ತಂಬಾಕು ನಿಷೇಧ ನಾಮಫಲಕ ಕಡ್ಡಾಯ
ಆಯೋಗ್ಯ ಇಲಾಖೆ ನೇತೃತ್ವದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆ
Team Udayavani, May 8, 2019, 3:47 PM IST
ಶ್ರೀರಂಗಪಟ್ಟಣ ತಾಲೂಕು ಕಚೇರಿ ಆವರಣದಲ್ಲಿ ಆಯೋಗ್ಯ ನೇತೃತ್ವದಲ್ಲಿ ಡಿಎಚ್ಒ ಡಾ.ಮಂಚೇಗೌಡ ಇಲಾಖೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. Copyright 2019 © Udayavani |
ಶ್ರೀರಂಗಪಟ್ಟಣ: ತಾಲೂಕಿನ ಎಲ್ಲಾ ಅಂಗಡಿಗಳ ಮುಂದೆ ತಂಬಾಕು ಮಾರಾಟ ಕಾಯ್ದೆಯ ನಾಮಫಲಕ ಹಾಕಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆಯೋಗ್ಯ ಇಲಾಖೆ ನೇತೃತ್ವದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೇ 31ರೊಳಗಾಗಿ ಎಲ್ಲಾ ಅಂಗಡಿಗಳ ಮುಂದೆ ತಂಬಾಕು ನಿಯಮ ಕಾಯ್ದೆ ಅನುಷ್ಠಾನಗೊಳಿಸಬೇಕು. ಈ ಎಲ್ಲಾ ಪ್ರಯತ್ನಗಳು ಈಗಾಗಲೇ ಜಿಲ್ಲೆಯಲ್ಲಿ ಕಾರ್ಯನಿರತವಾಗಿವೆ. ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸಹಕರಿಸಿ, ಆಯಾ ತಾಲೂಕು ವ್ಯಾಪ್ತಿ ಗ್ರಾಮಗಳಲ್ಲಿ ಶಾಲಾ ಆವರಣ ವಿವಿಧ ಕಚೇರಿಗಳ ಬಳಿ ತಂಬಾಕು ನಿಷೇಧ ಫಲಕ ಹಾಕಬೇಕು. ಜೊತೆಗೆ 18 ವರ್ಷ ತಂಬದ ಯುವಕರಿಗೆ ತಂಬಾಕು ಮಾರಾಟ ಮಾಡದಂತೆ ಎಲ್ಲಾ ಅಂಗಡಿಗಳ ಬಳಿ ಜಾಗೃತಿ ಫಲಕ ಹಾಕಿಸಬೇಕು. ಕಾನೂನು ನಿಯಮ ಮೀರಿ ಮಾರಾಟ ಮಾಡಿದ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರ ನೆರವು ಪಡೆಯಬೇಕು ಎಂದು ತಿಳಿಸಿದರು.
ಪಟ್ಟಣದಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ತಂಬಾಕು ಪದಾರ್ಥ ವಶಕ್ಕೆ ಪಡೆದು, ಮಾರಾಟ ಮಾಡುವ ನಿಷೇಧದ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಂಗಡಿ ಮಾಲೀಕರಿಗೆ ದಂಡ ಹಾಕಿದರು.
ಉಪ ತಹಶೀಲ್ದಾರ್ ಸ್ವಾಮೀಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ, ಜಿಲ್ಲಾ ಸಲಹೆಗಾರ ತಿಮ್ಮರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.