿರ್ದೇಶನದಂತೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಮ್ಮ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು 2018ರ ಜನವರಿ 23ರಂದು ಲೋಕಾಯುಕ್ತ ಸಂಸ್ಥೆಯ ತನಿಖೆಗೆ ಒಪ್ಪಿಸಿದ್ದಾರೆ.
ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲು ಸರ್ವೇ ನಂ.1ರ 1623.07 ಎಕರೆ ಮೈಸೂರು ಮಹಾರಾಜರಿಗೆ ಸೇರಿದ ಖಾಸಗಿ ಸ್ವತ್ತು. ಸರ್ಕಾರದ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಎಂದು ಬರೆದುಕೊಂಡಿರುವುದು ಜಾಗವನ್ನು ಬಳಿಸುವ ಹುನ್ನಾರವಾಗಿದೆ ಎಂದು ರವೀಂದ್ರ ಆರೋಪಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು 2010ರಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಬಿ.ಎಂ. ನಟರಾಜು ಒಡೆತನದ ಯತಿನ್ ಸ್ಟೋನ್ ಕ್ರಷರ್ ಹಾಗೂ ಕಲ್ಲು ಗಣಿಗಾರಿಕೆ ಉದ್ಘಾಟಿಸಿ ಅಕ್ರಮ ಕಲ್ಲು
ಗಣಿಗಾರಿಕೆಗೆ ಕುಮ್ಮಕ್ಕು ನೀಡಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆಂಬ ಆರೋಪ ಕೇಳಿಬಂದಿತ್ತು.
ಇಲ್ಲಿನ ಕಲ್ಲು ಗಣಿ ಸಂಪತ್ತನ್ನು ನೋಡಿದ್ದ ಸಿಎಂ ಸಿದ್ದರಾಮಯ್ಯ ಅವರು 2014ರ ಫೆ.24ರಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರಿನ ಪ್ರಾದೇಶಿಕ ಆಯುಕ್ತರು, ಗಣಿ, ಲೋಕೋಪಯೋಗಿ ಇಲಾಖೆ ಸೇರಿ ಹಲವು ಅಧಿಕಾರಿಗಳ ಸಭೆ ನಡೆಸಿ ಕಲ್ಲುಪುಡಿ ಘಟಕಗಳಿಗೆ ಅಗತ್ಯವಿರುವ ಕಚ್ಚಾ ಮಾಲಿನ ಸಮಸ್ಯೆ ಬಗೆಹರಿಸಲು
ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಮೈಸೂರು ಮಹಾರಾಜರ ಖಾಸಗಿ ಸ್ವತ್ತಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯ ಅವರೇ ಅಧಿಕಾರಿಗಳ ಮೇಲೆ ಒತ್ತಡ ತಂದಿರುವುದು ಮಂಡ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೈಸೂರು
ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಬರೆದಿರುವ ಪತ್ರವೇ ಸಾಕ್ಷಿ ಎಂದು ರವೀಂದ್ರ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.