ಮೈಷುಗರ್‌ ಸಂಪೂರ್ಣ ಖಾಸಗೀಕರಣವಿಲ್ಲ


Team Udayavani, May 17, 2020, 5:18 AM IST

mysugar-khasagi

ಮಂಡ್ಯ: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯಸರ್ಕಾರ, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಮಾತ್ರ ಖಾಸಗಿಯವರಿಗೆ ವಹಿಸಲು ನಿರ್ಧರಿಸಿದೆ. ಇಡೀ ಕಂಪನಿಯ ಮಾಲೀಕತ್ವವನ್ನು ರಾಜ್ಯಸ ರ್ಕಾರದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿ ದ್ದು, ಸಂಪೂರ್ಣವಾಗಿ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ  ನಿರ್ಧಾರ ಮಾಡಿಲ್ಲವೆಂದು ಖಚಿತ ಮೂಲಗಳು ತಿಳಿಸಿವೆ.

ಪುನಶ್ಚೇತನಕ್ಕೆ ನಿರ್ಧಾರ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕಂಪನಿ ವಿಚಾರವನ್ನು ಚರ್ಚೆಗೆ ತರಲು ಅಧಿಕಾರಿಗಳಿಗೆ ಮುಖ್ಯಮಂತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನಷ್ಟೇ ಖಾಸಗಿ ಯವರಿಗೆ  ವಹಿಸಿ ಮೈಷುಗರ್‌ ಕಾರ್ಖಾ ನೆಯನ್ನು ಪುನಶ್ಚೇತನಗೊಳಿಸಲು ನಿರ್ಧರಿಸ ಲಾಗಿದೆ. ಕಂಪನಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರಲಿದೆ ಎನ್ನಲಾಗಿದೆ. ಮೈಷುಗರ್‌ ಖಾಸಗೀಕರಣಗೊಳಿಸಲು ರಾಜ್ಯಸರ್ಕಾರ ಈ ಮೊದಲು ನಿರ್ಧಾರ ಕೈಗೊಂಡಿತ್ತು. ಎಲ್ಲ ಸರ್ಕಾರಗಳು ಕಾರ್ಖಾನೆ ಅಭಿವೃದಿಟಛಿಗೆ 350 ಕೋಟಿ ರೂ.ಗಿಂತ ಹೆಚ್ಚು ಹಣ ನೀಡಿದ್ದರೂ ಇದುವರೆಗೆ ಕಂಪನಿ ಪುನಶ್ಚೇ ತನ ಕಾಣಲಿಲ್ಲ. ಹಾಗಾಗಿ ಖಾಸಗಿಯವರಿಗೆ ವಹಿಸುವುದೇ ಉತ್ತಮ ಎಂಬ ನಿರ್ಧಾರಕ್ಕೆ ಬಂದಿತ್ತು.

ತೀವ್ರ ವಿರೋಧ: ರಾಜ್ಯಸರ್ಕಾರ ಕೈಗೊಂಡ ನಿರ್ಧಾರಕ್ಕೆ ಜಿಲ್ಲೆಯ ರೈತ ಮುಖಂಡರು, ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿ ದ್ದರು. ಮೈಷುಗರ್‌ ಕಂಪನಿ ಖಾಸಗೀಕರ ಣಗೊಳಿಸಿದಲ್ಲಿ ಕಾರ್ಖಾನೆಯ ಸುಮಾರು 250 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿ ಕೈಬಿಟ್ಟು ಹೋಗುವ ಆತಂಕವಿದೆ. ಕಂಪ ನಿಯ ನಿರ್ವಹಣೆ ಮತ್ತು ಕಾರ್ಯಾಚರಣೆಯ ನ್ನಷ್ಟೇ ಖಾಸಗಿಯವರಿಗೆ ವಹಿಸಿ ಕಾರ್ಖಾ ನೆಯ ಮಾಲೀಕತ್ವ ಸರ್ಕಾರದ ಬಳಿಯೇ ಇರಬೇಕು ಎಂದು  ಒತ್ತಾಯಿಸಿದ್ದರು.

ರೈತರ ಅನುಕೂಲಕ್ಕಾಗಿ: ಮೈಷುಗರ್‌ ಖಾಸಗೀಕರಣಗೊಳಿಸುವ ಸರ್ಕಾರದ ನಿರ್ಧಾರವನ್ನು ಸಂಸದೆ ಸುಮಲತಾ ಹಾಗೂ ಕೆಲ ಕಬ್ಬುಬೆಳೆಗಾರರು ಬೆಂಬಲಿಸಿದ್ದರು. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಿ ಸಕಾಲದಲ್ಲಿ ಕಬ್ಬು ಅರೆಯುವಂತಾದರೆ ರೈತರಿಗೆ ಹೆಚ್ಚು ಅನು ಕೂಲವಾಗಲಿದೆ. ಹಾಗಾಗಿ ಕಂಪನಿ ಯನ್ನು ಖಾಸಗೀಕರಣಗೊಳಿಸಲು ಬೆಂಬಲಿಸಿದ್ದರು.

ಕಬ್ಬು ಸಾಗಣೆ ವೆಚ್ಚ ಅಧಿಕ: ಮೈಷುಗರ್‌ ಹಾಗೂ  ಪಿಎಸ್‌ಎಸ್‌ಕೆ ಕಾರ್ಖಾನೆ ಸ್ಥಗಿತ ಗೊಂಡಿದ್ದರಿಂದ ಈ ವ್ಯಾಪ್ತಿಯ ಕಬ್ಬನ್ನು ಹೊರಗಿನ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸುವು ದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ. ನೆರೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸುವ ಕಬ್ಬು ಸಾಗಣೆ ವೆಚ್ಚ  ಹೆಚ್ಚಿದ್ದು, ಸರ್ಕಾರ ಅದನ್ನು ಭರಿಸಲಾಗದ ಸ್ಥಿತಿಯಲ್ಲಿದೆ. ಕಳೆದ ವರ್ಷದ ಕಬ್ಬು ಸಾಗಣೆ ವೆಚ್ಚ 4.50 ಕೋಟಿ ರೂ. ಹಣವನ್ನು ಬೆಳೆಗಾರರಿಗೆ ಸರ್ಕಾರ ನೀಡದೆ ಬಾಕಿ ಉಳಿಸಿಕೊಂಡಿದೆ. ಇದರಿಂದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಈ ಎರಡೂ ಕಾರ್ಖಾನೆಗಳ ಕಾರ್ಯಾರಂಭ ತುರ್ತು ಅಗತ್ಯ, ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.