ಕಾರ್ಯಕರ್ತರು ಸೂಚಿಸುವ ಅಭ್ಯರ್ಥಿಗೇ ಟಿಕೆಟ್
Team Udayavani, Sep 13, 2019, 12:48 PM IST
ಕೆ.ಆರ್.ಪೇಟೆ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಉದ್ಘಾಟಿಸಿದರು. ಮಾಜಿ ಪ್ರಧಾನಿ ದೇವೇಗೌಡ ಮತ್ತಿತರರು ಹಾಜರಿದ್ದರು.
ಕೆ.ಆರ್.ಪೇಟೆ: ಪಕ್ಷದ ಆಧಾರ ಸ್ತಂಭವಾಗಿರುವ ಕಾರ್ಯಕರ್ತರು ಸೂಚಿಸುವ ವ್ಯಕ್ತಿಗೇ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇವೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭರವಸೆ ನೀಡಿದರು.
ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಿಷ್ಠಾವಂತ ಕಾರ್ಯಕರ್ತರೇ ಪಕ್ಷದ ಜೀವಾಳ. ಮುಂದಿನ ಉಪ ಚುನಾವಣೆಯಲ್ಲಿ ಕಾರ್ಯಕರ್ತರು ಒಮ್ಮತದಿಂದ ಸೂಚಿಸುವ ವ್ಯಕ್ತಿಗೆ ಪಕ್ಷದ ಟಿಕೆಟ್ ನೀಡುತ್ತೇನೆ. ದೇಶದ ನಾಲ್ಕು ರಾಜ್ಯಗಳ ಚುನಾವಣೆ ಜೊತೆಯಲ್ಲಿ ರಾಜ್ಯದ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾನು ಚುನಾವಣೆಯಲ್ಲಿ ಪರಾವಭವಗೊಂಡ ದಿನದಿಂದಲೇ ಪಕ್ಷ ಸಂಘಟನೆ ಆರಂಭಿಸಿದ್ದೇನೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.
ಚುನಾವಣಾ ವೆಚ್ಚ ಕೇಳಿ ತಪ್ಪು ಮಾಡಿದೆ: ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆ.ಆರ್.ಪೇಟೆ ತಾಲೂಕಿನಿಂದ ಸ್ಪರ್ಧೆ ಮಾಡಬೇಕು ಎನ್ನುವವರು ಮುಂಗಡವಾಗಿ ಚುನಾವಣೆ ನಡೆಸಲು ಬೇಕಿರುವ ಹಣ ಮುಂದಿಟ್ಟು ಟಿಕೆಟ್ ಕೇಳಿ ಎಂದು ನಿಬಂಧನೆ ವಿಧಿಸಿದೆ. ಅದರಿಂದ ಕೆಲ ನಿಷ್ಠಾವಂತ ಕಾರ್ಯಕರ್ತರು ಚುನಾವಣೆ ಸ್ವರ್ಧೆಯಿಂದ ಹಿಂದೆ ಸರಿದಿದ್ದರು. ಅಂದು ನಾನು ಮಾಡಿದ ತಪ್ಪಿನಿಂದಾಗಿ ಮಾಜಿ ಶಾಸಕ ಪ್ರಕಾಶ್, ಬಿ.ಎಲ್.ದೇವರಾಜ್ ಮತ್ತಿತತರು ಹಿಂದೆ ಸರಿದಿದ್ದರು. ನನಗೀಗ ತಪ್ಪಿನ ಅರಿವಾಗಿದೆ ಎಂದರು.
ಕೊಟ್ಟಮಾತು ಉಳಿಸಿಕೊಂಡ ಎಚ್‌ಡಿಕೆ: ಕುಮಾರಸ್ವಾಮಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದ್ದರೂ ಕೊಟ್ಟಮಾತಿನಂತೆ ರೈತರ ಸಾಲಮನ್ನಾ ಮಾಡುವ ಐತಿಹಾಸಿಕ ನಿರ್ಧಾರ ಕೈಗೊಂಡರು. ರೈತರ 40 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮನ್ನಾ ಮಾಡಿ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿಯೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪಕ್ಷದಿಂದ ಮಾಜಿ ಸ್ಪೀಕರ್ ಕೃಷ್ಣ, ಮಾಜಿ ಶಾಸಕ ಪ್ರಕಾಶ್ ಮತ್ತು ದೇವರಾಜು ಅವರಿಗೆ ಅನ್ಯಾಯವಾಗಿದೆ.
ಒಂದು ಬಾರಿ ಟಿಕೆಟ್ ಕೊಟ್ಟು ಗೆಲ್ಲಿಸಿದ್ದಾಗಿದೆ. ಅಷ್ಟೇ ಸಾಕು ಎಂದು ಎಷ್ಟೇ ಹೇಳಿದರೂ ನನ್ನ ಮಾತನ್ನು ಕೇಳದೇ ಕುಮಾರಸ್ವಾಮಿ ಮುಂಬೈವಾಲ ನಾರಾಯಣಗೌಡನಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ ತಪ್ಪಿಗೆ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ ಎಂದು ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಉದ್ಘಾಟಿಸಿದರು. ರಾಜ್ಯದ ಮಾಜಿ ಸಾರಿಗೆ ಸಚಿವ ಹಾಗೂ ಶಾಸಕ ಡಿ.ಸಿ.ತಮ್ಮಣ್ಣ, ಶಾಸಕ ಡಾ.ಕೆ.ಅನ್ನದಾನಿ, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಟಿ. ಮಂಜು, ಸದಸ್ಯರಾದ ರಾಮದಾಸು, ಬಿ.ಎಲ್. ದೇವರಾಜು, ಜೆ.ಪ್ರೇಮ ಕುಮಾರಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು, ಎಪಿಎಂಸಿ ಅಧ್ಯಕ್ಷ ನಾಗರಾಜು, ಮಾಜಿ ಅಧ್ಯಕ್ಷ ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಟಿ. ಗಂಗಾಧರ್, ಮುಖಂಡರಾದ ಜಾನಕೀರಾಂ, ಬಸ್ ಕೃಷ್ಣೇಗೌಡ, ಶೀಳನೆರೆ ರಮೇಶ್, ಅಗ್ರಹಾರಬಾಚಹಳ್ಳಿ ನಾಗೇಶ್, ಮಂಜೇಗೌಡ, ಕೆ.ಎಸ್.ಸಂತೋಷ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.