Nagamangala Case; ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ
ಅಂಗಡಿಗಳು, ಮನೆ ಮಾಲಕರಿಗೆ ನೆರವಿನ ಭರವಸೆ
Team Udayavani, Sep 13, 2024, 12:03 AM IST
ನಾಗಮಂಗಲ (ಮಂಡ್ಯ): ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಲ್ಲು ತೂರಾಟ, ಗಲಭೆ ಸ್ಥಳಕ್ಕೆ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ನಗರದ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಆಕಸ್ಮಿಕವಾಗಿ ನಡೆದ ಘಟನೆ, ಅನಂತರ ದೊಡ್ಡಮಟ್ಟದ ಗಲಭೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 54ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕೋಮು ಸೌಹಾರ್ದತೆ ಕದಡುವುದನ್ನು ಸರಕಾರ ಸಹಿಸಲ್ಲ ಎಂದರು.
ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಮಾಲಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವಕ್ಷೇತ್ರವಾಗಿದ್ದು, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈ ಘಟನೆಯನ್ನು ವಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.