ರಾಜಕಾರಣದಲ್ಲಿ ಡೆಡ್‌ಲೈನ್ ಇಲ್ಲ: ಸುಮಲತಾ
Team Udayavani, May 30, 2020, 5:21 AM IST
ಮದ್ದೂರು: ರಾಜಕಾರಣದಲ್ಲಿ ಯಾವುದೇ ಡೆಡ್‌ಲೈನ್ ಹಾಕಿಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ. ಇದು ನಿರಂತರ ಕಲಿಕಾ ಕ್ಷೇತ್ರವಾಗಿರುವುದರಿಂದ ನಾನೂ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದೇನೆ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಶುಕ್ರವಾರ ಅಂಬರೀಶ್ ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತ ನಾಡಿ, ಸಂಸದೆಯಾದ ಒಂದೇ ವರ್ಷದಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವು ದಿಲ್ಲ. ಎಲ್ಲವನ್ನೂ ಸಂಪೂರ್ಣವಾಗಿ ತಿಳಿದು ಕ್ಷೇತ್ರದಲ್ಲಿ ಪ್ರವಾಸ ನಡೆಸಿ ಪರಿಹಾರ ಕಂಡುಕೊಳ್ಳಲಾ ಗುವುದು ಎಂದರು.
ಸಂಸದರ ನಿಧಿ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದು ನಮ್ಮ ಕಾರ್ಯವೈಖರಿಯನ್ನು ಸಾಬೀತು ಪಡಿಸುತ್ತದೆ ಎಂದು ತಮ್ಮ ಅಧಿಕಾರದ ಸದ್ಬಳಕೆಯನ್ನು ಸಮರ್ಥಿಸಿಕೊಂಡರು. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡಿಲ್ಲ. ಮುಂಬೈನಿಂದ ಬಂದವರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಅದು ಜಿಲ್ಲಾದ್ಯಂತ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದ ಕಾರಣ ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ.
ಕೋವಿಡ್-19 ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿ ವರ್ಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಿದೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.