ಕೈಯ್ಯಲ್ಲಿ ಕಬ್ಬಿನ ಜೊಲ್ಲೆ, ಮಣ್ಣು ಹಿಡಿದು ಪ್ರತಿಭಟನೆ
ದೇಶಹಳ್ಳಿ ಯುವ ರೈತರಿಂದ ಮದ್ದೂರು-ಕೊಪ್ಪ ರಸ್ತೆತಡೆ • ಜಿಲ್ಲಾಡಳಿತ, ಕಾರ್ಖಾನೆಗಳ ವಿರುದ್ಧ ತೀವ್ರ ಆಕ್ರೋಶ
Team Udayavani, May 13, 2019, 2:47 PM IST
ರೈತರು ಸರಬರಾಜು ಮಾಡಿದ ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ದೇಶಹಳ್ಳಿ ಗ್ರಾಮಸ್ಥರು ಮದ್ದೂರು-ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮದ್ದೂರು: ಕಬ್ಬಿನ ಬಾಕಿ ಪಾವತಿಸುವಂತೆ ಒತ್ತಾಯಿಸಿ ಚಾಂಷುಗರ್ ಹಾಗೂ ಕೊಪ್ಪ ಎನ್ನೆಸ್ಸೆಲ್ ಕಾರ್ಖಾನೆಗಳ ವಿರುದ್ಧ ತಾಲೂಕಿನ ದೇಶಹಳ್ಳಿ ಗ್ರಾಮದ ಯುವ ರೈತರು ಭಾನುವಾರ ಕೈಯ್ಯಲ್ಲಿ ಕಬ್ಬಿನ ಜೊಲ್ಲೆ ಹಾಗೂ ಮಣ್ಣು ಹಿಡಿದು ಮದ್ದೂರು-ಕೊಪ್ಪ ರಸ್ತೆ ತಡೆದು ವಿನೂತನ ಪ್ರತಿಭಟನೆ ನಡೆಸಿದರು.
ತಾಲೂಕಿನ ದೇಶಹಳ್ಳಿಯಲ್ಲಿ ಸ್ಥಳೀಯ ರೈತರು ಜಮಾವಣೆಗೊಂಡು ಮದ್ದೂರು-ಕೊಪ್ಪ ಮಾರ್ಗದ ರಸ್ತೆತಡೆದು, ಸರ್ಕಾರ, ಜಿಲ್ಲಾ ಹಾಗೂ ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕಬ್ಬು ಬೆಳೆಗಾರರನ್ನು ಅಲೆದಾಡಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ರೈತರು ಹಾಗೂ ಕಬ್ಬು ಬೆಳೆಗಾರರು ಕಬ್ಬಿನ ಜಲ್ಲೆ ಹಿಡಿದು ಜಿಲ್ಲಾಡಳಿತದ ವಿರುದ್ಧ ಹರಿಹಾಯ್ದರು. ಸರ್ಕಾರ ಸಕ್ಕರೆ ಕಾರ್ಖಾನೆ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದಾರೆಂದು ಆರೋಪಿಸಿದರು.
ರೈತರು ಕಾರ್ಖಾನೆಗೆ ಸರಬರಾಜು ಮಾಡಿ 7 ತಿಂಗಳು ಕಳೆದಿದ್ದರೂ ಕಾರ್ಖಾನೆ ಅಧಿಕಾರಿಗಳು ಹಣ ಪಾವತಿಸದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.
ಪ್ರತಿನಿತ್ಯ ಕಾರ್ಖಾನೆಗೆ ಅಲೆದಾಡುತ್ತಿದ್ದೇವೆ. ರೈತರು ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರಿದರು.
ಈಗಾಗಲೇ ಬೇಸಿಗೆ ರಜೆ ಮುಕ್ತಾಯಗೊಂಡು ಶಾಲಾ-ಕಾಲೇಜುಗಳು ಆರಂಭಗೊಳ್ಳುತ್ತಿದ್ದು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಬ್ಬಿನ ಬಾಕಿ ಹಣ ನಂಬಿ ಕುಳಿತಿರುವ ರೈತರೊಂದಿಗೆ ಕಾರ್ಖಾನೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿಹೆಚ್ಚು ರೈತ ಆತ್ಮಹತ್ಯೆ ಪ್ರಕರಣಗಳು ಜರುಗುತ್ತಿದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದೆ ಕೇವಲ ತಮ್ಮ ಅಧಿಕಾರ ಉಳಿಸಿಕೊಳ್ಳುವುದರಲ್ಲೇ ರೆಸಾರ್ಟ್ ರಾಜಕೀಯಕ್ಕೆ ಮುಂದಾಗುವ ಮೂಲಕ ರೈತರ ಹಿತವನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.
ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಕೇವಲ ಮೇಲುಕೋಟೆ ಕ್ಷೇತ್ರಕ್ಕಷ್ಟೇ ಮೀಸಲಾಗಿದ್ದು, ಸಂಸದರಾಗಿದ್ದ ಹಾಗೂ ಸಚಿವರಾಗಿರುವ ವೇಳೆ ಮದ್ದೂರು ಕ್ಷೇತ್ರವನ್ನು ಕಡೆಗಣಿಸಿದ್ದು ಕೂಡಲೇ ರೈತರೊಂದಿಗೆ ಚೆಲ್ಲಾಟವಾಡುತ್ತಿರುವ ಕಾರ್ಖಾನೆ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿ ಹಣ ಬಿಡುಗಡೆಗೆ ಅಗತ್ಯ ಕ್ರಮ ವಹಿಸಬೇಕು. ಈ ತಿಂಗಳ ಅಂತ್ಯದೊಳಗೆ ಕಬ್ಬಿನ ಬಾಕಿ ಹಣ ಪಾವತಿಸದಿದ್ದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸುವ ಎಚ್ಚರಿಕೆ ನೀಡಿದರಲ್ಲದೇ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬೆಸಗರಹಳ್ಳಿ ಪೊಲೀಸರು ಪ್ರತಿಭಟನಾನಿರತರ ಜತೆ ಮಾತುಕತೆ ನಡೆಸಿದರು.
ಪ್ರತಿಭಟನೆಯಲ್ಲಿ ಯುವ ಮುಖಂಡ ಗೌತಮ್, ಗ್ರಾಮದ ಮುಖಂಡರಾದ ವೆಂಕಟೇಶ್, ರಮೇಶ್, ಭರತ್, ಅರವಿಂದ್, ಮಧು, ಹರ್ಷ, ಸುಹಾಸ್, ಕವನ, ರವಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.