ಆರು ಪಿಡಿಒಗಳ ವಿರುದ್ಧ ಕ್ರಿಮಿನಲ್ ಪ್ರಕರಣದ ತೂಗುಗತ್ತಿ
Team Udayavani, Dec 25, 2017, 6:05 AM IST
ಮಂಡ್ಯ: 2009-10 ರಿಂದ 2015-16ರವರೆಗೆ ಪಾಂಡವಪುರ ತಾಲೂಕು ಚಿನಕುರಳಿ, ಹೊನಗಾನಹಳ್ಳಿ ಮತ್ತು ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿಗಳು ನಿಯಮಬಾಹಿರವಾಗಿ ಕರ ವಿಧಿಸಿ, ಹಣ ವಸೂಲಿ ಮಾಡಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಮೂರು ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಪಂ ಸಿಇಒ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಚಿನಕುರಳಿ ಗ್ರಾಪಂ ಪಿಡಿಒ ಆರತಿಕುಮಾರಿ, ಹೊನಗಾನಹಳ್ಳಿ ಗ್ರಾಪಂ ಪಿಡಿಒ ಎಂ.ಪಿ.ರಾಜು,ಗುಮ್ಮನಹಳ್ಳಿ ಗ್ರಾಪಂ ಪಿಡಿಒ ಕೆ.ಎನ್.ಸ್ವಾಮಿಗೌಡ,ಹೊನಗಾನಹಳ್ಳಿ ಗ್ರಾಪಂ ಪಿಡಿಒ ಆಗಿದ್ದ ಹಾಲಿ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಪಂ·ಪಿಡಿಒ ಕೆ.ಮಹೇಶ, ಚಿನಕುರಳಿ ಗ್ರಾಪಂ ಪಿಡಿಒ ಆಗಿ ಕಾರ್ಯನಿರ್ವಹಿಸಿ ಈಗ ಶ್ರೀರಂಗಪಟ್ಟಣ ತಾಲೂಕು ಕೆ.ಶೆಟ್ಟಹಳ್ಳಿ ಗ್ರಾಪಂ ಪಿಡಿಒ
ಪಿ.ಶಿವಣ್ಣ, ಹೊನಗಾನಹಳ್ಳಿ ಗ್ರಾಪಂ ಪ್ರಭಾರ ಪಿಡಿಒ ಆಗಿದ್ದ ಈಗ ಲಕ್ಷ್ಮೀಸಾಗರ ಗ್ರಾಪಂ ಪಿಡಿಒ ಆಗಿರುವ ಕೆ.ಎಸ್.ನಾಗರಾಜು ಕ್ರಿಮಿನಲ್ ಪ್ರಕರಣ ತೂಗುಗತ್ತಿ ಎದುರಿಸುತ್ತಿರುವವರು.
ಇವರಲ್ಲದೆ, ಚಿನಕುರಳಿ,ಹೊನಗಾನಹಳ್ಳಿ, ಗುಮ್ಮನಹಳ್ಳಿ ಗ್ರಾಪಂ ಅಧ್ಯಕ್ಷರು, ಪಂಚಾಯಿತಿ ಕಾರ್ಯದರ್ಶಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸುವಂತೆ ಪಾಂಡವಪುರ ತಾಪಂ ಇಒಗೆ ಸೂಚನೆ ನೀಡಿದ್ದಾರೆ.
ಈ ಮೂರು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರೆಲ್ಲರೂ 2009-10 ರಿಂದ 2015-16ನೇ ಸಾಲಿನವರೆಗೆ ನಿಯಮ ಬಾಹಿರವಾಗಿ ತೆರಿಗೆ, ದರ ಹಾಗೂ ಶುಲ್ಕಗಳನ್ನು ವಿಧಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993 ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಪಂ ಆಯವ್ಯಯ ಮತ್ತು ಲೆಕ್ಕಪತ್ರ ಗಳು) ನಿಯಮಗಳು 2006ರಂತೆ ನಿಯಮಾನು ಸಾರ ವೆಚ್ಚ ಮಾಡದೆ ದುರುಪಯೋಗ ಪಡಿಸಿಕೊಂಡಿರುವುದು ಕಂಡು ಬಂದಿದೆ.
