ನಿಮಿಷಾಂಭ ದೇವಸ್ಥಾನಕ್ಕೆ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಭೇಟಿ
Team Udayavani, Jul 8, 2022, 12:45 PM IST
ಮಂಡ್ಯ: ವಿದ್ಯುತ್ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕ್ರಿಶನ್ ಪಾಲ್ ಗುರ್ಜರ್ ರವರು ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀ ನಿಮಿಷಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಂತರ ಮಾತನಾಡಿ ಅವರು ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಶ್ರೀ ನಿಮಿಷಾಂಭ ದೇವಿಯ ಆಶೀರ್ವಾದ ಪಡೆದು ಪ್ರಾರಂಭಿಸಲಾಗುತ್ತಿದೆ ಎಂದರು.
ಇದೇ ವೇಳೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಪಿ.ಎಂ.ಕಿಶಾನ್ ಯೋಜನೆ, ಸಾರ್ವಜನಿಕರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್, ಕುಡಿಯುವ ನೀರು ಒದಗಿಸಲು ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಯೋಜನೆಗಳು ಸಮರ್ಪಕವಾಗಿ ತಲುಪಿದಿಯೇ ಎಂಬುದರ ಕುರಿತು ಸಂವಾದ ಮಾಡಲು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೇಮಕ ಮಾಡಲಾಗಿದೆ ಎಂದರು.
ಕೇಂದ್ರ ಸಚಿವರು ಪ್ರತಿತಿಂಗಳು 3 ದಿನ ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಫಲಾನುಭವಿಗಳೊಂದಿಗೆ ಸಂವಾದ ಮಾಡಿ ಅವರ ಸ್ಥಿತಿಗತಿಯನ್ನು ತಿಳಿಯಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ ಎನ್. ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.