ಗಾಳಿಗೆ ಉರುಳಿಬಿದ್ದ ಸ್ವಾಗತ ಕಮಾನು
Team Udayavani, Jul 21, 2018, 4:18 PM IST
ಮಂಡ್ಯ: ಮತದಾರರಿಗೆ ಕೃತಜ್ಞತೆ ಅರ್ಪಿಸಲು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಲು ಹಾಕಿದ್ದ ಕಮಾನು ಉರುಳಿಬಿದ್ದ ಘಟನೆ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಡೆದಿದೆ. ಜನಸಂಚಾರವಿಲ್ಲದಿದ್ದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದಂತಾಗಿದೆ.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿರುವ ಜಯಚಾಮರಾಜೇಂದ್ರ ವೃತ್ತದಲ್ಲಿ
ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಬ್ಬಿಣದ ಕಂಬಿಗಳಿಂದ ಕೂಡಿದ ಬೃಹತ್ ಸ್ವಾಗತ ಕಮಾನನ್ನು ಅಳವಡಿಸಿ ಅದಕ್ಕೆ ಫ್ಲೆಕ್ಸಗಳನ್ನು ಅಳವಡಿಸಲಾಗಿತ್ತು. ಬೆಳಗ್ಗೆ 11.15ರ ವೇಳೆಗೆ ಬೀಸಿದ ಭಾರೀ ಗಾಳಿಯಿಂದ ಸ್ವಾಗತ ಕಮಾನು ಆಧಾರ ಕಳಚಿಕೊಂಡು ಕುಸಿದುಬಿದ್ದಿದೆ. ಈ ಮಾರ್ಗದ ರಸ್ತೆಯು ಸದಾ ಜನನನಿಬಿಡ ಹಾಗೂ ವಾಹನಗಳ ಸಂಚಾರದಿಂದ ಕೂಡಿರುತ್ತದೆ. ಅದೃಷ್ಟವಶಾತ್ ಕಮಾನು ಕುಸಿದು ಬೀಳುವ ಸಮಯದಲ್ಲಿ ಜನ ಮತ್ತು ವಾಹನಸಂಚಾರವಿರ ಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಕುಸಿದುಬಿದ್ದ ಸ್ವಾಗತ ಕಮಾನನ್ನು ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಅಲ್ಲಿಂದ ತೆರವುಗೊಳಿಸಿದರು. ಮತ್ತೆ ಅದನ್ನು ಪುನರ್ ಪ್ರತಿಷ್ಠಾಪಿಸುವುದಕ್ಕೆ ಅವಕಾಶ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.