ಅಗ್ರಿ ಟೂರಿಸಂ ಯೋಜನೆಗೆ ಚಿಂತನೆ
Team Udayavani, Aug 17, 2020, 1:05 PM IST
ಕೆ.ಆರ್.ಪೇಟೆ: ಕೃಷಿಗೆ ಪ್ರವಾಸೋದ್ಯಮದ ಸ್ಪರ್ಶ ನೀಡಲು ಅಗ್ರಿ ಟೂರಿಸಂ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಚಿಂತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಯಾಂತ್ರಿಕ ಕೃಷಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಗ್ರಿ ಟೂರಿಸಂ ಯೋಜನೆ ರೂಪಿಸುವ ಬಗ್ಗೆ ಈಗಾಗಲೇ ತಾವು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತನಾಡಿದ್ದೇನೆ. ಇದಕ್ಕೆ ಪೂಜ್ಯರ ಮಾರ್ಗದರ್ಶನದಲ್ಲಿ ಯೋಜನೆ ತರಲು ತೀರ್ಮಾನಿಸಲಾಗಿದೆ. ಕೃಷಿ ಬಗ್ಗೆ ಇತ್ತೀಚಿನ ಜನರಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.
ಮಂಡ್ಯದಲ್ಲಿ ಪ್ರಾಯೋಗಿಕ ಅನುಷ್ಠಾನ: ಹೊರದೇಶ ಸೇರಿದಂತೆ ದೇಶದ ಹಲವರಿಗೆ ಕೃಷಿ ಬಗ್ಗೆ ಗೊತ್ತಿಲ್ಲ. ಈ ಯೋಜನೆಯಲ್ಲಿ ಭತ್ತ ನಾಟಿ, ಕಟಾವು ಸೇರಿದಂತೆ ಎತ್ತಿನಗಾಡಿಯಲ್ಲಿ ಸಾಗಾಣಿಕೆಯನ್ನು ಸೇರಿಸಲಾಗಿದೆ. ಭತ್ತ ಕೃಷಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆಯುವಂತೆ ಮಾಡಲಾಗುತ್ತದೆ. ಮಂಡ್ಯದಲ್ಲೇ ಮೊದಲಿಗೆ ಪ್ರಾಯೋಗಿಕ ಅನುಷ್ಠಾನ ಆಗಲಿದೆ ಎಂದು ಹೇಳಿದರು.
ಎರಡು ಸಾವಿರ ರೂ. ಖರ್ಚು: ಪೂಜ್ಯರು ಸಾವಿರಾರು ಕಾರ್ಯಕ್ರಮ ಆಯೋಜಿಸಿದ್ದಾರೆ. ಕೂಲಿ ಕಾರ್ಮಿಕರ ಸಮಸ್ಯೆ, ದುಬಾರಿ ವೆಚ್ಚಕ್ಕೆ ಕಡಿವಾಣ ಹಾಕಿ ರೈತರಿಗೆ ಅನುಕೂಲ ಮಾಡಲು, ಅವರು ಯಂತ್ರ ಆಧಾರಿತ ಕೃಷಿ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ 15000 ಎಕರೆಯಲ್ಲಿ ಭತ್ತನಾಟಿಗೆ ಮುಂದಾಗಿದ್ದಾರೆ. ಪ್ರತಿ ಎಕರೆಗೆ ಮೂರು ಸಾವಿರ ಖರ್ಚು ಆಗುತ್ತಿದ್ದು, ಈ ಪದ್ಧತಿಯಿಂದ ಎರಡು ಸಾವಿರ ಖರ್ಚು ಆಗುತ್ತದೆ. ಯೋಜನೆ ಅನುಷ್ಠಾನಕ್ಕೆ ಸಂಸ್ಥೆಯ ಸದಸ್ಯರಿಗೆ ಸಾಲ ಸೌಲಭ್ಯ, ಹಸಿರು ಎಲೆಗೊಬ್ಬರ ತಯಾರಿಕೆಗೆ ಸಹಾಯಧನ ನೀಡುತ್ತಿದ್ದಾರೆ. ಅದನ್ನು ಸದ್ಬಳಕೆ ಮಾಡಿಕೊಂಡು ರೈತರು ಕೃಷಿಗೆ ತಗುಲುವ ಖರ್ಚನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಧರ್ಮಸ್ಥಳದಂತೆ ಬೇರೆ ಸಂಸ್ಥೆಗಳು ಕೆಲಸ ಮಾಡಿದರೆ ರಾಜ್ಯದಲ್ಲಿ ಸಮಸ್ಯೆನೇ ಇರುತ್ತಿರಲಿಲ್ಲ. ಧರ್ಮಸ್ಥಳದ ಜತಗೆ ಬೇರೆ ಸಂಸ್ಥೆಗಳು ಕೈಜೋಡಿಸಬೇಕು. ನನ್ನ ಯಾವುದೇ ವ್ಯವಹಾರಕ್ಕೂ ಮುನ್ನಾ ಧರ್ಮಸ್ಥಳಕ್ಕೆ ಮೊದಲ ಚೆಕ್ ನೀಡುತ್ತೇನೆ ಎಂದು ಸಚಿವರು ಹೇಳಿದರು.
ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಜಿಪಂ ಸದಸ್ಯ ಬಿ.ಎಲ್.ದೇವರಾಜು ಅಧ್ಯಕ್ಷತೆ ವಹಿಸಿದ್ದರು.ಜಿಪಂ ಸದಸ್ಯ ರಾಮದಾಸ್, ಸಂಸ್ಥೆಯ ವಿಭಾಗೀಯ ಅಧಿಕಾರಿ ಪಿ.ಗಂಗಾ ಧರ್ ರೈ, ಕೃಷಿ ಜಂಟಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್, ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ್, ತಾಂತ್ರಿಕ ಅಧಿಕಾರಿ ಶ್ರೀಧರ್, ಪುರಸಭೆ ಮಾಜಿ ಸದಸ್ಯ ಎಚ್.ಟಿ.ರಾಜು, ಸಂಸ್ಥೆಯ ಜಿಲ್ಲಾ ನಿರ್ದೇಶಕ ವಿನಯಕುಮಾರ್ ಸುವರ್ಣ, ಕೃಷಿ ಅಧಿಕಾರಿ ನಿಂಗಪ್ಪ ಅಗಸರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.