ನಾಳೆ ಪುತಿನ ಕಾವ್ಯ, ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ
ಪುತಿನ ಸ್ಮರಣಾರ್ಥ ರಾಜ್ಯಮಟ್ಟದ ಕವಿ-ಕಾವ್ಯ ಸಮ್ಮಿಲನ ಹಾಗೂ ಕವನ ಸಂಕಲನ ಬಿಡುಗಡೆ ಸಮಾರಂಭ
Team Udayavani, Apr 30, 2019, 3:19 PM IST
ಪಾಂಡವಪುರ: ಜಿಲ್ಲಾ ಯುವ ಬರಹಗಾರರ ಬಳಗದ ಪಾಂಡವಪುರ ತಾಲ್ಲೂಕು ಘಟಕದ ವತಿಯಿಂದ ಮೇ 1 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ವಿಜಯ ಬಿಇಡಿ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿ ದಿವಂಗತ ಪು.ತಿ.ನರಸಿಂಹಾಚಾರ್ ಸ್ಮರಣಾರ್ಥ ರಾಜ್ಯ ಮಟ್ಟದ ಕವಿ-ಕಾವ್ಯ ಸಮ್ಮಿಲನ, ಕವನ ಸಂಕಲನ ಬಿಡುಗಡೆ, ಪುತಿನ ಕಾವ್ಯ ಪ್ರಶಸ್ತಿ ಹಾಗೂ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬಳಗದ ತಾಲೂಕು ಅಧ್ಯಕ್ಷ ರಂಗನಾಥ್ ಕ್ಯಾತನಹಳ್ಳಿ ತಿಳಿಸಿದ್ದಾರೆ.
ಉದ್ಘಾಟನೆಯನ್ನು ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ನೆರವೇರಿಸುವರು. ವಿದ್ಯಾ ಪ್ರಚಾರ ಸಂಘದ ಗೌರವ ಕಾರ್ಯದರ್ಶಿ ಕೆ.ವಿ. ಬಸವರಾಜು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಆಶಯ ಭಾಷಣ ಮಾಡುವರು. ಡಾ. ಪ್ರದೀಪ್ ಕುಮಾರ್ ಹೆಬ್ರಿ ಅವರಿಗೆ ‘ಪುತಿನ ಕಾವ್ಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.
ಪುಸ್ತಕ ಬಿಡುಗಡೆ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ರಾಮೇಗೌಡರು ಯುವಕವಿ ಕೆ.ಬಿ.ಮಹೇಶ್ ಸೂರಮ್ಮನಹಳ್ಳಿಯವರ ‘ಬಿಸಿಲ ಮಲ್ಲಿಗೆ’ ಕವನ ಸಂಕಲನ ಬಿಡುಗಡೆ ಮಾಡುವರು. ತಾಲೂಕು ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಧನ್ಯಕುಮಾರ್, ಯುವ ಸಾಹಿತಿ ರಂಗಸ್ವಾಮಿ ಗಾಡಿಗ್, ಶಿಕ್ಷಕ ಕೆ.ಬಿ.ಕುಮಾರ್, ಅರಸೀಕೆರೆ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಜಯಕುಮಾರ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕವಿ-ಕಾವ್ಯ ಸಮ್ಮಿಲನ: ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕವಿ-ಕಾವ್ಯ ಸಮ್ಮಿಲನದ ಮೊದಲನೆಯ ಕವಿಗೋಷ್ಠಿಯು ಕೆ.ಆರ್. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ದ. ಸತೀಶ್‌ಚಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹುಣಸೂರಿನ ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ. ಎಂ.ಎನ್.ಕವಿತಾ ಚಾಲನೆ ನೀಡುವರು ರು. ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ 2ನೇ ಕವಿಗೋಷ್ಠಿ ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎ.ಆರ್.ಮದನಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಹಾಸನದ ಕವಯಿತ್ರಿ ಮಮತಾ ಅರಸೀಕೆರೆ ಚಾಲನೆ ನೀಡುವರು. ಈ ಎರಡು ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 70 ಮಂದಿ ಕವಿ-ಕವಯಿತ್ರಿಯರು ಸ್ವರಚಿತ ಕವನ ವಾಚನ ಮಾಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.