ತಾಲೂಕಿನ ಅಭಿವೃದ್ಧಿಗೆ ಮೊದಲ ಆದ್ಯತೆ
Team Udayavani, Feb 25, 2019, 7:29 AM IST
ಕೆ.ಆರ್.ಪೇಟೆ: ತೀವ್ರವಾದ ಬರಗಾಲದ ಸಂದರ್ಭದಲ್ಲಿ ನನಗೆ ಆಶ್ರಯ ನೀಡಿ ಊಟಹಾಕಿ ಸಲಹಿ ಪೋಷಿಸಿದ ಆಲಂಬಾಡಿ ಗ್ರಾಮವನ್ನು ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಯಡಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡಿದ್ದೇನೆ. ಇದರ ಜೊತೆಗೆ ತಾಲೂಕಿನ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ಬಿಡುಗಡೆಮಾಡಿಸಿಕೊಳ್ಳುತ್ತೇನೆ ಎಂದು ಶಾಸಕ ನಾರಾಯಣಗೌಡ ಹೇಳಿದರು.
ತಾಲೂಕಿನ ಅಕ್ಕಿಹೆಬ್ಟಾಳು ಹೋಬಳಿಯ ಆಲಂಬಾಡಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಯಡಿಯಲ್ಲಿ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಜೆಡಿಎಸ್‌ನಲ್ಲೇ ನನ್ನ ಅಳಿವು ಉಳಿವು: ತಾಲೂಕಿನ ಪ್ರಬುದ್ಧ ಜನತೆ ಹಾಗೂ ಮತದಾರ ಬಂಧುಗಳು ನನ್ನ ಜೀವನದಲ್ಲಿಯೇ ಮರೆಯಲಾಗದ ಕಾಣಿಕೆ ನೀಡಿ ಎರಡು ಬಾರಿ ಶಾಸಕನನ್ನಾಗಿ ಆಯ್ಕೆಮಾಡಿ ಪ್ರೀತಿ ನೀಡಿದ್ದಾರೆ. ಜನತೆಯು ನೀಡಿದ ಅವಕಾಶವನ್ನು ಜನತೆಯ ಕಲ್ಯಾಣಕ್ಕಾಗಿ ಬಳಸುತ್ತೇನೆ. ನಾನು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ. ನನ್ನ ಅಳಿವು ಉಳಿವು ಜೆಡಿಎಸ್ ಪಕ್ಷದಲ್ಲಿ ಮಾತ್ರ. ತಮ್ಮ ರಾಜಕೀಯ ವಿರೋಧಿಗಳು ಮಾಡುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಕೈಮುಗಿದು ಮನವಿ ಮಾಡಿದರು.
ವಿಶೇಷ ಅನುದಾನ ತರುತ್ತೇನೆ: ರಾಜ್ಯ ಸರ್ಕಾರವು ಮಂಡಿಸಿರುವ ಬಜೆಟ್‌ನಲ್ಲಿ ತಾಲೂಕಿನ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನವನ್ನು ನೀಡದಿರುವುದು ನನ್ನ ಮನಸ್ಸಿಗೆ ನೋವುಂಟುಮಾಡಿದೆ. ಆದರೆ ತಾಲೂಕಿನಲ್ಲಿ ಆಗಲೇ ಬೇಕಾಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಶತಾಯಗತಾಯ ಮಾಡಿಸಿಯೇ ತೀರುತ್ತೇನೆ. ಮುಖ್ಯಮಂತ್ರಿಗಳು ನನ್ನ ಕ್ಷೇತ್ರಕ್ಕೆ 500 ಕೋಟಿ ರೂ. ವಿಶೇಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.
ಗೂಂಡಾ ರಾಜಕಾರಣಕ್ಕೆ ಅವಕಾಶ ನೀಡಲ್ಲ: ಮುಖ್ಯಮಂತ್ರಿಗಳ ಕಾಲಿಗೆ ಬೀಳುವುದಾಗಲೀ, ಅಥವಾ ಕಾಡಿಬೇಡಿಯಾದರೂ ವಿಶೇಷ ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸುತ್ತೇನೆ. ನಾನು ಶಾಸಕನಲ್ಲ ತಾಲೂಕಿನ ಜನತೆಯ ನಮ್ರ ಸೇವಕನಾಗಿದ್ದೇನೆ. ತಾಲೂಕಿನಲ್ಲಿ ಗೂಂಡಾಗಿರಿ ರಾಜಕಾರಣ ನಡೆಯಲು ನನ್ನ ಉಸಿರಿರುವವರೆಗೂ ಅವಕಾಶ ನೀಡಲ್ಲ ಎಂದು ತಿಳಿಸಿದರು.
ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಮಿ ಪೂಜೆಮಾಡಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದಾರೆ. ಅದರಂತೆ ತಾಲೂಕಿನ ದಡದಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಸಿಂಗನಹಳ್ಳಿಯಲ್ಲಿ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಆಲಂಬಾಡಿಯಲ್ಲಿ ಗ್ರಾಮವಿಕಾಸ ಯೋಜನೆ, ಅಕ್ಕಿಹೆಬ್ಟಾಳು ಗ್ರಾಮದಲ್ಲಿ ಪ.ಜಾತಿ ಮತ್ತು ವರ್ಗದ ಕಾಲೋನಿಯ ರಸ್ತೆಗಳ ಅಭಿವೃದ್ಧಿಗೆ ಭೂಮಿಪೂಜೆ ಮಾಡಿದರು.
ಮುಖಂಡರಾದ ಎ.ಆರ್.ರಘು, ಗೌರಮ್ಮಶ್ರೀನಿವಾಸ್, ದಡದಹಳ್ಳಿ ಅತೀಕ್, ಜೈನಹಳ್ಳಿ ರಾಮಕೃಷ್ಣೇಗೌಡ, ಕೋಟಿಸುಬ್ಬೇಗೌಡ, ಸಿಂಗನಹಳ್ಳಿಸುರೇಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಸ್ವಾಮಿ, ಭೂಸೇನಾ ನಿಗಮದ ಸಹಾಯಕ ಎಂಜಿನಿಯರ್ ಸಿದ್ಧಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.