ಸೋಂಕು ಲಕ್ಷಣ ಇಲ್ಲದವರೇ ಹೆಚ್ಚು; ಎಲ್ಲೆಂದರಲ್ಲಿ ಅಲೆದಾಟ


Team Udayavani, Jan 17, 2022, 12:50 PM IST

ಸೋಂಕು ಲಕ್ಷಣ ಇಲ್ಲದವರೇ ಹೆಚ್ಚು; ಎಲ್ಲೆಂದರಲ್ಲಿ ಅಲೆದಾಟ

ಮಂಡ್ಯ: ಪ್ರತಿದಿನ ಶತಕ ದಾಟಿ ಕೊರೊನಾ ಸೋಂಕಿನ ಪ್ರಕರಣ ದಾಖಲಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದರೂ ಹೋಂ ಐಸೋಲೇಷನ್‌ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲದ ಸೋಂಕಿತ ಮನೆಯಲ್ಲಿ ಪ್ರತ್ಯೇಕವಾಗಿರಲು ಎಲ್ಲಾ ವ್ಯವಸ್ಥೆ ಇದ್ದರೆ ಮಾತ್ರ ಹೋಂ ಐಸೋಲೇಷನ್‌ಗೆ ಅವಕಾಶ ನೀಡಲಾಗುತ್ತದೆ.

ಲಕ್ಷಣ ಇಲ್ಲದವರೇ ಹೆಚ್ಚು: ಸೋಂಕಿನ ಲಕ್ಷಣ ಇಲ್ಲದವರೇ ಹೆಚ್ಚಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 2395 ಸಕ್ರಿಯ ಪ್ರಕರಣ ಪೈಕಿ 1595 ಮಂದಿಗೆ ಸೋಂಕಿನ ಲಕ್ಷಣಗಳಿಲ್ಲ. ಇವರೆಲ್ಲರೂ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಉಳಿದಂತೆ ಕೋವಿಡ್‌ಕೇರ್‌ ಸೆಂಟರ್‌ನಲ್ಲಿ 742, ಸರ್ಕಾರಿ ಆಸ್ಪತ್ರೆಗಳಲ್ಲಿ 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಸ್ಫೋಟ: ಜಿಲ್ಲೆಯಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಪ್ರಕರಣ ದಾಖಲಾಗುತ್ತಿದೆ. ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ತಾಲೂಕುಗಳಲ್ಲೇ ಹೆಚ್ಚುಸೋಂಕಿತರು ಕಂಡು ಬರುತ್ತಿದ್ದಾರೆ. ಜಿಲ್ಲೆಯಲ್ಲಿ ಮೊದಲ, ಎರಡನೇ ಹಾಗೂ ಮೂರನೇ ಅಲೆ ಸೇರಿದಂತೆ ಒಟ್ಟು 77008 ಪ್ರಕರಣ ದಾಖಲಾಗಿವೆ.

ಸಕ್ರಿಯ ಪ್ರಕರಣ ಹೆಚ್ಚಳ: ಪ್ರತಿದಿನ ಸಕ್ರಿಯ ಪ್ರಕರಣ ಹೆಚ್ಚಾಗುತ್ತಿದೆ. ಮಂಡ್ಯ 685, ಮದ್ದೂರು 455, ಮಳವಳ್ಳಿ 276, ಪಾಂಡವಪುರ 316, ಶ್ರೀರಂಗಪಟ್ಟಣ257, ಕೆ.ಆರ್‌.ಪೇಟೆ 162 ಹಾಗೂ ನಾಗಮಂಗಲದಲ್ಲಿ 214 ಸಕ್ರಿಯ ಪ್ರಕರಣಗಳಿವೆ.

ಪರೀಕ್ಷೆಗೆ ಮುಗಿ ಬೀಳುತ್ತಿರುವ ಯುವಕರು: ಮಂಡ್ಯ ನಗರ ಸೇರಿ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಮಾದರಿ ಸಂಗ್ರಹ ಕೇಂದ್ರಗಳಲ್ಲಿಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪರೀಕ್ಷೆಗೆ ಮುಂದಾಗುತ್ತಿದ್ದಾರೆ. ಇದರಿಂದ ಪ್ರತಿದಿನ3 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ.

