ಮೃತರ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ
Team Udayavani, Apr 10, 2021, 1:20 PM IST
ಮಂಡ್ಯ: ಕೋವಿಡ್ ಸೋಂಕಿನಿಂದ ಮೃತಪಟ್ಟ ರೋಗಿಗಳನ್ನು ಹೂಳದೆ ಸುಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಶಾಸಕ ಎಂ.ಶ್ರೀನಿವಾಸ್ ತಾಲೂಕು ವೈದ್ಯಾಧಿಕಾರಿಗೆ ಸೂಚನೆ ನೀಡಿದರು.
ಶುಕ್ರವಾರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಶಿವಕುಮಾರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತ ವ್ಯಕ್ತಿ ಗುರುವಾರ ಮೃತಪಟ್ಟಿದ್ದು, ಅಂತ್ಯಕ್ರಿಯೆ ನೆರವೇರಿಸಲು ಹೋದ ವೇಳೆ ಊರಿನ ಜನರೆಲ್ಲರೂ ನನಗೆ ಕರೆ ಮಾಡಿ, ಯಾವ ಮುಂಜಾಗ್ರತೆಯೂ ಇಲ್ಲದೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಆರೋಗ್ಯ ಇಲಾಖೆಯವರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.
ಗುಣಮುಖರಾಗಿದ್ದರು: ತಾಲೂಕು ವೈದ್ಯಾಧಿಕಾರಿ ಡಾ.ಜವರೇಗೌಡ ಮಾತನಾಡಿ, ಮೃತಪಟ್ಟ ವ್ಯಕ್ತಿಗೆಸೋಂಕು ಕಾಣಿಸಿಕೊಂಡಿದ್ದು ನಿಜ. ಆತನಿಗೆ ಚಿಕಿತ್ಸೆ ನೀಡಿ ಸೋಂಕು ಮುಕ್ತನಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆತ ಬೇರೆ ಕಾರಣದಿಂದ ಸಾವನ್ನಪ್ಪಿದ್ದಾನೆ. ಸೋಂಕಿನಿಂದಲ್ಲ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀನಿವಾಸ್, ಇದನ್ನು ಜನರಿಗೆ ತಿಳಿಸಿ ಮನವರಿಕೆ ಮಾಡಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೋವಿಡ್ ಲಸಿಕೆ ಪಡೆದು ಮಾದರಿಯಾಗಿ: ತಾಲೂಕು ಪಂಚಾಯತಿ ಸದಸ್ಯರು ಬಹುತೇಕ 45ವರ್ಷ ದಾಟಿದವರಾಗಿದ್ದು, ಲಸಿಕೆ ಪಡೆಯುವ ಮೂಲಕ ಮಾದರಿಯಾಗಬೇಕು ಎಂದು ಸಲಹೆ ನೀಡಿದರು. ಎಲ್ಲೆಡೆ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಈಗಾಗಲೇ ಸರ್ಕಾರ 45 ವರ್ಷ ದಾಟಿದಎಲ್ಲರಿಗೂ ಲಸಿಕೆ ನೀಡುತ್ತಿದೆ. ತಾಪಂ ಸದಸ್ಯರು ಲಸಿಕೆಹಾಕಿಸಿಕೊಳ್ಳುವ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಕೋವಿಡ್ ನಿಯಮ ಉಲ್ಲಂಘನೆ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಕೋವಿಡ್ ಚಿಕಿತ್ಸೆ ಫಲಿಸದೆ ಮೃತಪಟ್ಟರೆ ವ್ಯಕ್ತಿಯ ಮೃತ ದೇಹವನ್ನು ಹೂಳದೆ ಸಂಬಂಧಿಕರಿಗೆ ನೀಡುತ್ತಿದ್ದು, ಸುಡುವ ಮೂಲಕ ಅಂತ್ಯಸಂಸ್ಕಾರ ಮಾಡುತಿದ್ದಾರೆ. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಬಡವರಿಗೆ, ಶ್ರೀಮಂತರಿಗೆ ಒಂದು ರೀತಿಯ ನಿಯಮಗಳನ್ನು ಅನ್ವಯಿಸುತ್ತಾರೆ ಎಂದು ಆರೋಪಿಸಿದರು. ಹೂಳಬೇಕು ಎಂಬ ನಿಯಮವಿದ್ದರೂ ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಾಲೂಕು ವೈದ್ಯಾಧಿಕಾರಿ ಡಾ.ಜವರೇಗೌಡ, ಸೋಂಕಿನಿಂದ ಮೃತಪಟ್ಟವರನ್ನು ಸುಡುವುದಕ್ಕೆ ಅವಕಾಶವಿಲ್ಲ. 10 ಅಡಿ ಆಳದ ಗುಂಡಿ ತೆಗೆದು ಕಡ್ಡಾಯವಾಗಿದೆ ಹೂಳಲಾಗುತ್ತಿದೆ. ತಾಲೂಕಿನಲ್ಲಿ ಕೊರೊನಾ ಸೋಂಕಿನಿಂದ 63 ಜನರು ಮೃತಪಟ್ಟಿದ್ದು, ಎಲ್ಲರನ್ನೂ ಹೂಳಲಾಗಿದೆ. ಯಾರಿಗೂ ಸುಡುವುದಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ತಾಲೂಕಿನಾದ್ಯಂತ 45 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೋವಿಶೀಲ್ಡ್ ಲಸಿಕೆ ಹಾಕಲಾಗುತ್ತಿದೆ. ತಾಲೂಕಿಗೆ 48 ಸಾವಿರ ಡೋಸ್ ಲಸಿಕೆ ಬಂದಿದ್ದು, ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.
