ಕೊಕ್ಕರೆ ಬೆಳ್ಳೂರಿನಲ್ಲಿ ಮತ್ತೆರಡು ಪೆಲಿಕಾನ್ ಸಾವು
Team Udayavani, Mar 11, 2018, 11:59 AM IST
ಭಾರತೀನಗರ (ಮಂಡ್ಯ): ಇಲ್ಲಿಗೆ ಸಮೀಪದ ಕೊಕ್ಕರೆಬೆಳ್ಳೂರಿನಲ್ಲಿ ಪೆಲಿಕಾನ್ ಹಕ್ಕಿಗಳ ಸರಣಿ ಸಾವು ಮುಂದುವರಿದಿದ್ದು, ಮತ್ತೆರಡು ಕೊಕ್ಕರೆಗಳು ಮೃತಪಟ್ಟಿವೆ. ಇದರೊಂದಿಗೆ ಕಳೆದ ಮೂರು ತಿಂಗಳಿಂದ ಒಟ್ಟಾರೆ 43 ಪೆಲಿಕಾನ್‌ಗಳು ಮೃತಪಟ್ಟಿದಂತಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಜಂತು ಹುಳುಗಳ ಬಾಧೆಯಿಂದಾಗಿ ಕೆಲವು ಪೆಲಿಕಾನ್ ಹಕ್ಕಿಗಳು ಅಸುನೀಗಿವೆ. ಮತ್ತೆ ಕೆಲವು ಕಲುಷಿತ ನೀರು ಕುಡಿದು ಸಾವನ್ನಪ್ಪಿರುವುದು ದೃಢಪಟ್ಟಿತ್ತು. ಈಗ ಮತ್ತೆ ಕೊಕ್ಕರೆಗಳು ಅಸ್ವಸ್ಥವಾಗಿ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಸೂಳೆಕೆರೆ ಹಾಗೂ ಮಾದರಹಳ್ಳಿ ಕೆರೆಗಳಲ್ಲಿ ಪೆಲಿಕಾನ್ ಹಕ್ಕಿಗಳು ಅಸ್ವಸ್ಥಗೊಳ್ಳುವುದು ಮಾಮೂಲಿಯಾಗಿ ಬಿಟ್ಟಿದೆ. ಈಗಾಗಲೇ ಹಲವು ವಿಜ್ಞಾನಿಗಳ ತಂಡಗಳು ಹಕ್ಕಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವರದಿ ನೀಡಿವೆ. ಆದರೂ, ಹಕ್ಕಿಗಳ ಸಾವನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. “ಹಕ್ಕಿಗಳ ನಿರಂತರ ಸಾವು ನಮಗೆ ತುಂಬಾ ನೋವು ಉಂಟು ಮಾಡಿದೆ.
ಸಾವನ್ನು ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೆಜ್ಜಾರ್ಲೆ ಬಳಗದ ಅಧ್ಯಕ್ಷ ಲಿಂಗೇಗೌಡ ಮನವಿ
ಮಾಡಿಕೊಂಡಿದ್ದಾರೆ. “ಮಾ.12ರಂದು ದೆಹಲಿಯ ಡಬ್ಲ್ಯೂಡಬ್ಲ್ಯೂಎಫ್ ಸೇರಿ ಬೆಂಗಳೂರು, ಉತ್ತರ ಪ್ರದೇಶ, ಕೊಯಮತ್ತೂರು, ಮುಂಬೈ, ಕೊಡಗಿನಿಂದ ತಜ್ಞರ ತಂಡವನ್ನು ಕರೆಸಿ, ಸಂಪೂರ್ಣ ಅಧ್ಯಯನ ನಡೆಸಿ, ಸಾವಿನ
ನಿಖರತೆ ತಿಳಿಯಲಾಗುವುದು’ ಎಂದು ಮೈಸೂರಿನ ವನ್ಯಜೀವಿ ವಿಭಾಗದ ಮುಖ್ಯಸ್ಥ ಏಡುಕೊಂಡಲು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.