ಅಭಿವೃದ್ಧಿಗೆ ಶ್ರಮಿಸುತ್ತೇನೆ ಸುಮಲತಾ ಅಂಬರೀಶ್
Team Udayavani, Apr 8, 2019, 3:00 AM IST
ಭಾರತೀನಗರ: ನನ್ನ ಪತಿ ಅಂಬರೀಶ್ ಅವರ ಹಾದಿಯಲ್ಲೇ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನಗೆ ಅವಕಾಶ ನೀಡಿ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾಅಂಬರೀಶ್ ಕೋರಿದರು.
ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಜಿ.ಪಂ ವ್ಯಾಪ್ತಿಯ ದೊಡ್ಡರಸಿನಕೆರೆ, ಶೆಟ್ಟಹಳ್ಳಿ, ಕರಡಕೆರೆ, ಗೌಡಯ್ಯನದೊಡ್ಡಿ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.
ನಾನು ಚುನಾವಣಾ ಪ್ರಚಾರಕ್ಕೆ ಹೋದಕಡೆಯಲೆಲ್ಲಾ ಅಂಬರೀಶ್ ಅಭಿಮಾನಿಗಳು, ಮತದಾರರು ನೀವು ಗೆದ್ದೇ ಗೆಲುತ್ತೀರಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕೆಂದು ಆಶಿಸುತ್ತಿದ್ದಾರೆ ಎಂದರು.
ನನ್ನ ಮೇಲೆ ಇಲ್ಲದ ಸಲ್ಲದ ಆರೋಪ, ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತದಾರರೇ ಶಕ್ತಿ ತುಂಬಿದ್ದಾರೆ. ನೀವು ನನ್ನ ಕೈಬಿಡುವುದಿಲ್ಲ ಎಂದು ನಂಬಿದ್ದೇನೆ ಎಂದರು.
ಮಂಡ್ಯ ಜಿಲ್ಲೆಯ ಲೋಕಸಭಾ ಚುನಾವಣೆಯನ್ನು ಇಡೀ ದೇಶವೇ ತಿರುಗಿ ನೋಡುತ್ತಿದೆ. ರಾಜಕೀಯ ಜೀವನವನ್ನು ಮಂಡ್ಯದಿಂದ ಪ್ರಾರಂಭಿಸಿದ್ದೇನೆ. ನೀವು ನನ್ನನ್ನು ಕೈಬಿಡದೆ ಮುನ್ನಡೆಸಿ ಎಂದರು.
ಅಭಿಷೇಕ್‌ಗೌಡ ಮಾತನಾಡಿದರು. ಇದೇ ವೇಳೆ ಮುಖಂಡರಾದ ಜಯಪ್ರಕಾಶ್‌ಗೌಡ, ಮಧು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.