ರೈತರಿಗೆ ಅನುಕೂಲ ಕಲ್ಪಿಸುವುದೇ ಉದ್ದೇಶ
ಸಕಾಲದಲ್ಲಿ ಕಬ್ಬು ಕಟಾವು, ರೈತರಿಗೆ ನಿಗದಿತ ಬೆಲೆ ನೀಡಬೇಕು: ಸುಮಲತಾ
Team Udayavani, May 11, 2020, 6:05 PM IST
ಸಂಸದೆ ಸುಮಲತಾ ಭೇಟಿ ನೀಡಿ ಆದಿ ಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದರು.
ನಾಗಮಂಗಲ: ಮೈಷುಗರ್ ಕಾರ್ಖಾನೆ ಯಾರು ನಡೆಸುತ್ತಾರೆ ಅನ್ನುವುದು ಮುಖ್ಯವಲ್ಲ. ಸಕಾಲದಲ್ಲಿ ಕಬ್ಬು ಕಟಾವು ಮಾಡಿ, ರೈತರಿಗೆ ನಿಗದಿತ ಬೆಲೆ ಸಿಗುವುದು ಮುಖ್ಯ ಎಂದು ಸಂಸದೆ ಸುಮಲತಾ ಹೇಳಿದರು. ಆದಿಚುಂಚನಗಿರಿ ಕ್ಷೇತ್ರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರ್ಖಾನೆ ಖಾಸಗಿಯವರು ನಡೆಸಿದರೆ ರೈತರಿಗೆ ಒಳ್ಳೆಯದಾಗಬಹುದು ಅನ್ನುವುದು
ನನ್ನ ಅಭಿಪ್ರಾಯ. ಸರ್ಕಾರ ನಡೆಸುತ್ತಿದ್ದ ಇಷ್ಟು ದಿನಗಳಲ್ಲಿ ಏನೇನು ಆಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇನ್ನು ಮುಂದೆ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂಬುದೇ ನನ್ನ ಹೇಳಿಕೆಯ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದರು.
ಜನಪ್ರತಿನಿಧಿಗಳ ವಿರೋಧ ತಪ್ಪು: ಕೋವಿಡ್ ಸೋಂಕಿತರು, ಸಂಪರ್ಕಿತರನ್ನು ಸಮೀಪದಲ್ಲಿ ಕ್ವಾರಂಟೈನ್ ಮಾಡಿದರೆ ಸೋಂಕು ಹರಡುವುದಿಲ್ಲ. ಕೋವಿಡ್ ಸೋಂಕಿನ ತಿಳಿವಳಿಕೆ, ಮಾಹಿತಿ ನೀಡಬೇಕಾದ ಜವಾಬ್ದಾರಿ ಯುತ ಜನಪ್ರತಿನಿಧಿಗಳೇ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುವುದು ಸರಿಯಲ್ಲ ಎಂದರು. ಬಳಿಕ ಶ್ರೀಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ತಟ್ಟಹಳ್ಳಿ: ತಾಲೂಕಿನ ತಟ್ಟಹಳ್ಳಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಆಹಾರ ಪದಾರ್ಥ ಗಳ ಕಿಟ್ ವಿತರಿಸಿದ ಮಾತನಾಡಿ, ಸಾರ್ವ ಜನಿಕರು ಅನಗತ್ಯವಾಗಿ ಹೊರಗೆ ಓಡಾಟ ಮನೆಯಲ್ಲಿಯೇ ಇದ್ದು ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು. ಮನ್‌ಮುಲ್ ಅಧ್ಯಕ್ಷ ರಾಮಚಂದ್ರು, ನಿರ್ದೇಶಕ ನೆಲ್ಲಿಗೆರೆ ಬಾಲು, ಪಾಂಡವಪುರ ಎಸಿ ಶೈಲಜಾ, ತಹಶೀಲ್ದಾರ್ ಕುಂಞ ಅಹಮದ್, ಡಾ.ಧನಂಜಯ, ತಾಪಂ ಇಒ ಅನಂತರಾಜು, ಸಿಪಿಐ ರಾಜೇಂದ್ರ ಇತರರಿದ್ದರು.
ಸಾತೇನಹಳ್ಳಿಗೂ ಭೇಟಿ: ನಿಬಂಧಿತ ವಲಯ ಸಾತೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂಸದೆ ಸುಮಲತಾ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.