ವೇಗ ಪಡೆದುಕೊಂಡ ಸೋಂಕು: ಜಿಲ್ಲೆಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಕಳೆದ ಒಂದು ವಾರದಿಂದ ಎರಡಂಕಿ ದಾಟಿಸೋಂಕು ಪ್ರಕರಣ ದಾಖಲಾಗುತ್ತಿವೆ. ಡಿಸೆಂಬರ್‌ನಲ್ಲಿ ಒಂದಂಕಿ ಪ್ರಕರಣ ದಾಖಲಾಗುತ್ತಿದ್ದವು. ನಂತರ ಜನವರಿ 1ರಿಂದ ಕೊರೊನಾ ಸೋಂಕುವೇಗ ಪಡೆದು ಕೊಂಡಿದೆ. ಜ.5ರಂದು 36 ಪ್ರಕರಣ ದಾಖಲಾದರೆ, 6ರಂದು 66 ಪ್ರಕರಣ ದಾಖಲಾಗುವ ಮೂಲಕ ಅದರ ಸಂಖ್ಯೆದುಪ್ಪಟ್ಟಾಗಿತ್ತು. 7ರಂದು 129, 8 ರಂದು 183,9ರಂದು 261, 10ರಂದು 306, 11 ರಂದು 263, 12ರಂದು 319, 13ರಂದು 406, 14ರಂದು554, 15ರಂದು 718 ಪ್ರಕರಣ ದಾಖಲಾಗಿವೆ.

ಸೋಂಕು ಹೆಚ್ಚಲು ನಿರ್ಲಕ್ಷವೇ ಕಾರಣ :

ಕೆಲವು ಸೋಂಕಿತರು ಯಾವುದೇ ವ್ಯವಸ್ಥೆ ಇಲ್ಲದಿದ್ದರೂ ಹೋಂ ಐಸೋಲೇಷನ್‌ನಲ್ಲಿ ಉಳಿದಿದ್ದಾರೆ. ಅಲ್ಲದೆ, ಗುಣಲಕ್ಷಣ ಇಲ್ಲದಿರುವುದರಿಂದ ಪ್ರತ್ಯೇಕವಾಗಿರದೆ ನಿರ್ಲಕ್ಷ್ಯ ವಹಿಸಿ ಎಲ್ಲೆಂದರಲ್ಲಿ ಅಡ್ಡಾಡುತ್ತಿರುವುದರಿಂದ ಸೋಂಕು ಹೆಚ್ಚಾಗುತ್ತಿದೆ ಎಂಬ ಆತಂಕವೂ ಹೆಚ್ಚಾಗಿದೆ. ಆಯಾ ತಾಲೂಕಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ. ಅಲ್ಲದೆ,ಸರ್ಕಾರದ ನಿರ್ದೇಶನದಂತೆ ಸೋಂಕಿನ ಲಕ್ಷಣಗಳಿಲ್ಲದವರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವಂತೆ ಸೂಚಿಸಿದೆ. ಇದೇ ಈಗ ಸೋಂಕು ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ.

ಜಿಲ್ಲೆಯಲ್ಲಿ ಪ್ರತಿದಿನ ಸೋಂಕಿನ ಪ್ರಕರಣ ಏರಿಕೆಯಾಗುತ್ತಲೇ ಇದೆ. ಸೋಂಕಿನ ಲಕ್ಷಣ ಇಲ್ಲದವರಿಗೆ ಸರ್ಕಾರದ ನಿರ್ದೇಶನದಂತೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡಲಾಗುತ್ತಿದೆ. ಸೋಂಕಿತರು ನಿಯಮ ಉಲ್ಲಂಘಿಸಬಾರದು. ಅಲ್ಲದೇ, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರ ಕಾಪಾಡಬೇಕು. – ಡಾ.ಟಿ.ಎನ್‌.ಧನಂಜಯ, ಡಿಎಚ್‌ಒ, ಮಂಡ್ಯ

-ಎಚ್‌.ಶಿವರಾಜು

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.