ಸರ್ಕಾರಿ ಯೋಜನೆ ಸದ್ಬಳಸಿಕೊಳ್ಳಿ
Team Udayavani, Aug 23, 2019, 3:22 PM IST
ಮದ್ದೂರು ತಾಲೂಕು ಬಸವನಪುರ ಗ್ರಾಮದಲ್ಲಿ ನಡೆದ ವೃತ್ತಿ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಮದ್ದೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅವು ಸದ್ಬಳಸಿಕೊಂಡು ಆರ್ಥಿಕಾಭಿವೃದ್ಧಿ ಹೊಂದುವಂತೆ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್. ನಾಗೇಶ್ ತಿಳಿಸಿದರು.
ತಾಲೂಕಿನ ಬಸವನಪುರ ಗ್ರಾಮದಲ್ಲಿ ನೆಹರು ಯುವ ಕೇಂದ್ರ, ಸರಸ್ವತಿ ಮಹಿಳಾ ಮಂಡಳಿ ಆಯೋಜಿಸಿದ್ದ ವೃತ್ತಿ ತರಬೇತಿ ಕೇಂದ್ರ ಉದ್ಘಾಟನೆ ಹಾಗೂ ಸತ್ಯ ಭಾರತ ಮತ್ತು ಜಲ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುನ್ನತ ಸಾಧನೆ ಮಾಡುತ್ತಿರುವುದು ಸಂತಸದ ವಿಚಾರ.
ಸರ್ಕಾರ ಮಹಿಳೆಯರ ಅಭ್ಯುದಯಕ್ಕೆ ಮತ್ತು ಸ್ವ ಉದ್ಯೋಗ ಕೈಗೊಳ್ಳಲು ಕೋಟ್ಯಂತರ ರೂ. ಹಣ ವೆಚ್ಚ ಮಾಡುತ್ತಿದೆ. ವಿವಿಧ ಯೋಜನೆಗಳಡಿ ಕೌಶಲ್ಯ ತರಬೇತಿಯನ್ನೂ ನೀಡುತ್ತಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕ ಸುಧಾರಣೆ ಕಂಡುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಹೈನುಗಾರಿಕೆ, ಗುಡಿ ಕೈಗಾರಿಕೆ, ಹೊಲಿಗೆ ಯಂತ್ರ, ಗಾರ್ಮೆಂಟ್ಸ್ ತರಬೇತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಹಲವು ತರಬೇತಿಗಳನ್ನು ನೀಡುತ್ತಿದ್ದು, ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾ ಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವಂತೆ ತಿಳಿಸಿದರು.
ಈ ವೇಳೆ ಗ್ರಾಪಂ ಅಧ್ಯಕ್ಷೆ ಮಮತಾ, ಮಾಜಿ ಅಧ್ಯಕ್ಷ ಕೆ.ಎನ್.ಪ್ರಭು, ಮುಖಂಡರಾದ ಹೊನ್ನಲಗೇಗೌಡ, ಎನ್.ಪ್ರಸನ್ನ, ಕೆ.ಎಸ್.ಸತೀಶ್, ಜಿಲ್ಲಾ ಸಮನ್ವಯಾಧಿಕಾರಿ ಅನಂತಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.