ಸಮರ್ಪಕ ದಾಖಲೆ ಒದಗಿಸಿಲ್ಲ: ಮುಖ್ಯಾಧಿಕಾರಿಗಳ ಲೆಕ್ಕ ತಪಾಸಣೆ ವರದಿ ಆಧರಿಸಿ ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಮತ್ತು ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ನೋಟಿಸ್‌ಗೆ ಅವರು ಸಲ್ಲಿಸಿರುವ ವಿವರಣೆಯನ್ನು ಒಪ್ಪಲು ಸಮರ್ಪಕ ದಾಖಲೆಗಳನ್ನು ಒದಗಿಸಿಲ್ಲವೆಂದು ತಿಳಿಸಿದ್ದಾರೆ. ಈ ಕಾರಣದಿಂದ ಚಿನಕುರಳಿ, ಹೊನಗಾನಹಳ್ಳಿ ಹಾಗೂ ಗುಮ್ಮನಹಳ್ಳಿ ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಹಾಗೂ ಕಾರ್ಯದರ್ಶಿಗಳ ವಿರುದ್ಧ ಇಲಾಖಾ ವಿಚಾರಣೆ ಕೈಗೊಂಡು ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಹಾಗೂ ಗ್ರಾಪಂ ಅಧ್ಯಕ್ಷರು,ಪಂಚಾಯಿತಿ ಅಭಿವೃದಿಟಛಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ ವಿರುದಟಛಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ.
ಸಂಸದರ ಸಂಬಂಧಿ ವಿರುದ್ಧವೂ ಕ್ರಿಮಿನಲ್ ಕೇಸ್ ಚಿನಕುರಳಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಸಂಸದ ಸಿ.ಎಸ್.ಪುಟ್ಟರಾಜು ಸಹೋದರನ ಮಗ ಸಿ.ಅಶೋಕ್ ವಿರುದಟಛಿವೂ ಕ್ರಿಮಿನಲ್ ಪ್ರಕರಣದ ತೂಗುಗತ್ತಿ ಬಿದ್ದಿದೆ. ಅಕ್ರಮ ಕಲ್ಲುಗಣಿಗಾರಿಕೆ ನಡೆಸಲು ಜಿಲ್ಲಾಡಳಿತವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪದ ಮೇಲೆ ಸಂಸದ ಸಿ.ಎಸ್.ಪುಟ್ಟರಾಜು ಇದೀಗ ಕಾನೂನು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅವರ ನಂತರ ಅಕ್ರಮಕ್ಕೆ ಕುಮ್ಮಕ್ಕು ನೀಡಿದವರೂ ಈಗ ಕಾನೂನು ಸಂಕಷ್ಟ ಎದುರಿಸುವುದು ಅನಿವಾರ್ಯವಾಗಿದೆ.
3.30 ಕೋಟಿ ರೂ. ತೆರಿಗೆ ಹಣ ವಸೂಲಿ ಪಾಂಡವಪುರ ತಾಲೂಕಿನ ಚಿನಕುರಳಿ, ಹೊನಗಾನಹಳ್ಳಿ ಹಾಗೂ ಗುಮ್ಮನಹಳ್ಳಿ ಪಂಚಾಯಿತಿಗಳ 1764 ಆಸ್ತಿಗಳಲ್ಲಿ 3.30 ಕೋಟಿ ರೂ. ಮೊತ್ತದ ಆಸ್ತಿ ತೆರಿಗೆ ಸಂಗ್ರಹಿಸಿ ದುರುಪಯೋಗ ಮಾಡಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಪಂಚಾಯಿತಿಗಳು 2009-10ರಿಂದ 2015-16ರವರೆಗೆ ನಿಯಮ ಬಾಹಿರವಾಗಿ ತೆರಿಗೆ, ಶುಲ್ಕ ವಸೂಲಿ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣದ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಎನ್. ನಾಗಲಾಂಬಿಕಾ ದೇವಿ ಜಿಪಂ ಲೆಕ್ಕಪತ್ರ ವಿಭಾಗದಿಂದ ತನಿಖೆ ನಡೆಸುವಂತೆ ಜಿಪಂ ಸಿಇಒ ಬಿ.ಶರತ್‌ಗೆ ಸೂಚಿಸಿದ್ದರು. ಕಾನೂನು ಬಾಹಿರವಾಗಿ ಸಂಗ್ರಹಿಸಿದ್ದ ತೆರಿಗೆ, ದರ ಮತ್ತು ಶುಲ್ಕವನ್ನು ನಿಯಮಾನುಸಾರ ವೆಚ್ಚ ಮಾಡದೆ
ನಿಯಮಾವಳಿಗೆ ವಿರುದ್ಧವಾಗಿ ವೆಚ್ಚ ಮಾಡಿರುವುದು ತನಿಖೆಯಿಂದ ದೃಢಪಟ್ಟಲ್ಲಿ ಸಂಬಂಧಿಸಿದ ಗ್ರಾಪಂ ಅಧ್ಯಕ್ಷರು, ಪಿಡಿಒ, ಗ್ರಾಪಂ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆದೇಶದಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.