ಸಂಚಾರ ನಿಯಮ ಪಾಲಿಸುವುದು ಕಡ್ಡಾಯ
Team Udayavani, Aug 5, 2019, 4:55 PM IST
ಮದ್ದೂರು: ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕೆಂದು ಬೆಸಗರಹಳ್ಳಿ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕ ಮಹದೇವಯ್ಯ ತಿಳಿಸಿದರು.
ತಾಲೂಕಿನ ಬೆಸಗರಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡಿಟ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಕೈಗೆ ಯಾವುದೇ ವಾಹನ ಕೊಡಬಾರದು. ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಜೋಶ್‌ನಲ್ಲಿ ಅತಿವೇಗದಲ್ಲಿ ಮಕ್ಕಳು ವಾಹನ ಚಲಾಯಿಸುವುದರಿಂದ ಅಪಘಾತಗಳಾಗುವ ಸಂಭವವಿದೆ. ವಾಹನ ಸವಾರರು ನಿಯಮಗಳನ್ನು ಪಾಲಿಸುವ ಜತೆಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಹೆಚ್ಚು ಯುವಕರೇ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. ಧೂಮಪಾನ, ಮದ್ಯಪಾನ, ಜಾಲಿ ರೈಡಿಂಗ್, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ವಿದ್ಯಾರ್ಥಿಗಳು ಸ್ಥಳೀಯರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಪ್ರಾಂಶುಪಾಲ ಪ್ರಕಾಶ್, ಪೇದೆಗಳಾದ ನಾಗೇಶ, ಪ್ರದೀಪ್‌ಕುಮಾರ್, ಕೆಪಿಎಸ್ ಸದಸ್ಯ ಸುರೇಶ್, ಶಿಕ್ಷಕರಾದ ಶುಭಮಣಿ, ರಾಜಮ್ಮ, ರಾಜಶೇಖರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.