ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ನಿಗೂಢ ನಾಪತ್ತೆ


Team Udayavani, Sep 12, 2022, 1:41 PM IST

ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ನಿಗೂಢ ನಾಪತ್ತೆ

ಮಂಡ್ಯ: ತಾಲೂಕಿನ ತಂಗಳಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಯೊಬ್ಬ ನಿಗೂಢವಾಗಿ ನಾಪತ್ತೆಯಾಗಿ ರುವ ಘಟನೆ ನಡೆದಿದೆ.

ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಈರೇಗೌಡ ಹಾಗೂ ಲೀಲಾ ದಂಪತಿ ಪುತ್ರ ಎಚ್‌.ಇ. ಕಿಶೋರ್‌(14) ನಾಪತ್ತೆ ಯಾಗಿರುವ ಬಾಲಕ.

ಘಟನೆ ವಿವರ: ಕಿಶೋರ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಈತ ಜು.27 ರಂದು ಊರಿಗೆ ಬಂದಿದ್ದನು. ನಂತರ ತಂದೆ ಈರೇಗೌಡ ಆ.8ರಂದು ವಸತಿ ಶಾಲೆಗೆ ಕರೆ ತಂದಿದ್ದರು. ನಂತರ ಆ.29ರಂದು ಗಣೇ ಶನ ಹಬ್ಬಕ್ಕೆ ಕರೆದು ಕೊಂಡು ಬರಲು ಹೋದಾಗ ಮಗ ಇಲ್ಲದಿರುವು ದನ್ನು ಕಂಡು ಗಾಬರಿಗೊಂಡಿದ್ದಾರೆ. ತಕ್ಷಣ ಪ್ರಾಂಶುಪಾಲ ಹಾಗೂ ಶಿಕ್ಷಕ ರನ್ನು ಪ್ರಶ್ನಿಸಿದಾಗ, “ನಿಮ್ಮ ಮಗ 20 ದಿನಗಳಿಂದ ಶಾಲೆಗೆ ಬಂದಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಇದರಿಂದ ಪೋಷಕರು ಮತ್ತಷ್ಟು ಆತಂಕಗೊಂಡಿದ್ದಾರೆ.

ಶಾಲೆ ಪ್ರವೇಶಿಸಿರುವ ದೃಶ್ಯ ಸೆರೆ: ಬಾಲಕ ನಾಪತ್ತೆ ಯಾಗಿ 25 ದಿನ ಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಕಿಶೋರ್‌ ಶಾಲೆಯ ಕ್ಯಾಂಪಸ್‌ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಹೊರ ಹೋಗುವ ದೃಶ್ಯವೇ ಇಲ್ಲವಾಗಿದೆ. ಇದ ರಿಂದ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ತಬ್ಬಿಬ್ಟಾಗಿದ್ದಾರೆ.

ಪೋಷಕರಿಗೆ ತಿಳಿಸದ ಶಿಕ್ಷಕರು: 20 ದಿನಗಳಿಂದ ವಿದ್ಯಾರ್ಥಿ ಶಾಲೆಗೆ ಬಾರದಿದ್ದರೂ ಪೋಷಕರಿಗೆ ಶಿಕ್ಷಕರು ತಿಳಿಸದೇ ನಿರ್ಲಕ್ಷ್ಯ ವಹಿಸಿ ದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಹೋಗಿ ಆತನ ಕೊಠಡಿ ಪರಿಶೀಲಿಸಿದಾಗ ವಿದ್ಯಾರ್ಥಿಯ ಬಟ್ಟೆ, ಬುಕ್‌ ಇವೆ. ಆದರೆ, ನಮ್ಮ ಮಗ ಮಾತ್ರ ಇಲ್ಲ ಎಂದು ಪೋಷಕರು ತಿಳಿಸಿದ್ದಾರೆ.

ನಮ್ಮ ಮಗ ಬರೆದ ಪತ್ರವಲ್ಲ: ವಿದ್ಯಾರ್ಥಿಗಳ ಕೊಠಡಿಯಲ್ಲಿ ಕಿಶೋರ್‌ ಬರೆದಿಟ್ಟಿದ್ದ ಎನ್ನಲಾದ ಪತ್ರ ಸಿಕ್ಕಿದೆ. ಪತ್ರದಲ್ಲಿ “ಈ ಶಾಲೆ  ಯಲ್ಲಿ ಓದಲು ಇಷ್ಟವಿಲ್ಲ. ಇದನ್ನು ಸಾಕಷ್ಟು ಸಲ ಹೇಳಲು ಪ್ರಯತ್ನಿ  ಸಿದ್ದೇನೆ. ಅಪ್ಪ, ಚಿಕ್ಕಪ್ಪ ದಯವಿಟ್ಟು ನನ್ನನ್ನು ಹುಡುಕಬೇಡಿ’ ಎಂದು ಬರೆದಿದ್ದಾನೆ. ಆದರೆ, ಅದು ನನ್ನ ಮಗ ಬರೆದ ಪತ್ರ ಅಲ್ಲ ಎಂದು ಪೋಷಕರು ಹೇಳುತ್ತಿದ್ದಾರೆ.

