ಇಂದು ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರಕ್ಕೆ ಆಗಮನ
Team Udayavani, Jun 18, 2018, 12:41 PM IST
ಪಾಂಡವಪುರ: ಮೇಲುಕೋಟೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಚುನಾವಣೆ ನಂತರ ವಿದೇಶಕ್ಕೆ ತೆರಳಿದ್ದು, ಸೋಮವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾಗತ ಕೋರಲು ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪಟ್ಟಣದ ಪಿಡಬ್ಲ್ಯುಡಿ ಪ್ರವಾಸಿ ಮಂದಿರದ ಆವರಣದಲ್ಲಿ ಕರೆಯಲಾಗಿದ್ದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ರೈತ ಯುವ ನಾಯಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧದ ಬಳಿಯಿಂದ ಸುಮಾರು 5 ಸಾವಿರ ಬೈಕ್ ರ್ಯಾಲಿ ಮೂಲಕ ಪಾಂಡವಪುರ ಪಟ್ಟಣಕ್ಕೆ ಕರೆತರವಂತೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಪಂ ಮಾಜಿ ಸದಸ್ಯರಾದ ಎ.ಎಲ್.ಕೆಂಪೂಗೌಡ, ಕೆ.ಟಿ.ಗೋವಿಂದೇಗೌಡ, ಪಿಎಸ್‌ಎಸ್‌ಕೆ ಉಪಾಧ್ಯಕ್ಷ ಹರವು ಪ್ರಕಾಶ್, ಸ್ವರಾಜ್ ಇಂಡಿಯಾ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ, ರೈತ ಮುಖಂಡರಾದ ಕೆ.ಎಸ್.ಪ್ರಕಾಶ್, ಎಚ್.ಎನ್.ವಿಜಯಕುಮಾರ್, ಅಮೃತಿ ರಾಜಶೇಖರ್, ಮೊದಲಿಯಾರ್ ವೆಂಕಟೇಶ್, ಹಿರೇಮರಳಿ ರವಿಕುಮಾರ್, ಬೇವಿನಕುಪ್ಪೆ ಯೋಗೇಶ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: 10 ಲಕ್ಷ ರೂ. ವಂಚಿಸಿದ ಪೋಸ್ಟ್ ಮಾಸ್ಟರ್ ಪುತ್ರ!
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!