ಬೀದಿಬದಿ ವ್ಯಾಪಾರ ತೆರವಿಗೆ 2 ದಿನ ಗಡುವು: ಮುರುಗೇಶ್
Team Udayavani, Dec 20, 2019, 2:32 PM IST
ಮದ್ದೂರು: ಪಟ್ಟಣದ ಪೇಟೇಬೀದಿ ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರ ವಹಿವಾಟಿನಿಂದ ಜನ ಮತ್ತು ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ ಬೀದಿಬದಿ ವ್ಯಾಪಾರಸ್ಥರು ಸಾರ್ವಜನಿಕ ಸ್ಥಳಗಳಾದ ನ್ಯಾಯಾಲಯ, ಲೋಕೋಪಯೋಗಿ ವಸತಿ ಗೃಹ, ತಾಪಂ ಕಚೇರಿ ರಸ್ತೆ, ಸರ್ಕಾರಿ ಆಸ್ಪತ್ರೆ, ಶಾಲಾ ಆವರಣಗಳ ಬಳಿ ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದು, ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಜತೆಗೆ ವಾಹನ ದಟ್ಟಣೆ ಮಿತಿ ಮೀರಿದ್ದು, ಕಚೇರಿಗೆ ಪ್ರತಿನಿತ್ಯ ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿವೆ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಸ್ಥರು ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಪುರಸಭೆ ವತಿಯಿಂದ ನಿರ್ಮಿಸಿರುವ ಮಾರುಕಟ್ಟೆಯಲ್ಲಿ ಹಣ್ಣು, ಹೂ, ತರಕಾರಿ ಮತ್ತಿತರ ಪದಾರ್ಥಗಳನ್ನು ಮಾರಾಟ ಮಾಡಬೇಕು. ಇದಕ್ಕೆಂದೇ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರುಕಟ್ಟೆ ಬಿಟ್ಟು ರಸ್ತೆಗಳಲ್ಲಿ ಮಾರಾಟಕ್ಕೆ ಕುಳಿತರೆ ಕೂಡಲೇ ಕಾನೂನಾತ್ಮಕ ಕ್ರಮ ವಹಿಸುವ ಎಚ್ಚರಿಕೆ ನೀಡಿದರು.
ಮುಂದಿನ ಎರಡು ದಿನದೊಳಗೆ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ, ಪುರಸಭೆ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ವಹಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.