ಪೊಲೀಸರಿಗೆ ತಲೆ ನೋವಾದ ಪ್ರಕರಣ: ಬಾಲಕ ನಿಗೂಢವಾಗಿ ನಾಪತ್ತೆಯಾಗಿರುವ ಹಿನ್ನೆಲೆ ಮಂಡ್ಯ ತಾಲೂಕಿನ ಕೆರೆಗೋಡು ಠಾಣೆ  ಯಲ್ಲಿ ದೂರು ದಾಖಲಾಗಿದೆ. ಇದು ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. 25 ದಿನಗಳಾದರೂ ವಿದ್ಯಾರ್ಥಿ ಸುಳಿವು ಸಿಕ್ಕಿಲ್ಲ. ಹೊರ ಹೋಗಿರುವ ಬಗ್ಗೆ ಸಿಸಿಟಿವಿ ಯಲ್ಲಿ ಸೆರೆಯಾಗಿಲ್ಲದ ಕಾರಣ ಪ್ರಕರಣ ಹಲವು ಅನುಮಾನ ಹುಟ್ಟು ಹಾಕಿದೆ.

ವಾರದೊಳಗೆ ಮಾಹಿತಿ ಸಿಗುವ ನಿರೀಕ್ಷೆ: ಪ್ರಾಂಶುಪಾಲ ಲೋಕೇಶ್‌ :  ವಿದ್ಯಾರ್ಥಿ ನಾಪತ್ತೆಯಾದ ಮಾಹಿತಿ ಬಂದ ತಕ್ಷಣ ಪೊಲೀಸರಿಗೆ ದೂರು ನೀಡಿ ಹುಡುಕುವ ಪ್ರಯತ್ನ ಮಾಡುತ್ತಿದ್ದೇವೆ. ಆತ, ತರಗತಿಗೆ ಬಾರದೆ ಎಲ್ಲಿಗೋ ಹೋಗಿದ್ದಾನೆ. ಅಲ್ಲದೆ, ಆತನೇ ಪತ್ರ ಬರೆದಿರುವುದು ಖಚಿತವಾಗಿದೆ. ಅದನ್ನು ತರಗತಿ ಶಿಕ್ಷಕರು ಗುರುತಿಸಿದ್ದಾರೆ. ಹಾಸ್ಟೆಲ್‌ ವಾರ್ಡನ್‌ ಸೇರಿ ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಲ್ಲದೆ, ಆತನ ಪೋಷಕರೂ ವಿದ್ಯಾರ್ಥಿಗೆ ಹೊಡೆಯುತ್ತಿದ್ದರು ಎಂದು ಸಂಬಂಧಿ ಕರೇ ತಿಳಿಸಿದ್ದಾರೆ. ಈ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಾರದೊಳಗೆ ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದು ತಂಗಳಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್‌ ತಿಳಿಸಿದ್ದಾರೆ.

ವರದಿ ನೀಡಲು ಡೀಸಿ ಸೂಚನೆ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು, ಶಿಕ್ಷಕರ ನಿರ್ಲಕ್ಷ್ಯ ಕಂಡು ಬಂದಿದೆ. ಕಳೆದ 2 ದಿನಗಳ ಹಿಂದೆ ನನಗೆ ಮಾಹಿತಿ ಬಂದಿದೆ. ಈಗಾಗಲೇ ಶಿಕ್ಷಣ ಇಲಾಖೆ ಉಪನಿರ್ದೇ ಶಕರಿಗೆ ಸೂಚನೆ ನೀಡಿದ್ದು, ವರದಿ ಬಂದ ನಂತರ, ತಪ್ಪುಗಳನ್ನು ಪರಾಮರ್ಶಿಸಿ ಅಮಾನತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವತಿ ಮಾಹಿತಿ ನೀಡಿದ್ದಾರೆ. ಪತ್ರ ಬರೆದಿದ್ದು  ನನ್ನ ಮಗ ಅಲ್ಲ: ನನ್ನ ಮಗ ನಾಪತ್ತೆಯಾಗಿ ಸುಮಾರು ಒಂದು ತಿಂಗಳೇ ಕಳೆಯುತ್ತಿದೆ. ಆದರೆ, ಇದುವರೆಗೂ ಮಗನ ನಾಪತ್ತೆ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಪೊಲೀಸರೂ ಯಾವುದೇ ಮಾಹಿತಿ ನೀಡುತ್ತಿಲ್ಲ. ಕೇಳಿದರೆ, ಹುಡುಕುತ್ತಿದ್ದೇವೆ ಎನ್ನುತ್ತಾರೆ. ಅಲ್ಲದೆ, ಪತ್ರ ಸಿಕ್ಕಿರುವುದು ನನ್ನ ಮಗ ಬರೆದ ಪತ್ರವಲ್ಲ ಎಂದು ವಿದ್ಯಾರ್ಥಿಯ ತಂದೆ ಈರೇಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.