ಐಸೋಲೇಷನ್‌ನಲ್ಲಿ: ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಮಾತನಾಡಿ, ವಸತಿ ಶಾಲೆಯ 3 ಮಕ್ಕಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಆ ಮಕ್ಕಳ ಸಂಪರ್ಕದಲ್ಲಿದ್ದವರನ್ನು ಐಸೋಲೇಶನ್‌ನಲ್ಲಿ ಇರಿಸಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಉಪಾಧ್ಯಕ್ಷೆ ಶ್ವೇತಾ, ತಾಪಂ ಕಾರ್ಯನಿರ್ವಾಹಕ ಅಕಾರಿ ಎ.ಬಿ.ವೇಣುಗೋಪಾಲ್, ತಾಲೂಕು ಯೋಜನಾಕಾರಿ ಶ್ರೀನಿವಾಸ್, ಲೆಕ್ಕಾಕಾರಿ ಮಂಜುಳಾ ಇದ್ದರು.
ಹಂತ ಹಂತವಾಗಿ ದುರಸ್ತಿ :
ಸದಸ್ಯ ಮಂಜೇಗೌಡ ಮಾತನಾಡಿ, ತಾಲೂಕಿನ ಅಂಗನವಾಡಿಗಳ ಸ್ಥಿತಿ ಶೋಚನೀಯವಾಗಿದೆ. ಚಾವಣಿ ಕುಸಿದು ಬೀಳುವ ಹಂತದಲ್ಲಿದ್ದು, ಅವುಗಳ ದುರಸ್ತಿ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಶಿಶು ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಅಂಗನವಾಡಿಗಳ ದುರಸ್ತಿಗೆ ಖನಿಜ ನಿಗಮ ಹಾಗೂ ಶಾಸಕರ ಅನುದಾನದಿಂದ ಹಣ ಪಡೆದು ಹಂತ ಹಂತವಾಗಿ ದುರಸ್ತಿ ಮಾಡಲಾಗುತ್ತಿದೆ ಹೇಳಿದರು. ಅಧ್ಯಕ್ಷೆ ಎಚ್. ಎಸ್.ಶಿವಕುಮಾರಿ ಮಾತನಾಡಿ, ಚಿಂದಗಿರಿದೊಡ್ಡಿಯಲ್ಲಿ ಅಂಗನವಾಡಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ.
ಅಂಗನವಾಡಿ ನಿರ್ಮಾಣಕ್ಕೆ ಸೂಕ್ತ ಜಾಗ ಇದ್ದರೂ ಹೊಸ ಕಟ್ಟಡ ನಿರ್ಮಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೇರೆಡೆ ಮಕ್ಕಳಿಲ್ಲದಿದ್ದರೂ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆಮಕ್ಕಳು ದಾಖಲಾಗಿದ್ದರೂ ಕಟ್ಟಡ ಇಲ್ಲದೆ ಪರದಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಲಸಿಕೆ ಪಡೆದ ಸದಸ್ಯರು :
ಆರೋಗ್ಯ ಇಲಾಖೆ ವತಿಯಿಂದ ಕ್ಯಾತುಂಗೆರೆ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನದ ನಂತರ 45ವರ್ಷ ಮೇಲ್ಪಟ್ಟ ಸದಸ್ಯರು ಕೊರೊನಾ ಲಸಿಕೆ ಪಡೆದರು.
ನರೇಗಾ ಅಡಿ ದುರಸ್ತಿಗೆ ಮನವಿ :
ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ ಮಾತನಾಡಿ, ತಾಲೂಕಿನ ದಕ್ಷಿಣ ವಲಯದ ವ್ಯಾಪ್ತಿಯ ಪ್ರಾಥಮಿಕ, ಪ್ರೌಢ ಶಾಲೆಗಳ ಶೌಚಾಲಯ ದುರಸ್ತಿ, ಹೊಸಶೌಚಾಲಯ ನಿರ್ಮಾಣ, ಕುಡಿಯುವ ನೀರಿನವ್ಯವಸ್ಥೆ, ಶಾಲೆಗಳ ಗೋಡೆ ಕಾಮಗಾರಿ, ಅಡುಗೆ ಮನೆ ದುರಸ್ತಿ ಕಾಮಗಾರಿಗಳನ್ನು ನರೇಗಾ ಅಡಿ ಮಾಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.