ಉಪನೋಂದಣಾಧಿಕಾರಿ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ
Team Udayavani, May 25, 2023, 3:04 PM IST
ಕೆ.ಆರ್.ಪೇಟೆ: ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ ಇರುವುದರಿಂದ ಪುರಸಭಾ ವ್ಯಾಪ್ತಿಯ ಯಾವುದೇ ಆಸ್ತಿಯನ್ನು ನೋಂದಣಿ, ಅಡಮಾನ ಸೇರಿ ಯಾವುದೇ ಪರಭಾರೆ ಮಾಡಲಾಗದೇ ಜನರಿಗೆ ತೀವ್ರ ತೊಂದರೆ ಎದುರಾಗಿದೆ.
ಯಾವುದೇ ಆಸ್ತಿಯನ್ನು ಮಾರಾಟ ಮಾಡಲು, ಅಡಮಾನ ಇಟ್ಟು ಸಾಲ ಪಡೆಯುವುದು ಸೇರಿ ಸಾರ್ವಜನಿಕರ ಆಸ್ತಿಯನ್ನು ಬದಲಾವಣೆ ಮಾಡಲು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.
ಈಗ ಕಳೆದ ತಿಂಗಳಿಂದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿನ ಅಧಿ ಕಾರಿಗಳು ಪುರಸಭಾ ವ್ಯಾಪ್ತಿಯ ಯಾವುದೇ ಆಸ್ತಿಯನ್ನು ನೋಂದಣಿ ಮಾಡಲಾಗುತ್ತಿಲ್ಲ. ಮುಂದೆ ಎಷ್ಟು ದಿನಕ್ಕೆ ಸಮಸ್ಯೆ ಸರಿಯಾಗುತ್ತದೆ ಎಂಬುದನ್ನು ಹೇಳಲಾಗದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದ ಕಷ್ಟದಲ್ಲಿರುವ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಜಿಲ್ಲಾಧಿ ಕಾರಿಗಳು ಗಮನ ಹರಿಸಬೇಕಾಗಿದೆ.
ದೇವರು ಕೊಟ್ಟರೂ ಪೂಜಾರಿ ಕೊಡುತ್ತಿಲ್ಲ: ಹೇಮಾವತಿ ಬಡಾವಣೆಯಲ್ಲಿ ಅಕ್ರಮ ನಿವೇಶನ ಹಂಚಿಕೆಯ ನೆಪವೊಡ್ಡಿ ಸುಮಾರು ಎರಡು ದಶಕಗಳಿಂದ ಲೋಕಾಯುಕ್ತದಲ್ಲಿ ಪ್ರಕರಣ ಇದುದ್ದರಿಂದ ಇಲ್ಲಿನ ಆಸ್ತಿಗಳ ಯಾವುದೇ ಪರಭಾರೆಯಾಗದೇ ಇದ್ದುದರಿಂದ ನೂರಾರು ಜನರು ಮುಂಗಡ ಹಣ ಪಾವತಿಮಾಡಿ ನೋಂದಣಿ ಮಾಡಿಸಿಕೊಳ್ಳಲು ಕಾಯುತ್ತಿದ್ದರು. ಈಗ ಸರ್ಕಾರದಿಂದ ಕೆ.ಎನ್.ಕೆಂಗೇಗೌಡರ ಅವಧಿಯಲ್ಲಿ ವಿತರಣೆಯಾಗಿರುವ ನಿವೇಶನಗಳ ಪರಭಾರೆ ಮಾಡಲು ಸರ್ಕಾರದಿಂದ ಆದೇಶ ಬಂದಿದೆ.
ಅದರಂತೆ ನಿಯಮಬದ್ಧವಾಗಿರುವ ನಿವೇಶನಗಳನ್ನು ಈಗ ಪುರಸಭೆಯಿಂದ ಇ-ಖಾತೆ ಮಾಡಿಕೊಡುತ್ತಿದ್ದಾರೆ. ಆದರೆ, ನೋಂದಣಿ ಆಗುತ್ತಿಲ್ಲ. ಹತ್ತು ಹದಿನೈದು ವರ್ಷಗಳ ನಂತರ ಪುರಸಭೆಯವರು ಖಾತೆಯನ್ನು ಮಾಡಿಕೊಟ್ಟರೂ ನೋಂದಣಿ ಮಾಡಿಸಿಕೊಳ್ಳಲು ನೋಂದಣಾಧಿ ಕಾರಿಗಳ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ ಇದೆ. ಇದರಿಂದ ದೇವರು ವರಕೊಟ್ಟರೂ ಪೂಜಾರಿ ಕೊಡುತ್ತಿಲ್ಲ ಎಂಬಂತಾಗಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸರ್ಕಾರದ ಯಾವುದೇ ಕೆಲಸ ಈಗ ಆನ್‌ಲೈನ್ ಮೂಲಕವೇ ಮಾಡಬೇಕು ಎಂಬ ನಿಯಮ ಎಷ್ಟು ಅನುಕೂಲವೋ ಅಷ್ಟೇ ಅನಾನುಕೂಲ ಇದೆ. ತಾಂತ್ರಿಕ ಸಮಸ್ಯೆಗಳಿಂದ ಜನರಿಗೆ ತೊಂದರೆ ಆಗುತ್ತಿದೆ. ಸಂಬಂಧಪಟ್ಟ ಅಧಿ ಕಾರಿಗಳು ಸಮಸ್ಯೆ ಬಗೆಹರಿಸಬೇಕಾಗಿದೆ. – ಎಚ್.ಆರ್.ಲೋಕೇಶ್, ಪುರಸಭಾ ಸದಸ್ಯರು.
ನಾವುಗಳು ಸಾರ್ವಜನಿಕರಿಗೆ ನಿಯಮಾನುಸಾರ ಎಲ್ಲಾ ದಾಖಲೆಗಳನ್ನು ಸರಿಯಾಗಿ ಸಿದ್ಧಪಡಿಸಿ ನೀಡುತ್ತಿದ್ದೇವೆ. ನಮ್ಮಿಂದ ಯಾರಿಗೂ ಸಮಸ್ಯೆ ಆಗುತ್ತಿಲ್ಲ, ಉಪ ನೋಂದಣಾಧಿ ಕಾರಿಗಳ ಕಚೇರಿಯಲ್ಲಿ ಸಮಸ್ಯೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. – ಬಸವರಾಜು, ಮುಖ್ಯಾಧಿಕಾರಿ, ಪುರಸಭೆ, ಕೆ.ಆರ್.ಪೇಟೆ.
ಕೆಲವು ದಿನಗಳಿಂದ ಪುರಸಭಾ ವ್ಯಾಪ್ತಿಯ ಆಸ್ತಿಗಳ ನೋಂದಣಿ ಯಲ್ಲಿ ಸಮಸ್ಯೆ ಇರುವುದು ನನ್ನ ಗಮನಕ್ಕೂ ಬಂದಿದೆ. ಈಗ ಚಾಲ್ತಿಯ ಲ್ಲಿರುವ ಕಾವೇರಿ ತಂತ್ರಾಂಶದಲ್ಲಿ ಸಮಸ್ಯೆ ಆಗಿದೆ. ಈ ಬಗ್ಗೆ ಮೇಲಧಿ ಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಶೀಘ್ರ ಸಮಸ್ಯೆ ಬಗೆಹರಿಸಲಾಗುತ್ತದೆ. – ಕುಮಾರಸ್ವಾಮಿ, ಉಪನೊಂದಣಾಧಿಕಾರಿ.
– ಅರುಣ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.