ಇಂದು ಜಿಲ್ಲೆಗೆ ನರೇಂದ್ರ ಮೋದಿ ರಥ ಆಗಮನ


Team Udayavani, Jan 29, 2019, 7:24 AM IST

indu.jpg

ಕೆ.ಆರ್‌.ಪೇಟೆ: ದೇಶದ ಪ್ರಧಾನ ಮಂತ್ರಿಗಳಾಗಿ ವಿಶ್ವವೇ ಮೆಚ್ಚುವಂತಹ ಕಾರ್ಯ ಮಾಡುತ್ತಿರುವ ನರೇಂದ್ರಮೋದಿಯವರು ಮತ್ತೂಮ್ಮೆ ದೇಶದ ಪ್ರಧಾನ ಮಂತ್ರಿಗಳಾ ಗಬೇಕು ಎಂದು ಯುವಜನತೆ ಸೇರಿದಂತೆ ಎಲ್ಲರ ಆಶಯವಾಗಿದ್ದು ಅದಕ್ಕಾಗಿ ಮೋದಿ ಯವರು ಸಾಧನೆಗಳ ಕಿರುಹೊತ್ತಿಗೆಯನ್ನು ಹೊಂದಿರುವ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಮಂಗಳವಾರ, ಬುಧವಾರ ಎರಡು ದಿನಗಳಕಾಲ ಮಂಡ್ಯ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಮಂಡ್ಯ ಜಿಲ್ಲೆಯ ಟೀಮ್‌ಮೋದಿ ತಂಡದ ಸದಸ್ಯ ಪ್ರಮೋದ್‌ ತಿಳಿಸಿದ್ದಾರೆ.

ಮೋದಿ ಪ್ರಧಾನ ಮಂತ್ರಿಗಳಾದ ಮೇಲೆ ದೇಶದಲ್ಲಿ ಭಯೋತ್ಪಾದನೆ, ಭ್ರಷ್ಟಾಚಾರ ಗಣಿನೀಯವಾಗಿ ಕಡಿಮೆಯಾಗಿದೆ. ಪಾಕಿಸ್ತಾನದ ವಿರುದ್ಧ ಸರ್ಜಿಲಕ್‌ಸ್ಟ್ರೈಕ್‌ ಮತ್ತು ನೋಟು ಅಮಾನ್ಯ ಎರಡು ರೀತಿಯ ದಾಳಿಮಾಡಿದ್ದರಿಂದ ಪಾಕಿಸ್ತಾನ ನಮ್ಮ ದೇಶವನ್ನು ಎದುಸಿರಲಾಗಿದೆ ಮೂಲೆ ಸೇರುವಂತೆ ಮಾಡಿದ್ದಾರೆ.

ಮಾತೆಯರು ಗೌರವದಿಂದ ಶೌಚಾಲಯ ಬಳಸುವಂತೆ ಕ್ರಾಂತಿ, ಉಚಿತ ಅಡುಗೆ ಅನಿಲ ಸಂಪರ್ಕ, ಆರೋಗ್ಯ ಕಾರ್ಡ್‌ ಸೇರಿದಂತೆ ಬಡಕು ಟುಂಬಗಳಿಗೆ ಹತ್ತಾರು ಯೋಜನೆಗಳನ್ನು ತಂದಿದ್ದಾರೆ. ವಿಶ್ವದ ಬಲಿಷ್ಠ ದೇಶಗಳನ್ನು ನಮ್ಮ ಸ್ನೇಹವನ್ನು ಬಯಸುವಂತೆ ಮಾಡಿರುವ ಮೋದಿಯವರು ಮತ್ತೂಮ್ಮೆ ಪ್ರಧಾನಿ ಯಾಗಬೇಕು ಎಂದು ಉದ್ದೇಶದಿಂದ ನಾವುಗಳು ಪಕ್ಷಾತೀತವಾಗಿ ಮೋದಿ ಟೀಮ್‌ ರಚಿಸಿಕೊಂಡು ರಾಜ್ಯದಲ್ಲಿ ರಥಯಾತ್ರೆ ಆರಂಭಿಸಿದ್ದೇವೆ ಎಂದು ತಿಳಿಸಿದರು.

