ರಾಜ್ಯದ ಪೊಲೀಸ್ ಠಾಣೆಗಳ ಬಲವರ್ಧನೆ
Team Udayavani, Jun 20, 2020, 5:21 AM IST
ಮಂಡ್ಯ: ಆರ್ಥಿಕ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳನ್ನು ಬಲವರ್ಧನೆಗೊಳಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಆರ್ಥಿಕ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ.
ತಾಂತ್ರಿಕತೆ ಬಳಸಿ ಸುಲಭವಾಗಿ ಜನರನ್ನು ವಂಚಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಬ್ಯಾಂಕುಗಳೂ ಜಾಗೃತವಾಗಬೇಕಿದೆ. ಅವರ ನಿರ್ಲಕ್ಷ್ಯವೂ ಆರ್ಥಿಕ ಅಪರಾ ಧಗಳಿಗೆ ಪ್ರಮುಖ ಕಾರಣವಾಗಿದೆ. ಆರ್ಥಿಕ ಅಪರಾಧಗಳಲ್ಲಿ ಪೊಲೀಸರ ತನಿಖೆಗೆ ಅತ್ಯಾಧುನಿಕ ಸಲಕರಣೆ ಒದಗಿಸಲಾ ಗುವುದು. ಐಟಿ ಕ್ಷೇತ್ರದ ತಜ್ಞರನ್ನು ಇದಕ್ಕೆ ಜೋಡಣೆ ಮಾಡುವ ಯೋಚನೆ ಇದೆ ಎಂದರು.
ಲ್ಯಾಬ್ ಸ್ಥಾಪನೆ: ಎಲ್ಲಾ ಜಿಲ್ಲೆಗಳಲ್ಲೂ ಎಫ್ಎಸ್‌ಎಲ್ ಪರೀಕ್ಷಾಲಯ ತೆರೆಯಲಾಗುವುದು. ಇದರಿಂದ ವರದಿ ವರದಿ ವಿಳಂಬವಾಗದಂತೆ ತನಿಖೆಗೆ ಶಕ್ತಿ ತುಂಬಲಾಗುವು ದು. ಜಿಲ್ಲೆಯಲ್ಲಿ ಪೊಲೀಸರ ವಸತಿ ಗೃಹ ನಿರ್ಮಾಣ ಅರ್ಧಕ್ಕೆ ನಿಂತಿದೆ. ಈ ಕೆಲಸವನ್ನು ಶೀಘ್ರ ಪ್ರಾರಂಭಿಸದಿದ್ದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದರು.
ಮನೆಗಳ ನಿರ್ಮಾಣ: ಸರ್ಕಾರ ನಿವೇಶನದ ಅಳತೆ ಪರಿಷ್ಕರಿಸಿ, ಮುಂದಿನ 5 ವರ್ಷದೊಳಗೆ 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿ ದರು. ದಕ್ಷಿಣ ವಲಯ ಐಜಿಪಿ ವಿಪುಲ್‌ಕುಮಾರ್, ಡೀಸಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಕೆ.ಯಾಲಕ್ಕೀಗೌಡ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪರಶುರಾಮ ಇದ್ದರು.
ವರದಿ ನಿರೀಕ್ಷೆಯಲ್ಲಿದ್ದೇವೆ: ಕೆಆರ್‌ಎಸ್ ಜಲಾಶಯದ ಸುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಅಣೆಕಟ್ಟೆಗೆ ಅಪಾಯವಿದ್ದು, ಈ ಬಗ್ಗೆ ವರದಿ ನಿರೀಕ್ಷೆಯಲ್ಲಿದ್ದೇವೆ. ವರದಿ ಬಂದ ಕೂಡಲೇ ನಿಷೇಧ ಜಾರಿಗೊಳಿಸುವುದಾಗಿ ಬಸವ ರಾಜ ಬೊಮ್ಮಾಯಿ ಭರವಸೆ ನೀಡಿದರು. ಜಿಲ್ಲಾಡಳಿತ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಬೇಬಿಬೆಟ್ಟದಲ್ಲಿ ಗಣಿಗಾರಿಕೆ ಮೇಲೆ ನಿಷೇಧ ಹೇರಿದೆ.
ಜಿಲ್ಲಾಡಳಿತದ ಕ್ರಮದ ವಿರುದ್ಧ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಾವೂ ಗಣಿ ಮತ್ತು ಭೂ ವಿಜ್ಞಾನ, ಜಲಸಂಪನ್ಮೂಲ ಹಾಗೂ ಪರಿಸರ ಇಲಾಖೆಯಿಂದ ಸರ್ವೆ ನಡೆಸಿ ವರದಿ ತರಿಸಿಕೊಳ್ಳುತ್ತಿದ್ದೇವೆ. ವರದಿ ಸರ್ಕಾರದ ಕೈಸೇರಿದ ಗಣಿಗಾರಿಕೆ ಮೇಲೆ ನಿಷೇಧ ಜಾರಿಗೊಳಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.