ಕೆಡಿಪಿ ಸಭೆ ಇರುವುದೇ ಗ್ರಾಮೀಣರ ಅಭಿವೃದ್ಧಿಗಾಗಿ

Team Udayavani, Nov 2, 2019, 2:44 PM IST

mandya-tdy-2

ನಾಗಮಂಗಲ: ಗ್ರಾಮೀಣ ಪ್ರದೇಶದ ಅರ್ಹ ಫ‌ಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆ ತಲುಪಿಸಿ ಅವರನ್ನು ಬಡತನದಿಂದ ಮುಕ್ತಗೊಳಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿಯೇ ಪ್ರಗತಿ ಪರಿಶೀಲನೆ ಸಭೆ ನಡೆಸುವುದು ಉಪಯುಕ್ತ ಕಾರ್ಯಕ್ರಮ ಎಂದು ಹೊಣಕೆರೆ ಗ್ರಾಪಂ ಅಧ್ಯಕ್ಷ ಜಯೇಂದ್ರ ತಿಳಿಸಿದರು. ತಾಲೂಕಿನ ಹೊಣಕೆರೆ ಗ್ರಾಪಂ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ದ್ವಿತೀಯ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಸರ್ಕಾರದ ತಳಪಾಯ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಿಗುವ ಯೋಜನೆ ಗಳ ಬಗ್ಗೆ ಜನಪ್ರತಿನಿಧಿಗಳಾದ ನಮಗೆ ಸರಿಯಾದ ಮಾಹಿತಿ ಸಿಗುತ್ತಿರಲಿಲ್ಲ. ಅಭಿವೃದ್ಧಿ ಕಾರ್ಯ ಕ್ರಮಗಳನ್ನು ಸಾಕಾರಗೊಳಿಸಲು ಗ್ರಾಪಂ ಮಟ್ಟದಲ್ಲಿ ನಡೆಯುವ ವಿವಿಧ ಇಲಾಖೆಗಳ ಅಧಿಕಾರಿಗಳ ಕೆಡಿಪಿ ಸಭೆ ಪೂರಕವಾಗಿದೆ ಎಂದು ಹೇಳಿದರು. ಗ್ರಾಪಂ ಎನ್ನುವುದು ಸರ್ಕಾರದ ಒಂದು ತಳಪಾಯವಿದ್ದಂತೆ. ಸರ್ಕಾರ ಯಾವುದೇ ಯೋಜನೆ ರೂಪಿಸಿದರೂ, ಅದು ಗ್ರಾಪಂ ಮೂಲಕವೇ ಜನರಿಗೆ ತಲುಪಬೇಕು. ಯೋಜನೆಗೆ ಫ‌ಲಾನುಭವಿ ಸಿಗಬೇಕೆಂದಾದರೆ ಅದು ಗ್ರಾಮೀಣ ಪ್ರದೇಶದಲ್ಲಿಯೇ ಹೊರತು, ನಗರ ಪ್ರದೇಶದಲ್ಲಿ ಸಿಗಲು ಸಾಧ್ಯವಿಲ್ಲ. ಕ್ಷೇತ್ರದ ಶಾಸಕರೂ ಸೇರಿದಂತೆ ಜಿಪಂ ಹಾಗೂ ತಾಪಂ ಜನಪ್ರತಿನಿಧಿಗಳಿಗೆ ಹಳ್ಳಿಗಳ ಸಮಸ್ಯೆ ಮತ್ತು ವಿವಿಧ ಯೋಜನೆಗಳಿಗೆ ನಿಜವಾದ ಫ‌ಲಾನುಭವಿಗಳು ಯಾರೆಂದು ಗೊತ್ತಿರುವುದಿಲ್ಲ. ಹಾಗಾಗಿ ಗ್ರಾಪಂ ಮಟ್ಟದಲ್ಲಿ ಕೆಡಿಪಿ ಸಭೆಗಳನ್ನು ನಡೆಸುವ ಮೂಲಕ ಇಲಾಖೆಯ ಕಾರ್ಯಕ್ರಮ ಹಾಗೂ ಪ್ರಗತಿ ಕುರಿತು ಸಮಗ್ರವಾಗಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಮಾಹಿತಿಯೊಂದಿಗೆ ಸಭೆಗೆ ಹಾಜರಗಾಬೇಕು: ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ್‌ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯಲ್ಲಿ ಹಿಂದಿನ ಹಾಗೂ ಪ್ರಸಕ್ತ ಸಾಲಿನಲ್ಲಿ ಯಾವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಇಲಾಖೆ ಕೈಗೊಂಡಿದೆ ಎಂಬ ಪರಿಪೂರ್ಣ ಮಾಹಿತಿಯೊಂದಿಗೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಗ್ರಾಮ ಸ್ವರಾಜ್ಯಕ್ಕಾಗಿ ಸ್ಥಳೀಯ ಸರ್ಕಾರವಾಗಿರುವ ಗ್ರಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೆ ಅಭಿವೃದ್ಧಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಭೇಟಿ ಕೊಟ್ಟು ಇಲಾಖೆ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳುವ ಕುರಿತು ರೈತರು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಶಾಲೆ ಬಿಟ್ಟಿರುವ ಮಗುವನ್ನು ವಾಪಸ್‌ ಕರೆತನ್ನಿ: ಗ್ರಾಪಂ ವ್ಯಾಪ್ತಿಯ ಅಲ್ಪಹಳ್ಳಿಯಲ್ಲಿ ಒಂದು ಮಗು ಶಾಲೆ ಬಿಟ್ಟಿದೆ. ಆ ಮಗುವನ್ನು ಪುನಃ ಶಾಲೆಗೆ ಕಳುಹಿಸುವಂತೆ ಶಾಲೆಯ ಎಲ್ಲ ಶಿಕ್ಷಕರು ಮತ್ತು ಎಸ್‌ ಡಿಎಂಸಿ ಸದಸ್ಯರು ಮಗುವಿನ ಪೋಷಕರನ್ನು ಮನವೋಲಿಸಿದರೂ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಶಾಲೆಬಿಟ್ಟಿರುವ ಮಗುವನ್ನು ಪುನಃ ಶಾಲೆಗೆ ಕರೆತರುವಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕರು ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಇಲಾಖೆ ಪ್ರಗತಿ ಕುರಿತು ಹೋಬಳಿಯ ಕೃಷಿ ಅಧಿಕಾರಿ ಸಿ.ಪ್ರಥ್ವಿಶ್ರೀ ಮಾಹಿತಿ ನೀಡಿದರು.

ಸಭೆಗೆ ಕೆಲ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವಹಿಲು ಮೇಲಧಿಕಾರಿಗಳಿಗೆ ಪತ್ರ ಬರೆಯುವಂತೆ ಗ್ರಾಪಂ ಪಿಡಿಒ ಸುರೇಶ್‌ ಅವರಿಗೆ ಅಧ್ಯಕ್ಷ ಜಯೇಂದ್ರ ಸೂಚಿಸಿದರು.

ಗ್ರಾಪಂ ಕಾರ್ಯದರ್ಶಿ ಮಹದೇವ, ಸಿಬ್ಬಂದಿಯಾದ ರಾಮು, ವೈಕುಂಠ, ರೂಪಾ, ನಟರಾಜ್‌ ಹಾಗೂ ಸೆಸ್ಕಾಂ, ಕಂದಾಯ, ಶಿಕ್ಷಣ, ಆರೋಗ್ಯ, ಗ್ರಂಥಾಲಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.