ಮದ್ದೂರಿನಿಂದ ಚಾಲನೆ: ಮತ್ತೂಮ್ಮೆ ಮೋದಿ ರಥ 29 ಮಂಗಳವಾರ ಬೆಳಗ್ಗೆ 9 ಗಂಟೆಗೆ ಮದ್ದೂರು ತಲುಪಿ ಸಾರ್ವಜನಿಕ ಪ್ರದರ್ಶನ ನೀಡಿದ ನಂತರ 11 ಗಂಟೆಗೆ ಮಂಡ್ಯ, 1.30 ಗಂಟೆಗೆ ಕೆರಗೋಡು, 3 ಗಂಟೆಗೆ ಬಸರಾಳು, 4 ಗಂಟೆಗೆ ನಾಗಮಂಗಲ, 5.30 ಗಂಟೆಗೆ ಬೆಳ್ಳೂರು, 7 ಗಂಟೆಗೆ ಕೆ.ಆರ್‌.ಪೇಟೆ ತಲುಪಲಿದೆ.

30 ನೇ ಬುಧವಾರ 9 ಗಂಟೆಗೆ ಹರಳಕುಪ್ಪೆ, 10 ಗಂಟೆಗೆ ಕ್ಯಾತನಹಳ್ಳಿ, 10.15 ಗಂಟೆಗೆ ಪಾಂಡವಪುರ, 12.30 ಗಂಟೆಗೆ ಶ್ರೀರಂಗಪಟ್ಟಣ, 2 ಗಂಟೆಗೆ ಅರಕೆರೆ, 3.30 ಗಂಟೆಗೆ ಬನ್ನೂರು, 5 ಗಂಟೆಗೆ ಕಿರಗಾವಲು, 7 ಗಂಟೆಗೆ ಮಳವಳ್ಳಿ ತಲುಪಲಿದೆ. ಎಲ್ಲಾ ಸ್ಥಳಗಳಲ್ಲಿಯೂ ಮೋದಿ ಸಾಧನೆಗಳನ್ನು ಸಾರ್ವಜನಿಕರ ಪ್ರದರ್ಶನವನ್ನು ನೀಡಲಾ ಗುತ್ತದೆ ಎಂದು ಪ್ರಮೋದ್‌ ತಿಳಿಸಿದರು.

ಆಧುನಿಕ ಸ್ಪರ್ಶ ಹೊಂದಿರುವ ರಥ: ಮತ್ತೂಮ್ಮೆ ಮೋದಿ ರಥಯಾತ್ರಗೆ ಸಿದ್ಧಪಡಿಸಿರುವ ರಥವನ್ನು ಆತ್ಯಾಧುನಿಕವಾಗಿ ಸಿದ್ಧಪಡಿಸಲಾಗಿದ್ದು, ವಾಹನದಲ್ಲಿ ದೊಡ್ಡ ಟಿ.ವಿ. ಪರದೆ ಇದ್ದು ಮೋದಿಯವರ ಸಾಧನೆಯನ್ನು ವಿಡಿಯೋ ಚಿತ್ರ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಮಾಡಲಾಗುತ್ತದೆ.

ಪೂರ್ಣ ವಿದ್ಯುತ್‌ ವ್ಯವಸ್ಥೆ ಮಾಡಿರುವುದರಿಂದ ರಾತ್ರಿ ವೇಳೆಯಲ್ಲಿಯೂ ಸಾರ್ವಜನಿಕರನ್ನು ಆಕರ್ಷಿಸುವ ಜೊತೆಗೆ ಮೋದಿಯವರು ಸಾಧನೆಯನ್ನು ಜನರಿಗೆ ತಲುಪಿಸುವಂತೆ ರಥದಲ್ಲಿಯೇ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಮೋದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.