ಲಕ್ಷ ಮತಗಳ ಅಂತರದಲ್ಲಿ ಸುಮಲತಾ ಗೆಲುವು
ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಸುಮಲತಾಗೆ ಹೆಚ್ಚು ಮತ
Team Udayavani, May 12, 2019, 12:17 PM IST
ಮದ್ದೂರು ಪಟ್ಟಣದಲ್ಲಿ ಬಿಜೆಪಿ ತಾಲೂಕುಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ಮಾತನಾಡಿದರು.
ಮದ್ದೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ತಿಳಿಸಿದರು.
ಪಟ್ಟಣದ ಶಂಕರಪಾರ್ಟಿ ಹಾಲ್ನಲ್ಲಿ ತಾಲೂಕು ಬಿಜೆಪಿ ಸಂಘಟನೆ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ತಾಲೂಕು ಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸುಮಲತಾ ಅಂಬರೀಶ್ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಮತದಾರರು ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿದ್ದು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿದರು.
ಸುಮಲತಾಗೆ ಬೆಂಬಲ: ಜಿಲ್ಲೆಯ ಸ್ವಾಭಿಮಾನ, ಅನುಕಂಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಜಿಲ್ಲೆಯ ಯುವ ಮತದಾರರು, ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸುಮಲತಾ ಅಂಬರೀಶ್ ಅವರನ್ನು ಬೆಂಬಲಿ ಮತ ಚಲಾಯಿಸಿದ್ದಾರೆ. ಮೇ 23ರಂದು ಹೊರಬೀಳುವ ಫಲಿತಾಂಶದ ವೇಳೆ ಸ್ವಾಭಿಮಾನಕ್ಕೆ ಜಯವಾಗಲಿದೆ. ಜೆಡಿಎಸ್ ಮುಖಂಡರು ಮೈತ್ರಿಕೂಟ ಅಭ್ಯರ್ಥಿ ನಿಖೀಲ್ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸುವ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವೆಂದರು.
ಪಕ್ಷ ಬಲಪಡಿಸಿ: ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು ಮಾತನಾಡಿ, ವಿಧಾನಸಭೆ, ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಸ್ಥಳೀಯ ಸಂಸ್ಥೆ, ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಈಗಾಗಲೇ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸಮಿತಿಗಳನ್ನು ರಚಿಸಿ ಪಕ್ಷ ಬಲವರ್ಧನೆಗೆ ಮುಂದಾಗಬೇಕೆಂದರು.
ಸಭೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಉಪಾಧ್ಯಕ್ಷ ದೇವರಾಜು, ಪದಾಧಿಕಾರಿಗಳಾದ ಕೆ.ಎಂ.ರಮೇಶ್, ತ್ರಿವೇಣಿ, ಎಂ.ಸಿ.ಸಿದ್ದು, ಯೋಗೇಶ್, ಜಗನ್ನಾಥ್, ಮ.ನ. ಪ್ರಸನ್ನಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.